Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಾರಾಹಿ ಕುಡಿಯುವ ನೀರಿನ ಯೋಜನೆ:...

ವಾರಾಹಿ ಕುಡಿಯುವ ನೀರಿನ ಯೋಜನೆ: ತ್ವರಿತಗತಿಯ ಕಾಮಗಾರಿಗೆ ಉಡುಪಿ ಡಿಸಿ ಡಾ.ವಿದ್ಯಾಕುಮಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ22 Aug 2023 8:58 PM IST
share
ವಾರಾಹಿ ಕುಡಿಯುವ ನೀರಿನ ಯೋಜನೆ: ತ್ವರಿತಗತಿಯ ಕಾಮಗಾರಿಗೆ ಉಡುಪಿ ಡಿಸಿ ಡಾ.ವಿದ್ಯಾಕುಮಾರಿ ಸೂಚನೆ

ಉಡುಪಿ: ಉಡುಪಿ ನಗರವೂ ಸೇರಿದಂತೆ ಹಲವು ತಾಲೂಕು ಗಳಿಗೆ ಕುಡಿಯುವ ನೀರು ಒದಗಿಸುವ ವಾರಾಹಿ ಕುಡಿಯುವ ನೀರಿನ ಯೋಜನೆಯನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಿ ಜನರಿಗೆ ಕುಡಿಯುವ ನೀರು ಒದಗಿಸಲು ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಜಿಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಇಂದು ಕರ್ನಾಟಕ ನೀರಾವರಿ ನಿಗಮದ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಾರಾಹಿ ಕುಡಿಯುವ ನೀರು ಯೋಜನಾ ಪ್ರದೇಶಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಅವರು ಈ ಸೂಚನೆ ನೀಡಿದರು.

ಪೂರ್ವನಿಗಧಿಯಂತೆ ಇದೇ ಡಿಸೆಂಬರ್ ತಿಂಗಳೊಳಗೆ ವಾರಾಹಿ ಕುಡಿಯುವ ನೀರು ಯೋಜನಾ ಕಾಮಗಾರಿ ಮುಗಿದು ನೀರು ಜನರಿಗೆ ಸಿಗಬೇಕಾಗಿತ್ತು. ಆದರೆ ವಿವಿಧ ಕಾರಣಗಳಿಂದ ಕಾಮಗಾರಿ ತೀರಾ ನಿಧಾನ ಗತಿಯಲ್ಲಿ ಸಾಗುತ್ತಿದೆ. ಕೇವಲ ಪೈಪ್‌ಲೈನ್ ಅಳವಡಿಸುವ ಕಾಮಗಾರಿ ಮಾತ್ರ ಶೇ.70ರಷ್ಟು ಪೂರ್ಣಗೊಂಡಿದೆ ಎಂದು ಡಾ.ವಿದ್ಯಾಕುಮಾರಿ ಇಂದು ಸಂಜೆ ‘ವಾರ್ತಾಭಾರತಿ’ಗೆ ತಿಳಿಸಿದರು.

ಈ ಬಾರಿ ಜುಲೈ ತಿಂಗಳು ಬಿಟ್ಟರೆ ಇನ್ನುಳಿದ ತಿಂಗಳುಗಳಲ್ಲಿ ಮಳೆಯ ಕೊರತೆ ಕರಾವಳಿ ಭಾಗದಲ್ಲಿ ಕಾಣಿಸಿಕೊಂಡಿದೆ. ಮಳೆ ಧಾರಾಳ ಸುರಿಯುವ ಆಗಸ್ಟ್ ಹಾಗೂ ಸೆಪ್ಟಂಬರ್ ತಿಂಗಳುಗಳಲ್ಲಿಯೂ ವಾಡಿಕೆಗಿಂತ ಕಡಿಮೆ ಮಳೆ ಸುರಿಯುವ ಸೂಚನೆ ದೊರಕಿದೆ. ಹೀಗಾಗಿ ಈ ವರ್ಷ ಡಿಸೆಂಬರ್ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯಲ್ಲಿ ಪ್ರಾರಂಭವಾಗುವ ಸಾಧ್ಯತೆ ಕಂಡು ಬರುತ್ತಿದೆ ಎಂದವರು ನುಡಿದರು.

ಹೀಗಾಗಿ ಸಾಧ್ಯವಾದಷ್ಟು ಬೇಗ ನಾವು ಕಾಮಗಾರಿಯನ್ನು ಮುಗಿಸಿ ಜನರಿಗೆ ನೀರು ಕೊಡಬೇಕಾಗಿದೆ. ಹೀಗಾಗಿ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯನ್ನು ನಡೆಸುವಂತೆ ಅಧಿಕಾರಿಗಳಿಗೆ ಹಾಗೂ ವಿವಿಧ ಗುತ್ತಿಗೆದಾರರಿಗೆ ಸ್ಪಷ್ಟ ನಿರ್ದೇಶನ ಗಳನ್ನು ನೀಡಿರುವುದಾಗಿ ಅವರು ತಿಳಿಸಿದರು. ವಾರಾಹಿ ಯೋಜನೆಯ ಶಿಂಬ್ರಾ, ಆರೂರು, ಕೊಕ್ಕರ್ಣೆ, ಆವರ್ಸೆ ಹಾಗೂ ಹಾಲಾಡಿ ಗಳಿಗೆ ಭೇಟಿ ನೀಡಿದ ಅವರು ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕೇವಲ ಪೈಪ್‌ಲೈನ್ ಅಳವಡಿಸುವ ಹಾಗೂ ಉಡುಪಿಯಲ್ಲಿ ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ ಒದಗಿಸುವ ಕೆಲಸ ಆಗಿದೆ. ಆದರೆ ಸೀತಾ ನದಿ ಹಾಗೂ ಸ್ವರ್ಣ ನದಿಯ ಸೇತುವೆಗಳ ಮೂಲಕ ಪೈಪ್‌ಲೈನ್‌ಗಳನ್ನು ಇನ್ನಷ್ಟೇ ಅಳವಡಿಸಬೇಕಾಗಿದೆ. ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ. ಅಲ್ಲದೇ ಕೆಲವು ಕಡೆಗಳಲ್ಲಿ ಅರಣ್ಯ ಇಲಾಖೆಯ ವಿಷಯವೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ.

ಸಿದ್ಧಾಪುರದ ಭರತ್ಕಲ್‌ನಲ್ಲಿ ನೀರು ಶುದ್ಧೀಕರಣ ಘಟಕದ ಕಾಮಗಾರಿಯೂ ನಿರೀಕ್ಷಿತ ವೇಗದಲ್ಲಿ ಸಾಗಿಲ್ಲ. ಅಲ್ಲೂ ಸಾಕಷ್ಟು ಕಾಮಗಾರಿ ನಡೆಯಲು ಬಾಕಿ ಇದೆ. ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಡಿಯಲ್ಲಿ ಈ ಕಾಮಗಾರಿಗಳು ನಡೆಯುತ್ತಿವೆ ಎಂದರು.

ಇನ್ನು ವಾರಾಹಿ ನೀರಾವರಿ ಯೋಜನೆಯೂ ಕುಂಟುತ್ತಾ ಸಾಗುತ್ತಿದೆ. ಕಾಲುವೆಗಳ ನಿರ್ಮಾಣಕ್ಕಾಗಿ ಭೂಸ್ವಾಧೀನಕ್ಕೆ ಅಡ್ಡಿಯಾಗಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆ ಕ್ಲಿಯರೆನ್ಸ್‌ಗಾಗಿ ಕೇಂದ್ರ ಸರಕಾರಕ್ಕೆ ಬರೆಯಲಾಗಿದ್ದು, ಅಲ್ಲಿಂದ ಬರುವ ಒಪ್ಪಿಗೆಗಾಗಿ ಕಾಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಭೇಟಿಯ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X