Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರಧಾನಿ ಮೋದಿ ಮಾಡಿದ ತಪ್ಪಿಗೆ ದೇಶದ...

ಪ್ರಧಾನಿ ಮೋದಿ ಮಾಡಿದ ತಪ್ಪಿಗೆ ದೇಶದ ಜನರೇಕೆ ಶಿಕ್ಷೆ ಅನುಭವಿಸಬೇಕು : ಶುಭದ ರಾವ್

ವಾರ್ತಾಭಾರತಿವಾರ್ತಾಭಾರತಿ12 May 2026 1:07 PM IST
share
ಪ್ರಧಾನಿ ಮೋದಿ  ಮಾಡಿದ ತಪ್ಪಿಗೆ ದೇಶದ ಜನರೇಕೆ ಶಿಕ್ಷೆ ಅನುಭವಿಸಬೇಕು : ಶುಭದ ರಾವ್

ಕಾರ್ಕಳ : ಮಧ್ಯಪ್ರಾಚ್ಯ ಯುದ್ದದ ಕಾರಣದಿಂದಾಗಿ ದೇಶದ ಉತ್ಪಾದನಾ ಕ್ಷೇತ್ರದಲ್ಲಿ ಮತ್ತು ಜನಜೀವನದ ಮೇಲೆ ಮುಂದೆ ಭಾರಿ ದುಷ್ಪರಿಣಾಮಗಳು ಬೀಳಲಿವೆ ಎಂದು ಲೋಕಸಭಾ ವಿರೋದಪಕ್ಷದ ನಾಯಕ ರಾಹುಲ್ ಗಾಂಧಿಯವರು ಯುದ್ಧದ ಆರಂಭದ ದಿನಗಳಿಂದಲೂ ಸರ್ಕಾರವನ್ನು ಎಚ್ಚರಿಸುತ್ತಾ ಬಂದಿದ್ದಾರೆ. ಆದರೆ ಆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಸರ್ವಾಧಿಕಾರಿ ಧೋರಣೆ ಅನುಸರಿಸಿದ ಕಾರಣದಿಂದಾಗಿ ದೇಶಕ್ಕೆ ಇಂದು ಆರ್ಥಿಕ ದಿಗ್ಭಂದನದಂತಹ ಪರಿಸ್ಥಿತಿ ಎದುರಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಹೇಳಿದ್ದಾರೆ.

ಅಂದು ರಾಹುಲ್ ಗಾಂಧಿ ಮಾತಿಗೆ ಅಪಹಾಸ್ಯ ಮಾಡಿದ ಮೋದಿಯವರು ಇಂದು ದೇಶದ ಜನರಿಗೆ ಚಿನ್ನ ಖರೀದಿಸಬೇಡಿ, ಕಾರಲ್ಲಿ ಓಡಾಟ ಮಾಡಬೇಡಿ, ವಿದೇಶ ಪ್ರಯಾಣ ಮಾಡಬೇಡಿ, ರಸಗೊಬ್ಬರ ಖರೀದಿ ಮಾಡಬೇಡಿ, ಮನೆಯಿಂದ ಹೊರಗೆ ಬರಬೇಡಿ ಎನ್ನುವ ಬಿಟ್ಟಿ ಸಲಹೆಯನ್ನು ನೀಡಿದ್ದಾರೆ. ಪ್ರಧಾನಿ ಮೋದಿಯವರು ಮಾಡಿದ ತಪ್ಪಿಗೆ ದೇಶದ ಜನರು ಯಾಕೆ ಶಿಕ್ಷೆ ಅನುಭವಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ನಡೆಸುವವರು ವಿರೋಧ ಪಕ್ಷಗಳ ನಾಯಕರ ಮಾತಿಗೂ ಮನ್ನಣೆ ನೀಡಬೇಕು, ವಿರೋಧ ಪಕ್ಷದ ನಾಯಕರ ಮಾತಿನಲ್ಲಿ ದೇಶದ ಜನರ ಹಿತ ಅಡಗಿದೆ ಎನ್ನುವುದನ್ನು ಈಗಲಾದರೂ ಪ್ರಧಾನಿ ಮೋದಿಯವರು ಅರ್ಥ ಮಾಡಿಕೊಳ್ಳಲಿ. ದೇಶಕ್ಕೆ ಸಂಕಟ ಬಂದಾಗ ಆಡಳಿತ ಪಕ್ಷಗಳು ಮತ್ತು ವಿರೋಧ ಪಕ್ಷಗಳು ಜೊತೆಯಾಗಿ ದೇಶದ ಜನರಿಗಾಗಿ ಕೆಲಸ ಮಾಡುವುದು ಪ್ರಜಾಪ್ರಭುತ್ವದ ಪ್ರಧಾನ ಆಶಯವಾಗಿದೆ, ಆದರೆ ಸರ್ವಾಧಿಕಾರಿ ಧೋರಣೆಯ ನರೇಂದ್ರ ಮೋದಿಯವರು ಇಂದು ಯಾರ ಮಾತನ್ನು ಕೇಳದೆ ದೇಶವನ್ನು ಆರ್ಥಿಕ ದಿಗ್ಬಂಧನಕ್ಕೆ ಕೊಂಡೊಯ್ದಿದ್ದಾರೆ. ದೇಶಕ್ಕೆ ಇಂತಾ ಪರಿಸ್ಥಿತಿಯನ್ನು ತಂದೊದಗಿಸಿದ ಪ್ರಧಾನಿ ಮೋದಿ ದೇಶದ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ದೇಶದ ಪ್ರಜೆಗಳು ಯಾವ ರೀತಿಯ ಬಟ್ಟೆಯನ್ನು ತೊಡಬೇಕು, ಯಾವ ರೀತಿಯ ಕೇಶವಿನ್ಯಾಸ ಮಾಡಿಸಿಕೊಳ್ಳಬೇಕು, ಯಾವ ರೀತಿಯ ಆಭರಣಗಳನ್ನ ತೊಡಬೇಕು, ಯಾವ ರೀತಿಯ ವಾಹನಗಳಲ್ಲಿ ಓಡಾಟ ಮಾಡಬೇಕು, ಯಾವ ದೇಶಗಳಿಗೆ ಪ್ರವಾಸ ಮಾಡಬೇಕು ಎಂದು ಆಡಳಿತ ನಡೆಸುವವರೇ ನಿರ್ಧಾರ ಮಾಡುವುದು ಇದು ಉತ್ತರ ಕೊರಿಯಾದ ಸರ್ವಾಧಿಕಾರಿ ಶೈಲಿಯಾಗಿದೆ. ಪ್ರಧಾನಿ ಮೋದಿಯವರ ತಪ್ಪು ಆರ್ಥಿಕ ನೀತಿಗಳಿಂದಾಗಿ ದೇಶಕ್ಕೆ ಇಂತಾ ಪರಿಸ್ಥಿತಿ ಎದುರಾಗಿದೆ, ಪ್ರಧಾನಿಯವರು ಇನ್ನಾದರೂ ತಜ್ಙರ ಅಭಿಪ್ರಾಯವನ್ನು ಪಡೆದು ದೇಶದ ಜನರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲಿ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags

Prime Minister ModiShubhada RaokarkalaCongressBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X