Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂಘಟಿತ ಹೋರಾಟದಿಂದ ಪಂಚಾಯತ್‌ರಾಜ್...

ಸಂಘಟಿತ ಹೋರಾಟದಿಂದ ಪಂಚಾಯತ್‌ರಾಜ್ ವ್ಯವಸ್ಥೆಗೆ ಬಲ: ಸಂಸದ ಕೋಟ

ಸ್ಥಳೀಯ ಸರಕಾರದ ಉಳಿವಿಗಾಗಿ ಗ್ರಾಪಂ ಚುನಾಯಿತ ಪ್ರತಿನಿಧಿಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 March 2025 6:58 PM IST
share
ಸಂಘಟಿತ ಹೋರಾಟದಿಂದ ಪಂಚಾಯತ್‌ರಾಜ್ ವ್ಯವಸ್ಥೆಗೆ ಬಲ: ಸಂಸದ ಕೋಟ

ಉಡುಪಿ: ಸ್ಥಳೀಯ ಸರಕಾರದ ಉಳಿವಿಗಾಗಿ ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಆಗಮಿಸಿದ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇಂದು ಸರಕಾರ ಹೊರಡಿಸುವ ಸುತ್ತೋಲೆ, ಆದೇಶಗಳು ಪಂಚಾಯತ್ ರಾಜ್ ವ್ಯವಸ್ಥೆಯ ಒಂದೊಂದೇ ಕಲ್ಲುಗಳನ್ನು ಬೀಳಿಸುತ್ತಿದೆ. ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಸಂಘಟಿತ ಹೋರಾಟ ಮಾತ್ರ ಇಂದು ಪಂಚಾಯತ್‌ರಾಜ್ ವ್ಯವಸ್ಥೆಯನ್ನು ಬಲಗೊಳಿಸಲು ಸಾಧ್ಯ. ಪಂಚಾಯತ್‌ರಾಜ್ ವ್ಯವಸ್ಥೆ ಬಲಗೊಳ್ಳಬೇಕಾದರೆ, ಸ್ಥಳೀಯವಾಗಿ ಗ್ರಾಮ ಸರಕಾರಗಳು ಬಲವಾಗಬೇಕು ಎಂದರು.

ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಸ್ಥಳೀಯ ಸ್ವಯಂ ಸರಕಾರವನ್ನು ಉಳಿಸಲು ಮತ್ತು ಬಲಪಡಿಸಲು ನಾವೆಲ್ಲಾ ಒಗ್ಗಟ್ಟಾಗಿ ಕಾರ್ಯ ಪ್ರವತ್ತರಾಗಬೇಕು. ಹಿಂದಿನಿಂದಲೂ ಹಲವಾರು ರೀತಿಯಲ್ಲಿ ವಿವಿಧ ಹಂತದ ಸರಕಾರಗಳಿಂದ ನಿರಂತರವಾಗಿ ಗ್ರಾಮ ಸರಕಾರಗಳ ಅಧಿಕಾರಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಈ ಎಲ್ಲಾ ಹಕ್ಕೊತ್ತಾಯಗಳನ್ನು ನೇರವಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರನ್ನು ಹಾಗೂ ವಿಧಾನ ಪರಿಷತ್‌ಗೆ ಸ್ಥಳೀಯಾಡಳಿತದಿಂದ ಆಯ್ಕೆಯಾದ ಪ್ರತಿನಿಧಿಗಳನ್ನು ನಮ್ಮ ಒಕ್ಕೂಟದ ನಿಯೋಗವು ಭೇಟಿ ಮಾಡಿ ಚರ್ಚಿಸಿ, ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗುವುದು. ಜೊತೆಗೆ ಗ್ರಾಪಂಗೆ ಸಂಬಂಧಿಸಿದಂತೆ ಸಿಬ್ಬಂದಿಗಳ ನೇಮಕಾತಿ ಮತ್ತು ಏಕ ವಿನ್ಯಾಸ ನಕ್ಷೆಯಲ್ಲಿ ಇರುವ ಗೊಂದಲಗಳ ಕುರಿತಾಗಿ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಲು ಒಕ್ಕೂಟ ನಿರ್ಧರಿಸಿದೆ ಎಂದರು.

ಸ್ಥಳಕ್ಕೆ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರ ಮೂಲಕ ಹಕ್ಕೊತ್ತಾಯಗಳ ಮನವಿಯನ್ನು ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಸಚಿವರಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ವಿವಿಧ ಗ್ರಾಪಂಗಳ ಪ್ರತಿನಿಧಿಗಳಾದ ಬಿ.ದಿನಕರ ಶೆಟ್ಟಿ ಬಸ್ರೂರು, ಬಸವ ಪಿ.ಮೊಗವೀರ ಹಕ್ಲಾಡಿ, ಎಚ್.ಪ್ರಕಾಶ್ ಶೆಟ್ಟಿ ಯಡ್ತಾಡಿ, ಇಂದಿರಾ ಶೆಟ್ಟಿ ಮೊಳಹಳ್ಳಿ, ಚಂದ್ರಿಕಾ ಮೊಳಹಳ್ಳಿ, ಮೋಹನ್‌ಚಂದ್ರ ಉಪ್ಪುಂದ, ರಮೇಶ್ ಶೆಟ್ಟಿ ಕಾಳಾವರ, ಜಿ.ಮಂಜುನಾಥ್ ಹಟ್ಟಿಯಂಗಡಿ, ಉದಯಕುಮಾರ್ ತಲ್ಲೂರು ಮೊದಲಾದವರು, ತಾವು ಎದುರಿಸುತ್ತಿರುವ ವಿವಿಧ ರೀತಿಯ ಸಮಸ್ಯೆಗಳನ್ನು ತೆರೆದಿಟ್ಟು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.

ಉಡುಪಿ ಜಿಲ್ಲೆಯ ಕುಂದಾಫುರ, ಬೈಂದೂರು, ಉಡುಪಿ, ಹೆಬ್ರಿ, ಬ್ರಹ್ಮಾವರ, ಕಾಪು ತಾಲೂಕುಗಳ ಗ್ರಾಮ ಪಂಚಾಯತ್‌ಗಳಿಂದ ಸುಮಾರು ೩೦೦ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನದ ಕಾರ್ಯಲಯದ ಸದಸ್ಯ ಶ್ರೀನಿವಾಸ ಗಾಣಿಗ ಕಾರ್ಯಕ್ರಮ ನಿರೂಪಿಸಿದರು. ಕೃಪಾ ಎಂ. ಗ್ರಾಮಸಭೆ ಮತ್ತು ಸ್ಥಳೀಯ ಸರಕಾರದ ಹಕ್ಕು ಮತ್ತು ಅಧಿಕಾರದ ಬಗ್ಗೆ ಚರ್ಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X