ಮಣಿಪಾಲ| ಮಹಿಳಾ ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ: ಕೊಡವೂರಿನ ಯುವಕನ ಬಂಧನ

ಸಾಗರ್
ಮಣಿಪಾಲ: ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆಗೆ ಯತ್ನಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಆರೋಪದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಕೊಡವೂರು ಗ್ರಾಮದ ಜುಮಾದಿನಗರ ನಿವಾಸಿ ಸಾಗರ್(25) ಬಂಧಿತ ಆರೋಪಿ. ಈತ ಜು.27ರಂದು ನಸುಕಿನ ವೇಳೆ 2.30ರ ಸುಮಾರಿಗೆ ಮಣಿಪಾಲದಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದು, ಈ ಬಗ್ಗೆ ಕರ್ತವ್ಯ ದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದ್ದರು.
ಆಗ ಆತ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಪ್ರಯತ್ನಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದನು ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Next Story





