Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಾಗರಮಠ ಮರಳುಗಾರಿಕೆಗೆ ನೀಡಿದ ಅನುಮತಿ...

ನಾಗರಮಠ ಮರಳುಗಾರಿಕೆಗೆ ನೀಡಿದ ಅನುಮತಿ ತಡೆಯುವಂತೆ ಗ್ರಾಮಸ್ಥರಿಂದ ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ6 Feb 2026 8:18 PM IST
share
ನಾಗರಮಠ ಮರಳುಗಾರಿಕೆಗೆ ನೀಡಿದ ಅನುಮತಿ ತಡೆಯುವಂತೆ ಗ್ರಾಮಸ್ಥರಿಂದ ಡಿಸಿಗೆ ಮನವಿ

ಉಡುಪಿ : ಬ್ರಹ್ಮಾವರ ತಾಲೂಕಿನ ಬಾರಕೂರು ಸಮೀಪದ ಹೊಸಾಳ ಗ್ರಾಮದ ನಾಗರಮಠದ ಸೀತಾನದಿಯಲ್ಲಿ ಮರಳುಗಾರಿಕೆಯನ್ನು ಸ್ಥಗಿತಗೊಳಿಸಿ ಕೃಷಿಭೂಮಿ ಉಳಿಸುವಂತೆ ಆಗ್ರಹಿಸಿ ನಾಗರಮಠ ಗ್ರಾಮಸ್ಥರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದರು.

ಇಲ್ಲಿ ನಡೆಯುವ ಮರಳು ಗಣಿಗಾರಿಕೆಯಿಂದ ಈಗಾಗಲೇ ಹಲವು ಕೃಷಿಭೂಮಿಗಳು ಮಣ್ಣಿನ ಸವೆತದಿಂದ ಸೀತಾ ನದಿಗೆ ಕೊಚ್ಚಿಕೊಂಡು ಹೋಗಿವೆ. 60 ಅಡಿ ಅಗಲ ಇದ್ದ ಸೀತಾನದಿ ಮರಳುಗಾರಿಕೆಯಿಂದ 160 ಅಡಿ ಅಗಲ ವಾಗಿದೆ. ಕೃಷಿಭೂಮಿಯಿಂದ ಕೂಡಿರುವ ಈ ಜಾಗ ಮರಳು ಗಾರಿಕೆಗೆ ಸೂಕ್ತವಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇಲ್ಲಿ ಮರಳುಗಾರಿಕೆಗೆ ಅನುಮತಿ ನೀಡಿರುವ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೂ ಹೆರಾಡಿ ಮೂಲಕ ಶಂಖಾಡಿ ಮಾರ್ಗವಾಗಿ ನಾಗರಮಠ ನದಿಗೆ ಸುಮಾರು ಒಂದು ಕೋಟಿ ರೂ. ಮೌಲ್ಯದ 24 ಅಡಿ ಅಗಲದ ಕೆಂಪು ಮಣ್ಣಿನ ರಸ್ತೆಯನ್ನು ಅಕ್ರಮವಾಗಿ ನಿರ್ಮಿಸಿ ಮರಳು ಸಾಗಿಸಲು ಸಿದ್ಧತೆ ನಡೆಸಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ಅವೈಜ್ಞಾನಿಕ ಮರಳುಗಾರಿಕೆಯಿಂದ ಇಲ್ಲಿನ ನದಿಯು ತನ್ನ ಹಾದಿಯನ್ನು ಬದಲಾಯಿಸುತ್ತಿದೆ. ಇದರಿಂದ ರೈತರು ತಮ್ಮ ಕೃಷಿಭೂಮಿಯನ್ನು ಕಳೆದು ಕೊಳ್ಳುವ ಭೀತಿಯಲ್ಲಿದ್ದಾರೆ. ಮರಳುಗಾರಿಕೆ ಅವಕಾಶ ನೀಡಿರುವುದರಿಂದ ನಾಗರಮಠ ಅಣೆಕಟ್ಟಿನೊಳಗಿನ ಸಿಹಿನೀರು ಉಪ್ಪು ನೀರು ಆಗಿ ಪರಿವರ್ತನೆ ಆಗಲಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇಲ್ಲಿನ ಮರಳುಗಾರಿಕೆ ನೀಡಿದ ಅನುಮತಿಯನ್ನು ಕೂಡಲೇ ತಡೆಹಿಡಿಯ ಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯರಾದ ಚಂದ್ರ ಕಾಂಚನ್, ಅಶೋಕ್ ಕುಂದರ್, ಗಣೇಶ್ ಶೆಟ್ಟಿ, ಆಶಾ ಅಮೀನ್, ಉಷಾ, ಚಂದ್ರ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

Tags

VillagersappealpermissionNagaramathsand mining
share
ವಾರ್ತಾಭಾರತಿ
ವಾರ್ತಾಭಾರತಿ
Next Story
X