ಶ್ರೀವಿಶ್ವೇಶತೀರ್ಥ ಪ್ರಶಸ್ತಿಗೆ ಬೆಂಗಳೂರಿನ ಯಕ್ಷಕಲಾ ಅಕಾಡೆಮಿ ಆಯ್ಕೆ
ಉಡುಪಿ: ಯಕ್ಷಗಾನ ಕಲಿಕೆ, ಪ್ರದರ್ಶನ, ಪ್ರಸಾರಕ್ಕೆ ಸಂಬಂಧಿಸಿ ದಂತೆ ವಿಶಿಷ್ಟ ರೀತಿಯ ಕಲಾಸೇವೆಗೈಯುತ್ತಿರುವ, ಕಲಾವಿದ ಕೆ. ಕೃಷ್ಣಮೂರ್ತಿ ತುಂಗ ನಿರ್ದೇಶನದ ಯಕ್ಷಕಲಾ ಅಕಾಡೆಮಿ ಬೆಂಗಳೂರು ಸಂಸ್ಥೆಯು, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಯಾಗಿದೆ.
ಪ್ರಶಸ್ತಿಯು 1,00,000ರೂ. ನಗದು ಮತ್ತು ಪ್ರಶಸ್ತಿ ಪರಿಕರಗಳ ನ್ನೊಳಗೊಂಡಿದೆ. ಪ್ರಶಸ್ತಿ ಪ್ರದಾನ ನವೆಂಬರ್ 23ರ ರವಿವಾರ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಲಿದೆ. ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಸ್ಥೆ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
Next Story





