Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸುಂದರ ಬದುಕಿಗೆ ಯುವಜನತೆ ಸನ್ಮಾರ್ಗದಲ್ಲಿ...

ಸುಂದರ ಬದುಕಿಗೆ ಯುವಜನತೆ ಸನ್ಮಾರ್ಗದಲ್ಲಿ ನಡೆಯಬೇಕು: ಎಂ.ಎ. ಗಫೂರ್

ವಾರ್ತಾಭಾರತಿವಾರ್ತಾಭಾರತಿ1 Aug 2026 7:55 PM IST
share
ಸುಂದರ ಬದುಕಿಗೆ ಯುವಜನತೆ ಸನ್ಮಾರ್ಗದಲ್ಲಿ ನಡೆಯಬೇಕು: ಎಂ.ಎ. ಗಫೂರ್

ಉಡುಪಿ, ಆ.1: ಭಾರತದ ನೆಲದಲ್ಲಿ ಜನಿಸಿದ ಅನೇಕ ಸಾಧು-ಸಂತ ಮಹಂತರು ತಮ್ಮ ಅನುಭವ ಜ್ಞಾನವನ್ನು ದ್ವಿಪದಿ, ತ್ರಿಪದಿ, ವಚನ ಹಾಗೂ ಸಾಹಿತ್ಯಗಳ ಮೂಲಕ ಸಮಾಜಕ್ಕೆ ನೀಡಿದ್ದಾರೆ. ಇವರಲ್ಲಿ ವ್ಯಸನಮುಕ್ತ ಸಮಾಜ ನಿರ್ಮಿಸಿ ಸುಂದರ ಬದುಕಿಗೆ ಪ್ರೇರಣೆ ನೀಡಿದ ಮಹಾಂತ ಡಾ.ಶಿವಯೋಗಿ ಸ್ವಾಮೀಜಿಗಳು ನಿತ್ಯ ಸ್ಮರಣೀಯರು ಎಂದು ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದ್ದಾರೆ.

ಶನಿವಾರ ನಗರದ ನೇತ್ರಜ್ಯೋತಿ ಕಾಲೇಜಿನ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ನೇತ್ರಜ್ಯೋತಿ ಕಾಲೇಜು, ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತ ಆಶ್ರಯ ದಲ್ಲಿ ನಡೆದ ಡಾ. ಮಹಾಂತ್ ಶಿವಯೋಗಿ ಸ್ವಾಮೀಜಿ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಯುವಜನತೆ ಇಂದು ವ್ಯಸನಗಳ ದಾಸರಾಗಿ ಬದುಕನ್ನು ಹಾಳುಮಾಡಿ ಕೊಳ್ಳುತ್ತಿರುವುದು ಕಳವಳಕಾರಿ ಸಂಗತಿ. ಇಂಥ ಸಾಮಾಜಿಕ ಪಿಡುಗನ್ನು ಹೊಡೆದೋಡಿಸಲು ಸ್ವಾಮೀಜಿಗಳು ಅಂದೇ ಕಾರ್ಯಪ್ರವೃತ್ತರಾಗಿದ್ದರು. ಕುಡಿತ ಮತ್ತಿತರ ದುಶ್ಚಟಗಳ ದಾಸರಾದವರನ್ನು ಸರಿದಾರಿಗೆ ತರಲು, ದೇಶದ ಉತ್ತಮ ಪ್ರಜೆಯಾಗಿಸಲು, ಹೆತ್ತವರಿಗೆ ಒಳ್ಳೆಯ ಮಕ್ಕಳಾಗಲು ಪ್ರೇರೇಪಿಸಿ ಸ್ವಾಭಿಮಾನ ಮತ್ತು ಸೌಹಾರ್ದತೆಯ ಸಮಾಜ ಕಟ್ಟಲು ಅವರು ಅನವರತ ಶ್ರಮಿಸಿದರು ಎಂದರು.

ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತಿದ್ದು ಯುವಜನತೆ ಮಾದಕ ವಸ್ತುಗಳ ಆಮಿಷಗಳಿಗೆ ಬಲಿಯಾಗದೆ ಎಚ್ಚರವಹಿಸಬೇಕು ಎಂದರು.

ಜಿಲ್ಲಾ ಸರ್ಜನ್ ಡಾ.ಅಶೋಕ್ ಮಾತನಾಡಿ, ಸರಕಾರವು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕಟಿಬದ್ದವಾಗಿದೆ ಎನ್ನುವುದಕ್ಕೆ ಸ್ವಾಮೀಜಿಗಳ ಜನ್ಮದಿನ ವನ್ನು ವ್ಯಸನಮುಕ್ತ ದಿನವನ್ನಾಗಿ ಆಚರಿಸುತ್ತಿರುವುದೇ ಸಾಕ್ಷಿ. ಶೈಕ್ಷಣಿಕ ವಾಗಿ ಮುಂದಿರುವ ಉಭಯ ಜಿಲ್ಲೆಗಳಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚುತ್ತಿರುವುದು ಚಿಂತೆಗೀಡುಮಾಡುವ ವಿಚಾರ. ಈ ಕುರಿತು ಯುವ ಸಮಾಜಕ್ಕೆ ಜಾಗೃತಿ ಮೂಡಿಸುವುದು ಅಗತ್ಯ ಎಂದರು.

ವಿಶೇಷ ಉಪನ್ಯಾಸ ನೀಡಿದ ಹಾರಾಡಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಹಾಗೂ ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮಾತನಾಡಿ, ಶಿವಯೋಗಿ ಸ್ವಾಮೀಜಿಗಳು ಮೂಢನಂಬಿಕೆಗಳ ಬಗ್ಗೆ ಹಾಗೂ ವ್ಯಸನಗಳ ಬಗ್ಗೆ ಜನಜಾಗೃತಿ ಮೂಡಿಸಲು ಆ ಕಾಲದಲ್ಲಿ ಜಾತ್ರೆ ಮಾಡಿ 15 ಸಾವಿರಕ್ಕೂ ಹೆಚ್ಚು ಜನರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದರು ಎಂದು ಅವರು ಹೇಳಿದರು.

ನೇತ್ರಜ್ಯೋತಿ ಕಾಲೇಜಿನ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗೌರಿ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತು ಗಳಲ್ಲಿ ಡಾ.ಶಿವಯೋಗಿಗಳ ಕುರಿತು ಮಾಹಿತಿ ನೀಡಿದರು. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಪ್ಪರಗಿ ಗ್ರಾಮದಲ್ಲಿ 1930 ಆಗಸ್ಟ್ 01 ರಂದು ಜನಿಸಿದ ಡಾ.ಮಹಾಂತ ಶಿವಯೋಗಿಗಳು ತಮ್ಮ 10ನೇ ವಯಸ್ಸಿಗೆ ಸವದಿಯ ರಕ್ತಮಠದ ಕಿರಿಯ ಸ್ವಾಮಿಗಳಾ ದರು. ಅವರು ಅನೇಕ ಸಮಾಜ ಸುಧಾರಣೆಗಳನ್ನು ಕೈಗೊಂಡಿದ್ದು ಇದರಲ್ಲಿ ಪ್ರಮುಖವಾಗಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ 1975ರಲ್ಲಿ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಟವಾದುದು ಎಂದು ವಿವರಿಸಿದರು.

ಕುಡಿತದ ಚಟದಿಂದ ಸಾವಿರಾರು ಕುಟುಂಬಗಳು ಹಾಳಾಗಿರುವುದನ್ನು ಅರಿತು, ಇಂತಹ ದುಶ್ಚಟಗಳಿಗೆ ಒಳಗಾದ ವರನ್ನು ಚಟಮುಕ್ತಗೊಳಿಸುವ ಉದ್ದೇಶದಿಂದ ಮಹಾಂತ ಜೋಳಿಗೆ ಯೋಜನೆ ಆರಂಭಿಸಿ ಮನೆ ಮನೆಗೆ ತೆರಳಿ ದುಶ್ಚಟಗಳನ್ನು ಬಿಡುವಂತೆ ಮನವಿ ಮಾಡುತ್ತಿದ್ದರು. ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನವಾದ ಆಗಸ್ಟ್ 01 ಅನ್ನು ರಾಜ್ಯ ಸರ್ಕಾರವು ವ್ಯಸನ ಮುಕ್ತ ದಿನವನ್ನಾಗಿ ಆಚರಿಸಿ ಸಾರ್ವಜನಿಕರು ಹಾಗೂ ಯುವಜನತೆ ವ್ಯಸನ ಗಳಿಂದ ಮುಕ್ತವಾಗಲು ಪ್ರೇರಣೆ ನೀಡುತ್ತಿದೆ ಎಂದರು.

ಉಪನ್ಯಾಸಕರಾದ ಅಶ್ವಿನಿ ಮಾದಕ ವಸ್ತು ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದರು.ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಮಧ್ವ ವಲ್ಲಭ ಆಚಾರ್ಯ, ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಚೀಫ್ ಕೋ-ಆರ್ಡಿನೇಟರ್ ಮಾಧವ ಪೂಜಾರಿ ನಿರೂಪಿಸಿ, ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X