ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಆ.18: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕೃತಕಾಂಗ ಜೋಡಣೆ ಅಭಿಯಂತ ರರ -1 ಹುದ್ದೆಗೆ, ಪಿ ಆಂಡ್ ಓ ಎಂಜಿನಿಯರಿಂಗ್ ಪದವಿ / ಡಿಪ್ಲೋಮಾ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ ಹೊಂದಿರುವವರು ಹಾಗೂ ಇಯರ್ ಮೋಲ್ಡ್ ಟೆಕ್ನೀಯನ್ (ಕಿವಿ ಅಚ್ಚು ತಂತ್ರಜ್ಞ) ಹುದ್ದೆಗೆ ಇಯರ್ ಮೋಲ್ಡ್ ಟೆಕ್ನೀಷಿಯನ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆ.25ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ದೂ. ಸಂಖ್ಯೆ: 0820- 2533372ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





