ಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳೆ ನಾಪತ್ತೆ

ಉಡುಪಿ, ಜ.13: ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ, ಜನವರಿ 9ರಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ವೇತ (21) ಎಂಬ ಮಹಿಳೆ ಅದೇ ದಿನ ಅಪರಾಹ್ನ 12:15ರ ಬಳಿಕ ನಾಪತ್ತೆಯಾಗಿದ್ದಾರೆ.
5 ಅಡಿ 4 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಮೈಕಟ್ಟು, ಸಪೂರ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





