Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಚುನಾವಣೆಗೆ, ಸರ್ಕಾರಕ್ಕೆ ನಾವು ಯಾವುದೇ...

ಚುನಾವಣೆಗೆ, ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ: ಗೋವಿಂದರಾಜ ಹೆಗ್ಡೆ

ಪ್ರಧಾನಿ ಮೋದಿ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ11 Nov 2024 2:21 PM IST
share
ಚುನಾವಣೆಗೆ, ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ: ಗೋವಿಂದರಾಜ ಹೆಗ್ಡೆ

ಉಡುಪಿ: ಮಹಾರಾಷ್ಟ್ರ ಚುನಾವಣೆಯ ನೆಪದಲ್ಲಿ ಕಾಂಗ್ರೆಸ್‌ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರರಿಂದ ರೂ. 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಗೆ ಕರ್ನಾಟಕದ ಅಬಕಾರಿ ಹಣ ಆರೋಪದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 500, 700, 900 ಕೋಟಿ ಹಣ ನೀಡಿದ್ದೇವೆ ಎನ್ನುತ್ತಿದ್ದಾರೆ. ಚುನಾವಣೆಗೆ, ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ. ದಯವಿಟ್ಟು ಈ ವಿಚಾರವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದರು.

ಬೆಂಗಳೂರಿನಲ್ಲಿ 25ನೇ ತಾರೀಕು ಪ್ರತಿಭಟನಾ ಸಭೆ ಮಾಡಿದ್ದೆವು. 3000ಕ್ಕೂ ಹೆಚ್ಚು ಜನ ಸೇರಿದ್ದೆವು. ಅಬಕಾರಿ ಅಧಿಕಾರಿಗಳು ಪ್ರಮೋಷನ್ ಗೆ ನಾವು ಹಣ ಕೊಡಬೇಕು ಎಂದು ಹೇಳಿದ್ದರು. ಹಣಕೊಟ್ಟು ಟ್ರಾನ್ಸ್ಫರ್ ಮಾಡಿಕೊಳ್ಳುತ್ತಿದ್ದೇವೆ. ಆದ್ದರಿಂದ ನಮಗೆ ಜಾಸ್ತಿ ಲಂಚ ಕೊಡಿ ಎಂದು ಕೇಳುತ್ತಿದ್ದಾರೆ ಎಂದು 3000ಕ್ಕೂ ಅಧಿಕ ಸನ್ನದುದಾರರು ಈ ವಿಚಾರವನ್ನು ಪ್ರತಿಭಟನೆಯಲ್ಲಿ ಹೇಳಿದ್ದೆವು. ಅದನ್ನು ಹೊರತುಪಡಿಸಿದರೆ ನಾವು ಯಾವುದೇ ಆರೋಪ ಮಾಡಿಲ್ಲ. ನಾವು ಯಾರಿಗೂ ಚುನಾವಣೆ ರಾಜಕೀಯಕ್ಕೆ ಹಣ ಕೊಟ್ಟಿಲ್ಲ.‌ ದಯವಿಟ್ಟು ನಮ್ಮ ಹೇಳಿಕೆಯನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದರು.

ಕರ್ನಾಟಕದ ಉಪಚುನಾವಣೆಗೂ ಅಬಕಾರಿ ಹಣ ವಿನಿಯೋಗ ಆರೋಪ ವಿಚಾರವಾಗಿ ಮಾತನಾಡಿದ ಅವರು, ನಾವು ವ್ಯವಹಾರಸ್ಥರು ಸ್ವಾಮಿ. ನಾವ್ಯಾಕೆ ಚುನಾವಣೆಗೆ ಹಣಕೊಡಬೇಕು. ಹಿಂದಿನ ಸರಕಾರಗಳು ಇದ್ದಾಗಲೂ ನಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದೆವು. ಆ ಸರ್ಕಾರ ಇದ್ದಾಗಲೂ ಪ್ರಮೋಷನ್ ಗೆ ಟ್ರಾನ್ಸ್ಫರ್ ಗೆ ಮಂತ್ರಿಗಳು ಹಣ ತೆಗೆದುಕೊಳ್ಳುತ್ತಿದ್ದರು. 15 ವರ್ಷಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿದೆ. ಈಗ ಸಮಸ್ಯೆ ಮತ್ತಷ್ಟು ಉಲ್ಬಣ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.

ಕಟ್ಟಾಸುಬ್ರಹ್ಮಣ್ಯ ನಾಯ್ಡು ಅಬಕಾರಿ ಸಚಿವ ಆಗಿದ್ದಾಗ ಏನಾಗಿದೆ ಗೊತ್ತಿಲ್ವಾ? ಸನ್ನದು ದಾರರಿಗೆ ಸಿಗುವ ಮಾರ್ಜಿನ್ ಶೇಕಡ 20 ರಿಂದ ಶೇಕಡ 10ಕ್ಕೆ ಇಳಿಸಿದ್ದು ಯಾರು? ಇದನ್ನು ಯಾಕೆ ಇಳಿಸಿದರು ಎಂದು ಎಲ್ಲರಿಗೂ ಗೊತ್ತಿದೆ. ನಮ್ಮ ಉದ್ಯಮದಲ್ಲಿ ಬೆಂಕಿ ಬಿದ್ದಿದೆ. ನಮ್ಮ ಸಮಸ್ಯೆ ಬಗೆಹರಿಸಿ ಬೆಂಕಿ ನಂದಿಸುವಂತೆ ಸರ್ಕಾರದ ಮುಂದೆ ಹೋಗಿದ್ದೇವೆ. ಆದರೆ ಬೆಂಕಿ ನಂದಿಸಬೇಡಿ, ನಾನು ಬಿಡಿ ಹಚ್ಚಿಕೊಳ್ಳುತ್ತೇನೆ ಎಂಬಂತೆ ಕೆಲ ಪಕ್ಷಗಳು ವರ್ತಿಸುತ್ತಿವೆ. ನಾವು ತುಂಬಾ ನೊಂದಿದ್ದೇವೆ. 15 ವರ್ಷಗಳಿಂದ ಬಂದ ಎಲ್ಲಾ ಸರಕಾರಗಳಿಂದ ಸಮಸ್ಯೆಯಾಗಿದೆ. ಎಲ್ಲಾ ಸಚಿವರು ಕೂಡ ಟ್ರಾನ್ಸ್ಫರ್ ಗೆ, ಪ್ರಮೋಷನ್ ಗೆ ಲಂಚ ತೆಗೆದುಕೊಳ್ಳುವ ಪದ್ಧತಿ ಚಾಲ್ತಿಯಲ್ಲಿದೆ. ನಮ್ಮನ್ನು ನಮ್ಮಷ್ಟಕ್ಕೇ ಉದ್ಯಮ ಮಾಡಲು ಬಿಡಿ. ಚುನಾವಣಾ ‌ರಾಜಕೀಯಕ್ಕೆ ನಮ್ಮನ್ನು ಎಳೆಯಬೇಡಿ. ಪ್ರಧಾನಮಂತ್ರಿಯವರಿಗೆ ಯಾವ ಆಧಾರದಲ್ಲಿ ಯಾರು ಈ ಮಾಹಿತಿ ನೀಡಿದರು ಅಂತ ಗೊತ್ತಿಲ್ಲ ಎಂದು ಹೇಳಿದರು.

ರಾಜ್ಯಪಾಲರಿಗೆ ದೂರು ಕೊಟ್ಟದ್ದು ನಾವಲ್ಲ. ಆರ್ ಟಿ ಐ ಕಾರ್ಯಕರ್ತ ರಾಜ್ಯಪಾಲರಿಗೆ ದೂರು ನೀಡಿದ್ದಾನೆ. ಚುನಾವಣಾ ರಾಜಕೀಯ ಮಾಡಬೇಡಿ ಅಂತ ಕೈಮುಗಿದು ಕೇಳಿಕೊಳ್ಳುತ್ತೇನೆ. ನವಂಬರ್ 20ರಂದು ನಮ್ಮ ಬೇಡಿಕೆಗಳನ್ನು ಈಡೇರಿಸಲು ನಾವು ಬಂದ್ ನಡೆಸಲಿದ್ದೇವೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X