Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ...

ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆದರೆ ರಾಜ್ಯಾದ್ಯಂತ ಜನಾಂದೋಲನ: ವಿಎಚ್‌ಪಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ16 Nov 2026 9:52 PM IST
share
ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆದರೆ ರಾಜ್ಯಾದ್ಯಂತ ಜನಾಂದೋಲನ: ವಿಎಚ್‌ಪಿ ಎಚ್ಚರಿಕೆ

ಉಡುಪಿ, ನ.16: ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಪ್ರತಿಬಂಧಕ ಕಾನೂನನ್ನು ರಾಜ್ಯ ಸರಕಾರ ವಾಪಸ್ ಪಡೆಯುವ ಪ್ರಯತ್ನ ಅಥವಾ ದುರ್ಬಲಗೊಳಿಸುವ ನಿರ್ಧಾರ ಕೈಗೊಂಡರೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಾಗೂ ಜನಾಂದೋಲನ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್. ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಯಾವುದೇ ಕಾರಣಕ್ಕೂ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ ಮತ್ತು ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2022’ನ್ನು ಹಿಂಪಡೆಯಬಾರದು ಅಥವಾ ದುರ್ಬಲಗೊ ಳಿಸುವ ಪ್ರಯತ್ನ ನಡೆಸಬಾರದು ಎಂದು ವಿಎಚ್‌ಪಿ ರಾಜ್ಯ ಸರಕಾರವನ್ನು ತೀವ್ರವಾಗಿ ಆಗ್ರಹಿಸುತ್ತಿದೆ ಎಂದವರು ಹೇಳಿದರು.

ನ.12ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಲವು ಸಂಘಟನೆಗಳು ಈ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿವೆ. ಸಂಘಟನೆಗಳ ಒತ್ತಡಕ್ಕೆ ಮಣಿದು ಡಿ.2ರಿಂದ ಬೆಳಗಾವಿಯಲ್ಲಿ ಪ್ರಾರಂಭ ಗೊಳ್ಳ ಲಿರುವ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿರುವ ಹೇಳಿಕೆಯನ್ನು ವಿಹಿಂಪ ಖಂಡಿಸುತ್ತದೆ ಎಂದು ಸುನಿಲ್ ತಿಳಿಸಿದರು.

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯು ಯಾವುದೇ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ಕೊಂಡಿಲ್ಲ. ಬದಲಾಗಿ ಬಲವಂತ, ವಂಚನೆ, ಆಮಿಷ ಅಥವಾ ದಾರಿ ತಪ್ಪಿಸಿ ಮಾಡುವ ಕಾನೂನುಬಾಹಿರ ಮತಾಂತರಗಳನ್ನು ಮಾತ್ರ ತಡೆಯುತ್ತದೆ. 1977ರ ತನ್ನ ತೀರ್ಪೋದರಲ್ಲಿ ಸುಪ್ರೀಂ ಕೋರ್ಟ್ ಸಹ ಬಲವಂತ ವಾಗಿ ಮತಾಂತರ ಮಾಡುವ ಹಕ್ಕು ಮೂಲಭೂತ ಹಕ್ಕಲ್ಲ ಎಂದು ಸ್ಪಷ್ಟಪಡಿಸಿದೆ ಎಂದರು.

ಅದೇ ರೀತಿ ಭಾರತೀಯ ಕೃಷಿ ಪದ್ಧತಿಯ ಬೆನ್ನೆಲುಬಾಗಿರುವ ಗೋವು ಗಳ ರಕ್ಷಣೆ ರೈತರ ಹಿತಾಸಕ್ತಿ ಹಾಗೂ ಪಶುಸಂಪತ್ತಿನ ರಕ್ಷಣೆಗೆ ಅಗತ್ಯವಾಗಿದೆ.ಪ್ರಸ್ತುತ ರಾಜ್ಯದಲ್ಲಿ ಜಾರಿಯಲ್ಲಿರುವ ಈ ಕಾಯ್ದೆಯಿಂದ ಸಾವಿರಾರು ಗೋವುಗಳ ರಕ್ಷಣೆಯಾಗಿದೆ. ಗೋಕಳ್ಳರು ಹಾಗೂ ಅಕ್ರಮ ಗೋಸಾಗಾಟಗಾರರಿಗೆ ಕಡಿವಾಣ ಬಿದ್ದಿದೆ. ಕಾಯ್ದೆ ಯನ್ನು ದುರ್ಬಲ ಗೊಳಿಸುವ ಪ್ರಯತ್ನ ರಾಜ್ಯದಲ್ಲಿ ಅನಗತ್ಯ ಕೋಮು ಸಂಘರ್ಷಕ್ಕೆ ದಾರಿಮಾಡಿ ಕೊಡುತ್ತದೆ ಎಂದವರು ಎಚ್ಚರಿಸಿದರು.

ಇದೇ ವೇಳೆ ರಾಜ್ಯ ಸರಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯ 2026-27ನೇ ಸಾಲಿನಲ್ಲಿ ಕೇವಲ ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿ ಗಳಿಗೆ 60 ದಿನಗಳ ಸೇನಾ ತರಬೇತಿ ನೀಡಲು ಟೆಂಡರ್ ಕರೆದಿರುವುದನ್ನು ವಿಎಚ್‌ಪಿ ಖಂಡಿಸುತ್ತದೆ ಎಂದು ಸುನಿಲ್ ಕೆ.ಆರ್.ನುಡಿದರು. ಸಾರ್ವಜನಿಕರ ತೆರಿಗೆ ಹಣವನ್ನು ಕೇವರ ಒಂದು ಧಾರ್ಮಿಕ ಗುಂಪಿಗೆ ಮಾತ್ರ ತರಬೇತಿ ನೀಡಲು ಬಳಸಿ, ಹಿಂದೂ ಸೇರಿದಂತೆ ಇತರ ಸಮುದಾಯಗಳ ಅರ್ಹ ಬಡ ವಿದ್ಯಾರ್ಥಿಗಳನ್ನು ಹೊರಗಿಡುವುದು ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಖಂಡಿಸಿದ ಅವರು, ಧರ್ಮದ ಬದಲು ಆರ್ಥಿಕವಾಗಿ ಹಿಂದುಳಿದಿರುವ ಮಾನದಂಡದ ಮೇಲೆ ಶಾಲಾ-ಕಾಲೇಜುಗಳ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಸಮಾನ ತರಬೇತಿ ನೀಡಬೇಕು ಎಂದವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಜರಂಗ ದಳದ ಸಂಚಾಲಕ ಚೇತನ್ ಪೇರಲ್ಕೆ, ವಿಎಚ್‌ಪಿಯ ವಿಖ್ಯಾತ್ ಭಟ್ ಉಪಸ್ಥಿತರಿದ್ದರು.

Tags

VHPstatewidemass movementprohibitingreligiousconversionslaughterrepealed
share
ವಾರ್ತಾಭಾರತಿ
ವಾರ್ತಾಭಾರತಿ
Next Story
X