Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.19ರಿಂದ ಗದ್ದೆಗಳಿಗೆ ಹರಿಯಲಿದೆ...

ಡಿ.19ರಿಂದ ಗದ್ದೆಗಳಿಗೆ ಹರಿಯಲಿದೆ ಸೌಕೂರು ಏತ ನೀರಾವರಿ ಘಟಕದ ನೀರು; ಮತ್ತೆ ಬಿರುಸುಗೊಳ್ಳಲಿದೆ ಸುಗ್ಗಿ ಕೃಷಿ ಚಟುವಟಿಕೆ

ವಾರ್ತಾಭಾರತಿವಾರ್ತಾಭಾರತಿ18 Dec 2025 7:26 PM IST
share
ಡಿ.19ರಿಂದ ಗದ್ದೆಗಳಿಗೆ ಹರಿಯಲಿದೆ ಸೌಕೂರು ಏತ ನೀರಾವರಿ ಘಟಕದ ನೀರು; ಮತ್ತೆ ಬಿರುಸುಗೊಳ್ಳಲಿದೆ ಸುಗ್ಗಿ ಕೃಷಿ ಚಟುವಟಿಕೆ
‘ವಾರ್ತಾಭಾರತಿ’ ವರದಿ ಫಲಶ್ರುತಿ

ಕುಂದಾಪುರ, ಡಿ.18: ಸುಗ್ಗಿ ಬೆಳೆಗೆ ನೀರು ಸಿಗದೇ ಪರಿಸರದ ರೈತರಲ್ಲಿ ಆತಂಕ ಮೂಡಿಸಿದ್ದ ಸೌಕೂರು ಏತ ನೀರಾವರಿ ಯೋಜನೆಯ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಮೆಸ್ಕಾಂ, ಘಟಕಕ್ಕೆ ವಿದ್ಯುತ್ ಸಂಪರ್ಕವನ್ನು ಮತ್ತೆ ನೀಡಿದ ಬಳಿಕ ಸ್ಥಾಗುರುವಾರ ಸೌಕೂರು ಏತ ನೀರಾವರಿ ಘಟಕದಲ್ಲಿರುವ ಮುಖ್ಯ ಟ್ಯಾಂಕಿಗೆ ನೀರನ್ನು ಎತ್ತುಗಡೆ (ಲಿಫ್ಟ್) ಮಾಡಲಾಗಿದೆ.

ಯಾವುದೇ ತಾಂತ್ರಿಕ ಸಮಸ್ಯೆ ಎದುರಾಗದಿದ್ದಲ್ಲಿ ಡಿ.19 (ಶುಕ್ರವಾರ) ರಿಂದ ಚೆಕ್ ಡ್ಯಾಂಗಳು ಹಾಗೂ ಪೈಪ್ ಗಳಿಗೆ ಯೋಜನೆಯ ನೀರು ಮತ್ತೆ ಹರಿದು ಬರಲಿದೆ. ಅಲ್ಲಿಂದ 8 ಗ್ರಾಮಗಳ 1350 ಹೆಕ್ಟೇರ್ ಕೃಷಿ ಭೂಮಿಗೆ ಈ ನೀರು ಪೂರೈಕೆಯಾಗಲಿದೆ.

ಸುಮಾರು ಎರಡು ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಬಾಕಿ ಇದ್ದ ಕಾರಣಕ್ಕೆ ಕಳೆದ ಮಳೆಗಾಲದಿಂದ ಗುಲ್ವಾಡಿ ಯಲ್ಲಿರುವ ಏತ ನೀರಾವರಿ ಘಟಕಕ್ಕೆ ಮೆಸ್ಕಾಂನಿಂದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು. ಇದರಿಂದ ರೈತರ ಹಿಂಗಾರು ಕೃಷಿ ಬೆಳೆಗೆ ಸಿದ್ಧತೆ ಪ್ರಾರಂಭಿಸಿದ್ದರೂ, ಯೋಜನಾ ಘಟಕದಿಂದ ನಿಗದಿಯಾದಂತೆ ನೀರು ಹರಿಯುವಿಕೆ ಆರಂಭ ಗೊಂಡಿರಲಿಲ್ಲ.

ರೈತರ ಆತಂಕವನ್ನು ಪ್ರತಿಬಿಂಬಿಸಿ, ಸೌಕೂರು ಏತ ನೀರಾವರಿ ಯೋಜನೆ ನೀರನ್ನು ವಿದ್ಯುತ್ ಬಿಲ್ ಬಾಕಿ ಕಾರಣಕ್ಕೆ ಇನ್ನೂ ಬಿಡದಿರುವ ಕುರಿತಂತೆ ಡಿ.11ರಂದು ’ವಾರ್ತಾಭಾರತಿ’ ವಿಶೇಷ ವರದಿ ಪ್ರಕಟಿಸಿ, ರೈತರ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿತ್ತು.

ಎಂಎಲ್‌ಸಿ ಭಂಡಾರಿ ಸ್ಪಂದನೆ: ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ದಿನವೇ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಬೆಳಗಾವಿ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ತುರ್ತಾಗಿ ಪತ್ರ ಬರೆದು, ಕೂಡಲೇ ನೀರು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಭೇಟಿಯಾಗಿ ಮನವಿ ಸಲ್ಲಿಸಿದರು. ಇದಕ್ಕೆ ತಕ್ಷಣ ಸ್ಪಂಧಿಸಿದ ಡಿಕೆಶಿ, ಸಂಬಂಧಪಟ್ಟ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿ, ಕ್ರಮಕ್ಕೆ ಸೂಚಿಸಿದ್ದರು.

ಹೀಗಾಗಿ ಹಿಂಗಾರು ಕೃಷಿ ಋತು ಆರಂಭವಾದರೂ ಗದ್ದೆಗೆ ನೀರು ಬರದೇ ರೈತರಿಗಾದ ಸಮಸ್ಯೆ ಇದೀಗ ಬಗೆ ಹರಿಯುವ ಕಾಲ ಸನ್ನಿಹಿತವಾಗಿದ್ದು, ಒಂದೆರಡು ದಿನಗಳಲ್ಲಿ ಗದ್ದೆಗಳಿಗೆ ನೀರು ಹರಿದು ಕೃಷಿ ಕಾರ್ಯ ಪುನರಾರಂಭ ಗೊಳ್ಳುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಇದೇ ನೀರನ್ನು ನಂಬಿಕೊಂಡು ಭತ್ತದ ಎರಡನೇ ಬೆಳೆ ಸೇರಿದಂತೆ ವಿವಿಧ ಸುಗ್ಗಿ ಬೆಳೆಗೆ ಸನ್ನದ್ಧರಾಗಿದ್ದ ರೈತರು ಈಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X