Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಸಂಸ್ಕಾರ’ ನೀಡುವ ಯಕ್ಷಗಾನ ಕಲಾವಿದರು...

‘ಸಂಸ್ಕಾರ’ ನೀಡುವ ಯಕ್ಷಗಾನ ಕಲಾವಿದರು ಅಭಿನಂದನೀಯರು: ಪೇಜಾವರಶ್ರೀ

ಕಟೀಲು: ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ19 Nov 2023 7:24 PM IST
share
‘ಸಂಸ್ಕಾರ’ ನೀಡುವ ಯಕ್ಷಗಾನ ಕಲಾವಿದರು ಅಭಿನಂದನೀಯರು: ಪೇಜಾವರಶ್ರೀ

ಕಟೀಲು : ಸಂಸ್ಕಾರ ನೀಡುವ, ಸಂಸ್ಕೃತಿ ಉಳಿಸುವ ಶ್ರೀಮಂತ ಕಲೆ ಯಕ್ಷಗಾನದ ಕಲಾವಿದರ ತ್ಯಾಗ, ಶ್ರಮ ದೊಡ್ಡದು. ಅವರು ಸದಾ ಅಭಿನಂದನೀಯರು. ಇಂತಹ ಕಲಾವಿದರನ್ನು ಗೌರವಿಸುವುದು ಸ್ತುತ್ಯರ್ಹ ಎಂದು ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಸರಸ್ವತಿ ಸದನದಲ್ಲಿ ಶನಿವಾರ ಸಂಜೆ ನಡೆದ ಉಡುಪಿ ಯಕ್ಷಗಾನ ಕಲಾರಂಗದ ವಾರ್ಷಿಕ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅನುಗ್ರಹ ಸಂದೇಶದಲ್ಲಿ ಮಾತನಾಡುತಿದ್ದರು.

ಕರಾವಳಿ ಜಿಲ್ಲೆಗಳ ಯಕ್ಷಗಾನ ಕಲಾವಿದರಾದ ಚಿದಂಬರಬಾಬು, ಕೋಟ ಗೋವಿಂದ ಉರಾಳ, ಮುಂಡ್ಕೂರು ವಸಂತ ಶೆಟ್ಟಿ, ತೀರ್ಥಹಳ್ಳಿ ಶಿವಶಂಕರ ಭಟ್, ಸಿದ್ದಾಪುರ ಸಂಜೀವ ಕೊಠಾರಿ, ಸೀತೂರು ಅನಂತಪದ್ಮನಾಭ ರಾವ್, ಕವ್ವಾಳೆ ಗಣಪತಿ ರಾಮಚಂದ್ರ ಭಾಗ್ವತ, ಮಂದಾರ್ತಿ ರಘುರಾಮ ಮಡಿವಾಳ, ಕೋಡಿ ವಿಶ್ವನಾಥ ಗಾಣಿಗ, ಸಿದ್ದಾಪುರ ಅಶೋಕ್ ಭಟ್, ಗುಣವಂತೆ ಸುಬ್ರಾಯ ನಾರಾಯಣ ಭಂಡಾರಿ, ಚೋರಾಡಿ ವಿಠಲ ಕುಲಾಲ್, ಎರ್ಮಾಳು ವಾಸುದೇವ ರಾವ್, ಈಚಲಕೊಪ್ಪ ಪ್ರಭಾಕರ ಹೆಗಡೆ, ಮಧೂರು ರಾಧಾಕೃಷ್ಣ ನಾವಡ, ಪಡುಬಿದ್ರೆ ರತ್ನಾಕರ ಆಚಾರ್ಯ, ಗುಂಡಿಮಜಲು ಗೋಪಾಲ ಭಟ್, ಇಡುವಾಣಿ ತ್ರ್ಯಯಂಬಕ ಹೆಗಡೆ, ಸಿದ್ದಕಟ್ಟೆ ಸದಾಶಿವ ಶೆಟ್ಟಿರ್ಗಾ, ಕಾಯರ್ತ್ತಡ್ಕ ವಸಂತ ಗೌಡ ಹಾಗೂ ಶ್ರೀಧರ ಪಂಜಾಜೆ ಈ ಕಲಾವಿದರನ್ನು ತಲಾ 20 ಸಾವಿರ ರೂ. ನಗದು ಸಹಿತ ಫಲಕ ನೀಡಿ ಸಂಮಾನಿಸಲಾಯಿತು.

ಶ್ರೀಸ್ವರ್ಣವಲ್ಲೀ ಮಠ ಆಶ್ರಯದ ಯಕ್ಷಶಾಲ್ಮಲಾ ಸಂಸ್ಥೆಗೆ ಶ್ರೀವಿಶ್ವೇಶ ತೀರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಯೊಂದಿಗೆ 50 ಸಾವಿರ ರೂ. ನಗದು ಮತ್ತು ಫಲಕವನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಸೋಂದಾ ನಾಗರಾಜ ಜೋಶಿ ಪ್ರಶಸ್ತಿ ಸ್ವೀಕರಿಸಿದರು.

ಯಕ್ಷಗಾನ ಕಲಾರಂಗದ ಹಿರಿಯ ಕಾರ್ಯಕರ್ತರಾದ ಮುದ್ರಾಡಿ ವಿಜಯಕುಮಾರ್ ಇವರಿಗೆ ಬೆಳ್ಳಿಯ ಹರಿವಾಣದಲ್ಲಿ ಫಲವಸ್ತು ನೀಡಿ ’ಯಕ್ಷ ಚೇತನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಇತ್ತೀಚಿಗೆ ನಿಧನರಾದ ಸಿಗಂಧೂರು ಮೇಳದ ಭಾಗವತ ರಾಮಚಂದ್ರ ಜಿ. ನಾಯ್ಕ್ ಅವರ ಪತ್ನಿ ಗೀತಾ ಆರ್. ನಾಯ್ಕ್‌ಗೆ 50 ಸಾವಿರ ರೂ. ಸಾಂತ್ವನ ನಿಧಿ ನೀಡಲಾಯಿತು.

ಕಟೀಲು ದೇಗುಲದ ಅನುವಂಶಿಕ ಪ್ರಧಾನ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ ಹಾಗೂ ಕಲ್ಲಾಡಿ ದೇವೀಪ್ರಸಾದ ಶೆಟ್ಟರನ್ನು ಗೌರವಿಸಲಾಯಿತು. ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.

ಸುವರ್ಣ ಪ್ರತಿಷ್ಠಾನದ ಪ್ರಭಾಕರ ಸುವರ್ಣ, ನಮ್ಮ ಕುಡ್ಲದ ಲೀಲಾಕ್ಷ ಬಿ. ಕರ್ಕೇರ, ಎಂ.ಕೆ. ಭಟ್ ಕಡತೋಕ, ಕೆ. ಸದಾಶಿವ ಭಟ್ ಅತಿಥಿಗಳಾಗಿ ಪಾಲ್ಗೊಡಿದ್ದರು.

ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು.ಜೊತೆ ಕಾರ್ಯದರ್ಶಿ ನಾರಾಯಣ ಎಂ ಹೆಗಡೆ ವಿಜೇತರನ್ನು ಪರಿಚಯಿಸಿದರು. ಸನ್ಮಾನಿತರ ಕುರಿತ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

ಸಭೆಯ ಪೂರ್ವದಲ್ಲಿ ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವಿದ್ಯಾರ್ಥಿಗಳಿಂದ ‘ಶಶಿಪ್ರಭಾ ಪರಿಣಯ’ ಬಡಗುತಿಟ್ಟು ಯಕ್ಷಗಾನ ಪ್ರದರ್ಶನಗೊಂಡಿತು. ಬಳಿಕ ತೆಂಕು-ಬಡಗು- ಕರ್ನಾಟಕ ಶಾಸ್ತ್ರೀಯ ಸಂಗೀತ ಇವುಗಳ ’ರಾಗ ಸಂಯೋಗ ’ ಮತ್ತು ತೆಂಕುತಿಟ್ಟು ಕಲಾವಿದರಿಂದ ‘ಶ್ರೀಮನೋಹರ ಸ್ವಾಮಿ ಪರಾಕು’ ಯಕ್ಷಗಾನ ರೂಪಕ ಪ್ರಸ್ತುತಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X