Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯತ್ನಾಳ್‌ಗೆ ಹಿಂದೂ - ಮುಸ್ಲಿಂ ಬಿಟ್ಟು...

ಯತ್ನಾಳ್‌ಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ1 Nov 2024 8:53 PM IST
share
ಯತ್ನಾಳ್‌ಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಜಿಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಫ್ ಸೊತ್ತುಗಳನ್ನು ರಾಷ್ಟ್ರೀಕರಣಗೊಳಿಸಿ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಿಡಿಕಾರಿದರು.

ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ. ಅದನ್ನು ಹೇಳಿ ಕೊಂಡೆ ಅವರು ಗೆದ್ದುಕೊಂಡು ಬಂದವರು. ಇದು ಭಾರತ ದೇಶ. ಇಲ್ಲಿ ಸರ್ವಧರ್ಮ ಸಮ ಬಾಳು- ಸಮಪಾಲು ಎಂಬ ಧ್ಯೇಯವಾಕ್ಯದೊಂದಿಗೆ ಮಹಾತ್ಮ ಗಾಂಧಿ, ಅಂಬೇಡ್ಕರ್ ಹೇಳಿ ಕೊಟ್ಟಂತೆ ನಡೆದುಕೊಳ್ಳುವುದು ನಮ್ಮ ಧರ್ಮ. ಆದರೆ ವಸುದೈವಕ ಕುಟುಂಬಂ ಎಂದು ಬಾಯಲ್ಲಿ ಹೇಳುವ ಬಿಜೆಪಿ ಹೇಳುವುದು ಒಂದು, ಕೃತಿ ಇನ್ನೊಂದು ಎಂದರು.

ಎಚ್.ವಿಶ್ವನಾಥ್ ಹೇಳಿಕೆಗೆ ಗರಂ: ಬಿಯರ್ ದರ ಸಿಕ್ಕಾಪಟ್ಟೆ ಜಾಸ್ತಿ ಮಾಡಿ ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ ಎಂಬ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮಹಿಳೆಯರಿಗೆ ಮೊದಲು ಗೌರವ ಕೊಡಿ, ಬಿಯರ್ ಗಿಯರ್ ಆಮೇಲೆ ಮಾತಾಡಿ. ಭಾಗ್ಯ ಯೋಜನೆಗಳಿಂದ ಜಿಡಿಪಿ ಜಾಸ್ತಿಯಾಗಿದೆ. ವಿಶ್ವನಾಥ್‌ರಂಥ ಹಿರಿಯರು ಮೊಸರಿನಲ್ಲಿ ಕಲ್ಲು ಹುಡುಕುವುದನ್ನು ಬಿಡಲಿ ಎಂದು ಕಿಡಿಕಾರಿದರು.

ರಾಜ್ಯದಲ್ಲಿ, ದೇಶದಲ್ಲಿ ಮಹಿಳೆಯರಿಗೆ ಉತ್ತೇಜನ ಕೊಡಲು ಮೊದಲ ಬಾರಿ ಯೋಜನೆ ಮಾಡಿದ್ದೇವೆ. ಈಗ ರಾಜ್ಯದಲ್ಲಿ ಮಹಿಳಾ ಸಬಲೀಕರಣ ನಡೆಯುತ್ತಿದೆ. ಬಸವಣ್ಣನ ನಾಡಿನಲ್ಲಿ ಮಹಿಳೆಯರನ್ನು ಸರಿಸಮನಾಗಿ ಕಾಣಿರಿ ಎಂದು ಹೇಳಿದರು.

ಶೀಘ್ರವೇ ಉಡುಪಿಯಲ್ಲಿ ಜನತಾ ದರ್ಶನ ಮಾಡುತ್ತೇವೆ. ಉಡುಪಿ ಜಿಲ್ಲೆಯಲ್ಲಿ ಧರ್ಮ ದಂಗಲ್‌ಗೆ ಅವಕಾಶ ಕೊಡಲ್ಲ. ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ ಎಂದು ಸಚಿವರು ತಿಳಿಸಿದರು.

ಕಾಂಗ್ರೆಸ್ಸಿಗರು ನಗರ ನಕ್ಸಲರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಧಾನಮಂತ್ರಿಗಳು ಯಾವ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಪಕ್ಷಾತೀತವಾಗಿ ನರೇಂದ್ರ ಮೋದಿ ನಮ್ಮ ಪ್ರಧಾನಿಗಳು. ನಮ್ಮ ಪ್ರಧಾನಿ ಮೇಲೆ ನಮಗೆ ಗೌರವ ಇದೆ. ಕಾಂಗ್ರೆಸ್ಸನ್ನು ಗುರಿಯಾಗಿಸಿ ಅವರು ಈ ಮಾತನಾಡಿದ್ದರೆ ಅದು ಅಸಂವಿಧಾನಿಕ ಮಾತಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X