Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಸುಸಜ್ಜಿತ...

ಉಡುಪಿ ಜಿಲ್ಲೆಯಲ್ಲಿ ಸುಸಜ್ಜಿತ ಪುನರ್‌ವಸತಿ ಕೇಂದ್ರ: ಮಾಧ್ಯಮ ಮಾತುಕತೆಯಲ್ಲಿ ಸಾಮಾಜಿಕ ಕಾರ್ಯಕರ್ತರ ಒಕ್ಕೊರಲಿನ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 July 2023 7:49 PM IST
share
ಉಡುಪಿ ಜಿಲ್ಲೆಯಲ್ಲಿ ಸುಸಜ್ಜಿತ ಪುನರ್‌ವಸತಿ ಕೇಂದ್ರ: ಮಾಧ್ಯಮ ಮಾತುಕತೆಯಲ್ಲಿ ಸಾಮಾಜಿಕ ಕಾರ್ಯಕರ್ತರ ಒಕ್ಕೊರಲಿನ ಆಗ್ರಹ

ಉಡುಪಿ, ಜು.18: ರಕ್ಷಣೆ ಮಾಡಿದ ಮಕ್ಕಳು, ಭಿಕ್ಷುಕರು, ಮಾನಸಿಕ ಅಸ್ವಸ್ಥರು ಹಾಗೂ ಅಸಹಾಯಕ ಮಹಿಳೆಯರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಜಿಲ್ಲೆ ಯಲ್ಲಿ ಯಾವುದೇ ಸರಕಾರಿ ಪುನರ್‌ವಸತಿ ಕೇಂದ್ರ ಇಲ್ಲ. ಈ ಕೊರತೆ ಯಿಂದ ಬಹಳಷ್ಟು ಕಷ್ಟನಷ್ಟಗಳನ್ನು ಅನುಭವಿಸುವಂತಾಗುತ್ತಿದೆ. ಆದುದರಿಂದ ರಾಜ್ಯ ಸರಕಾರ ಅತೀ ಅಗತ್ಯವಾಗಿ ಉಡುಪಿ ಜಿಲ್ಲೆಗೆ ಸುಸಜ್ಜಿತ ಪುನರ್‌ವಸತಿ ಕೇಂದ್ರವನ್ನು ಮಂಜೂರು ಮಾಡಬೇಕು ಎಂದು ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಒಕ್ಕೊರಲಿನ ಆಗ್ರಹ ಮಾಡಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿ ಹಾಗೂ ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟ್ ಸಹಯೋಗದಲ್ಲಿ ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಸಾಮಾಜಿಕ ಕಾರ್ಯ ಕರ್ತರಾದ ಮುಳುಗ ತಜ್ಞ ಈಶ್ವರ ಮಲ್ಪೆ, ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ ಹಾಗೂ ಗಣೇಶ್‌ರಾಜ್ ಸರಳೇಬೆಟ್ಟು ಅವರೊಂದಿಗೆ ಮಾತುಕತೆ ಕಾರ್ಯಕ್ರಮದಲ್ಲಿ ಈ ಒತ್ತಾಯ ಕೇಳಿಬಂತು.

ಜೀವರಕ್ಷಕ ಈಶ್ವರ ಮಲ್ಪೆ ಮಾತನಾಡಿ, ಸರಕಾರ ನಮಗೆ ಉಡುಪಿಯಲ್ಲಿ ಐದು ಎಕರೆ ಜಾಗ ನೀಡಿದರೆ ನಾವೇ ಪುನರ್‌ವಸತಿ ಕೇಂದ್ರವನ್ನು ಸ್ಥಾಪಿಸಿ ಜವಾಬ್ದಾರಿ ವಹಿಸಿಕೊಳ್ಳುತ್ತೇವೆ. ಮಲ್ಪೆ ಬಂದರಿಂದ ಶೇ.50ರಷ್ಟು ಹೂಳು ತೆಗೆದಿದ್ದು, ಇದರಿಂದ ನೀರಿಗೆ ಬಿದ್ದು ಸಾಯುವವರ ಸಂಖ್ಯೆ ಕಡಿಮೆ ಆಗಿದೆ. ಆದರೂ ಉಳಿದ ಶೇ.50ರಷ್ಟು ಹೂಳನ್ನು ಸರಕಾರ ಕೂಡಲೇ ತೆಗೆಯಬೇಕು. ಮಲ್ಪೆ ಬೀಚ್‌ನಲ್ಲಿ ಕಸದ ರಾಶಿ ತುಂಬಿ ಹೋಗಿದೆ. 50-60ಟನ್ ಕಸ ಸಮುದ್ರದಿಂದ ತೀರಕ್ಕೆ ಬಂದು ಬಿದ್ದಿದೆ ಎಂದು ತಿಳಿಸಿದರು.

ಅಪಘಾತ ಹಾಗೂ ನೀರಿ ಬಿದ್ದು ಸಾಯುವ ಪ್ರಕರಣಗಳಲ್ಲಿ ಬಹುತೇಕ ಮಂದಿ ಮದ್ಯ ಅಥವಾ ಮಾದಕ ದ್ರವ್ಯ ಸೇವೆನೆ ಮಾಡಿರುತ್ತಾರೆ. ಆದುದರಿಂದ ಪೊಲೀಸ್ ಇಲಾಖೆ ಈ ಮಾದಕ ದ್ರವ್ಯ ಜಾಲದ ಮೂಲವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಕೂಲಂಕಷವಾಗಿ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಬೇಕು. ಅದೇ ರೀತಿ ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರು ಕೂಡ ಈ ಕುರಿತು ಎಚ್ಚರ ವಹಿಸಬೇಕು ಎಂದು ಅವರು ಮನವಿ ಮಾಡಿದರು.

ನಿತ್ಯಾನಂದ ಒಳಕಾಡು ಮಾತನಾಡಿ, ನಾವು ಅನಾಥ ಮಕ್ಕಳನ್ನು ರಕ್ಷಣೆ ಮಾಡುತ್ತೇವೆ. ಆದರೆ ಸಂಬಂಧಪಟ್ಟವರು ಕೌನ್ಸಿಲಿಂಗ್ ಮಾಡಿ ಅವರನ್ನು ಮತ್ತೆ ಬಿಡುತ್ತಾರೆ. ಯಾಕೆಂದರೆ ಇಲ್ಲಿ ಅವರಿಗೆ ಉಳಿದುಕೊಳ್ಳಲು ಯಾವುದೇ ವ್ಯವಸ್ಥೆ ಇಲ್ಲ. ಅದೇ ರೀತಿ ಭಿಕ್ಷುಕರು, ಮಾನಸಿಕ ಅಸ್ವಸ್ಥರಿಗೆ ಸರಕಾರಿ ಮಟ್ಟದಲ್ಲಿ ಪುನರ್ ವಸತಿ ಕೇಂದ್ರದ ವ್ಯವಸ್ಥೆ ಇಲ್ಲ. ಇದರಿಂದ ಸಾಮಾಜಿಕ ಕಾರ್ಯಕರ್ತರು ಪರದಾಡುವಂತಾಗಿದೆ. ಕೆಲವು ವರ್ಷಗಳ ಹಿಂದೆ ನಾವು ಜಿಲ್ಲಾಧಿಕಾರಿಗೆ ಮನವಿ ಕೊಟ್ಟರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ರಕ್ಷಣೆ ಮಾಡಿದ ನಾವೇ ಸಂತ್ರಸ್ತರಿಂದ ಬೈಯುಗಳ ಕೇಳುವ ಪರಿಸ್ಥಿತಿ ಬಂದಿದೆ ಎಂದರು.

ವಿಶು ಶೆಟ್ಟಿ ಅಂಬಲಪಾಡಿ ಮಾತನಾಡಿ, ಈ ವರ್ಷ ಮಾನಸಿಕ ಸ್ಥಿಮಿತ ಕಳೆದುಕೊಂಡು ತಿರುಗಾಡುತ್ತಿದ್ದ ಮಹಿಳೆಯರನ್ನು ರಕ್ಷಣೆ ಮಾಡಿದ್ದೇನೆ. ಆದರೆ ಅವರಿಗೆ ಪುನರ್‌ವಸತಿ ಕಲ್ಪಿಸಲು ನಮ್ಮ ಯಾವುದೇ ಸೌಲಭ್ಯ ಇಲ್ಲ. ಇವರನ್ನು ಚಿಕಿತ್ಸೆಗಾಗಿ ಹೊರ ಜಿಲ್ಲೆಗೆ ಕರೆದುಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಆದುದರಿಂದ ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ನಿಮ್ಹಾನ್ಸ್ ಮಾದರಿಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕು. ಎಚ್‌ಐವಿ ಸೋಂಕಿತ ಮಹಿಳೆಯರು ಬೀದಿಬದಿ ತಿರುಗಾಡುತ್ತಿದ್ದರೂ ಅವರ ರಕ್ಷಣೆಗೆ ಯಾವುದೇ ವ್ಯವಸ್ಥೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗಣೇಶ್‌ರಾಜ್ ಸರಳೇಬೆಟ್ಟು ಮಾತನಾಡಿ, ಹೆಚ್ಚು ಬೆಂಕಿ ಅನಾಹುತಗಳು ಸಂಭವಿಸುವ ಮಣಿಪಾಲಕ್ಕೆ ಅಗ್ನಿಶಾಮಕ ದಳ ಠಾಣೆ ಮಂಜೂರು ಮಾಡ ಬೇಕು. ಉಡುಪಿ ಜಿಲ್ಲೆಗೆ ಸುಸಜ್ಜಿತ ವಿದ್ಯುತ್ ಚಿತಗಾರ ಬೇಕಾಗಿದೆ. ಪ್ರವಾಸೋದ್ಯಮ ದೃಷ್ಠಿಯಿಂದ ಮಣಿಪಾಲದಲ್ಲಿರುವ ಅರ್ಬಿ ಪಾಲ್ಸ್ ಅಭಿವೃದ್ಧಿ ಪಡಿಸಬೇಕು. ಪರ್ಕಳದ ರಾಷ್ಟ್ರೀಯ ಹೆದ್ದಾರಿ ಕಾಮ ಗಾರಿ ಕೂಡಲೇ ಪೂರ್ಣಗೊಳಿಸಬೇಕು. ಕಾಡು ಪ್ರಾಣಿಗಳ ಹಾವಳಿ ತಡೆಗೆ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮವನ್ನು ಸಂಸ್ಕೃತಿ ಸಿರಿ ಟ್ರಸ್ಟ್‌ನ ಆಡಳಿತ ವಿಶ್ವಸ್ಥ ಹಾಗೂ ವಿಮರ್ಶಕ ಪ್ರೊ.ಮುಳೀಧರ ಉಪಾಧ್ಯ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ವಹಿಸಿದ್ದರು. ಉಡುಪಿ ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಪತ್ರಕರ್ತ ಶಶಿಧರ ಮಾಸ್ತಿಬೈಲು ಸಾಮಾಜಿಕ ಕಾರ್ಯಕರ್ತರನ್ನು ಪರಿಚಯಿಸಿ ದರು. ರಜತ ಮಹೋತ್ಸವ ಸಮಿತಿ ಸಂಚಾಲಕ ಮುಹಮ್ಮದ್ ಶರೀಫ್ ವಂದಿಸಿದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಮೈಕಲ್ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

‘ಆಕ್ಸಿಜನ್ ಸಿಲಿಂಡರ್, ಟಾರ್ಚ್ ಬೇಕು’

ನಮ್ಮ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಗೆ ಹೋಗಿ ನೀರಿಗೆ ಬಿದ್ದ ಹಲವು ಮೃತದೇಹಗಳನ್ನು ಮೇಲಕ್ಕೆ ಎತ್ತಿದ್ದೇನೆ. ಇದಕ್ಕಾಗಿ ನಾನು ಸ್ಕೂಬಾ ಡೈವಿಂಗ್ ತರಬೇತಿ ಪಡೆದುಕೊಂಡಿದ್ದೇನೆ. ಸದ್ಯ ನನಗೆ ಅಗತ್ಯವಾಗಿ ನೀರಿನಡಿಯಲ್ಲಿ ಮೃತದೇಹ ಹುಡುಕಲು ಟಾರ್ಚ್ ಮತ್ತು 150 ಅಡಿ ಆಳದವರೆಗೆ ಹೋಗಲು ಆಕ್ಸಿಜನ್ ಸಿಲಿಂಡರ್ ಬೇಕಾಗಿದೆ. ಸದ್ಯಕ್ಕೆ ನೀರಿನಡಿಯಲ್ಲಿ ಸ್ಪರ್ಶ ಜ್ಞಾನದಿಂದಲೇ ಮೃತದೇಹವನ್ನು ಗುರುತಿಸುತ್ತಿದ್ದೇನೆ ಎಂದು ಮುಳುಗತಜ್ಞ ಈಶ್ವರ್ ಮಲ್ಪೆ ತಿಳಿಸಿದರು.

ಮಲ್ಪೆ ಬೀಚ್‌ನಲ್ಲಿ ಬಹುತೇಕ ಮಂದಿ ಮದ್ಯಪಾನ ಮಾಡಿ ನೀರಿಗೆ ಇಳಿದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದೇ ರೀತಿ ಸಮುದ್ರದ ಸೆಳೆತದ ಬಗ್ಗೆ ಅರಿವು ಇಲ್ಲದವರು ಕೂಡ ಸಾವುನೋವು ಅನುಭವಿಸುತ್ತಿದ್ದಾರೆ. ಆದುದರಿಂದ ಪ್ರತಿದಿನ ಸಾವಿರಾರು ಮಂದಿ ಆಗಮಿಸುವ ಮಲ್ಪೆ ಬೀಚ್‌ಗೆ 30-40 ಜೀವ ರಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಜೀವರಕ್ಷಕರನ್ನು ನೇಮಕ ಮಾಡಿಕೊಳ್ಳದ ಹೋಮ್ ಸ್ಟೇಗಳಿಗೆ ಸರಕಾರ ಅನುಮತಿ ನೀಡಬಾರದು ಎಂದು ಅವರು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X