ರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕ ವಿನಾಯಕ ನಾಯ್ಕ್
ಉಡುಪಿ : 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳ ಸರಕಾರಿ ಪ್ರೌಢ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ವಿನಾಯಕ್ ನಾಯ್ಕ್ ಆಯ್ಕೆಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ತುಂಬೆಬೀಳು ಗ್ರಾಮದ ವಿನಾಯಕ ನಾಯ್ಕ್, 2010ರಲ್ಲಿ ರೆಂಜಾಳ ಶಾಲೆಗೆ ವರ್ಗಾವಣೆಗೊಂಡು ಬಂದಿದ್ದು ಇದೀಗ 14 ವರ್ಷಗಳಿಂದ ಇಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತಿದ್ದಾರೆ. 2007ರಲ್ಲಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿ ಬದುಕು ಪ್ರಾರಂಭಿಸಿದ್ದರು.
ದಾನಿಗಳ ನೆರವಿನಿಂದ ತಮ್ಮ ಶಾಲೆಯಲ್ಲಿ ಸಮಾಜ ವಿಜ್ಞಾನದ ಡಿಜಿಟಲ್ ಪ್ರಯೋಗಾಲಯ ಪ್ರಾರಂಭಿಸಿದ ಖ್ಯಾತಿ ಇವರ ದ್ದಾಗಿದ್ದು, ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಮುನ್ನ ಪ್ರೇರಣಾ ಶಿಬಿರಗಳನ್ನು ಆಯೋಜಿಸಿ ಅವರನ್ನು ಪರೀಕ್ಷೆಗೆ ಸಜ್ಜುಗೊಳಿಸುತಿದ್ದಾರೆ. ತಮ್ಮ ವಿಷಯದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿಯೂ ಅವರು ಜಿಲ್ಲೆಯಲ್ಲಿ ಕೆಲಸ ಮಾಡಿದ್ದಾರೆ.
Next Story