Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಜಯಲಕ್ಷ್ಮಿ ಶಿಬರೂರುಗೆ ಪಂಚವರ್ಣ...

ವಿಜಯಲಕ್ಷ್ಮಿ ಶಿಬರೂರುಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ18 Nov 2025 12:00 AM IST
share
ವಿಜಯಲಕ್ಷ್ಮಿ ಶಿಬರೂರುಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕೋಟ: ಅನ್ಯಾಯ ಆದಾಗ ಪ್ರತಿಯೊಬ್ಬರು ಸೆಟೆದು ನಿಲ್ಲಬೇಕು. ಸ್ವಾರ್ಥ ಹೆಡಿತನ ಬಿಟ್ಟು, ಭ್ರಷ್ಟರ ದುಷ್ಟರ ಆರ್ಭಟಕ್ಕೆ ಕಡಿವಾಣ ಹಾಕಲು ನಿಷ್ಕಲ್ಮಶ ಹೋರಾಟ ಮಾಡಬೇಕು. ಮೌನ ವಹಿಸದೆ ಪ್ರಶ್ನಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದ್ದಾರೆ.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಸದ್ಭಾವನಾ -2025 ಶೀರ್ಷಿಕೆಯಡಿ ಕೋಟದ ಗಾಂಧಿ ಮೈದಾನದಲ್ಲಿ ರವಿವಾರ ನಡೆದ ಸಮಾರಂಭದಲ್ಲಿ ಅವರು ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡುತ್ತಿದ್ದರು.

ನೈತಿಕತೆ, ಸತ್ಯದ ಪರವಾಗಿ ಹೋರಾಟ ಮಾಡುವ ಪತ್ರಕರ್ತರು ಈ ನಾಡಿನಲ್ಲಿ ಕಾರ್ಯಾಚರಿಸಲು ಸಿದ್ಧರಾಗಿದ್ದಾರೆ. ಪ್ರಸ್ತುತ ಪತ್ರಕರ್ತರು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆರೋಪವಿದೆ. ಅದೇ ನೀವು ವೀಕ್ಷಕರಾಗಿ ಓದುಗರಾಗಿ ನಿಮ್ಮ ಪಾತ್ರ ಏನೆಂಬುವುದನ್ನು ಮನಗಾಣ ಬೇಕಾಗಿದೆ ಎಂದರು.

ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ಪಂಚವರ್ಣ ವಿಶೇಷ ಪುರಸ್ಕಾರವನ್ನು ರಥಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ ಅವರಿಗೆ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ ಪ್ರದಾನ ಮಾಡಿದರು. ಇದೇ ವೇಳೆ ಮಾಸ್ಟರ್ ಅಥ್ಲೆಟಿಕ್ ಪಟು ಅಶ್ವಿನಿ ಅರಳಿ, ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರ, ನಿರೂಪಕಿ ಕೋಟ ರೇವತಿ ಶೆಟ್ಟಿ ಬೆಂಗಳೂರು ಅವರನನು ಅಭಿನಂದಿಸಲಾಯಿತು.

ಬನ್ನಾಡಿ ಪದ್ದು ಆಚಾರ್ ಸ್ಮರಣಾರ್ಥ ಅಶಕ್ತ, ಆರೋಗ್ಯ ನಿಧಿ ವಿತರಣೆ, ಸಂತೋಷ್ ಕುಮಾರ್ ಕೋಟ ಇವರ ನೆನಪಿನಲ್ಲಿ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ಶೈಕ್ಷಣಿಕ ದತ್ತಿನಿಧಿ, ವಿದ್ಯಾರ್ಥಿಗಳಿಗೆ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿಯನ್ನು ವಿತರಿಸಲಾಯಿತು. ಸಾಲಿಗ್ರಾಮದ ಹೊಸಬದುಕು ಆಶ್ರಮಕ್ಕೆ ಆರೋಗ್ಯ ಪರಿಕರ, ಕೋಟದ ಸೇವಾಸಂಗಮ ಶಿಶುಮಂದಿರಕ್ಕೆ ಸಮವಸ್ತ್ರ ಹಸ್ತಾಂತರಿಸಲಾಯಿತು.

ಬೆಂಗಳೂರು ಕ್ಯಾಪ್ಸ್ ಫೌಂಡೇಶನ್ ವತಿಯಿಂದ ಪ್ಲಾಸ್ಟಿಕ್ ಮುಕ್ತ ಸಮಾಜ ಶೀರ್ಷಿಕೆಯಡಿ ಒಂದು ಸಾವಿರ ಬಟ್ಟೆ ಕೈಚೀಲಗಳನ್ನು ಕ್ಯಾಪ್ಸ್ ಫೌಂಡೇಶನ್ ಮುಖ್ಯಸ್ಥ ಸಿಎ ಚಂದ್ರಶೇಖರ ಶೆಟ್ಟಿ, ಕೋಟ ಸಿ ಎ ಬ್ಯಾಂಕ್ ಸಿಇಓ ಶರತ್ ಕುಮಾರ್ ಶೆಟ್ಟಿ ಅವರಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.

ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಕೋಟ ಸಹಕಾರಿ ವ್ಯಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಅಭಿನಂದನಾ ನುಡಿಗಳನ್ನಾಡಿದರು.

ಮುಂಬೈ ಓಎನ್‌ಜಿಸಿ ನಿವೃತ್ತ ಪ್ರಬಂಧಕ ಬನ್ನಾಡಿ ನಾರಾಯಣ ಆಚಾರ್ ಶುಭಶಂಸನೆಗೈದರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಬಡಾಮನೆ ರತ್ನಾಕರ ಶೆಟ್ಟಿ, ಉದ್ಯಮಿ ಶಂಕರ್ ಹೆಗ್ಡೆ, ಕುಂದಾಪುರ ಮಾತಾ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರಕಾಶ್ ಸಿ.ತೋಳಾರ್, ಯಡಾಡಿ ಮತ್ಯಾಡಿ ಸುಜ್ಞಾನ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥ ರಮೇಶ್ ಶೆಟ್ಟಿ, ಗುತ್ತಿಗೆದಾರ ಗುಂಡ್ಮಿ ಅವಿನಾಶ್ ಶೆಟ್ಟಿ ಬೆಂಗಳೂರು, ಸೃಷ್ಠಿ ಇಂಜಿನಿಯರ್ ಮುಖ್ಯಸ್ಥ ಜಯರಾಜ್ ವಿ.ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ್ ಹೊಳ್ಳ, ಸಾಂಸ್ಕೃತಿಕ ಚಿಂತಕ ರಶಿರಾಜ್ ಸಾಸ್ತಾನ, ಸಾಮಾಜಿಕ ಕಾರ್ಯಕರ್ತ ಕೆ.ದಿನೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಎಚ್.ಕುಂದರ್, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ ಉಪಸ್ಥಿತರಿದ್ದರು.

ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಕೋಟ ರೇವತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X