ಯುವತಿ ನಾಪತ್ತೆ

ಉಡುಪಿ, ನ.19: ಬೈಂದೂರು ತಾಲೂಕು ಹೇರೂರು ಗ್ರಾಮದ ರಾಗಿಹಕ್ಲು ಗದ್ದೆಮನೆ ನಿವಾಸಿ ಸುಮಿತ್ರಾ (26) ಎಂಬ ಯುವತಿ ನವೆಂಬರ್ 13ರಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಉಡುಪಿ ಬನ್ನಂಜೆಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಕಾಣೆಯಾಗಿದ್ದಾರೆ.
5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ. ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಉಪ ನಿರೀಕ್ಷಕರು ಮೊ.ನಂ: 9080805445ಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




