Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಸೈಯದ್ ಅಲಿ ಕ್ಯಾಂಪಸ್ ನಲ್ಲಿ ಡಾ. ಎಂ.ಟಿ....

ಸೈಯದ್ ಅಲಿ ಕ್ಯಾಂಪಸ್ ನಲ್ಲಿ ಡಾ. ಎಂ.ಟಿ. ಹಸನ್ ಬಾಪಾ ಮೆಮೋರಿಯಲ್ ಹಾಲ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Aug 2025 6:42 PM IST
share
ಸೈಯದ್ ಅಲಿ ಕ್ಯಾಂಪಸ್ ನಲ್ಲಿ ಡಾ. ಎಂ.ಟಿ. ಹಸನ್ ಬಾಪಾ ಮೆಮೋರಿಯಲ್ ಹಾಲ್ ಉದ್ಘಾಟನೆ

ಭಟ್ಕಳ : ಶಿಕ್ಷಣ ಪ್ರೇಮಿ ಹಾಗೂ ತರಬಿಯತ್ ಎಜ್ಯುಕೇಶನ್ ಸೊಸೈಟಿಯ ಸ್ಥಾಪಕಾಧ್ಯಕ್ಷ ದಿವಂಗತ ಡಾ. ಎಂ.ಟಿ. ಹಸನ್ ಬಾಪಾ ಅವರ ಸ್ಮರಣಾರ್ಥ ಭಟ್ಕಳದ ಜಾಮಿಯಾಬಾದ್ ರಸ್ತೆಯ ಸೈಯ್ಯದ್ ಅಲಿ ಕ್ಯಾಂಪಸ್‌ನಲ್ಲಿರುವ ಶಮ್ಸ್ ಪಿಯು ಕಾಲೇಜ್ ಮತ್ತು ನ್ಯೂ ಶಮ್ಸ್ ಸ್ಕೂಲ್‌ನಲ್ಲಿ ನಿರ್ಮಿತವಾದ ನೂತನ ಸಭಾಂಗಣವನ್ನು ಲೋಕಾರ್ಪಣೆಗೊಳಿಸಲಾಯಿತು.

ರಿಬ್ಬನ್ ಕತ್ತರಿಸುವ ಮೂಲಕ ಸಭಾಂಗಣವನ್ನು ಉದ್ಘಾಟಿಸಿದ ಡಾ. ಹಸನ್ ಬಾಪಾ ಅವರ ಪುತ್ರ ಅನಂ ಆಲಾ ಎಂ.ಟಿ., ತಮ್ಮ ತಂದೆಯವರ ಶಿಕ್ಷಣ ಕ್ಷೇತ್ರದ ಕೊಡುಗೆಯನ್ನು ಸ್ಮರಿಸಿದರು. “ತಂದೆಯವರು ಈ ಸಂಸ್ಥೆಯ ಬೆಳವಣಿಗೆಗೆ ನೀಡಿದ ಕೊಡುಗೆ ಅಪಾರ. ಅವರ ಸ್ಮರಣಾರ್ಥ ಈ ಸಭಾಂಗಣವನ್ನು ಉದ್ಘಾಟಿಸುವುದು ಸಂತೋಷದ ಕ್ಷಣ. ಇದು ಅವರ ಕನಸುಗಳನ್ನು ಮುಂದುವರೆಸುವ ಒಂದು ಹೆಜ್ಜೆ,” ಎಂದು ಅವರು ಭಾವುಕರಾಗಿ ಹೇಳಿದರು.

ತರಬಿಯತ್ ಎಜ್ಯುಕೇಶನ್ ಸೊಸೈಟಿಯ ಸ್ಥಾಪಕ ಮತ್ತು ಮಾಜಿ ಅಧ್ಯಕ್ಷ ಅಬ್ದುಲ್ ಕಾದಿರ್ ಬಾಷಾ ರುಕ್ನುದ್ದೀನ್ ಪ್ರಸ್ತಾವಿಕ ಭಾಷಣದಲ್ಲಿ, “ಡಾ. ಹಸನ್ ಬಾಪಾ ಈ ಸಂಸ್ಥೆಯನ್ನು ಕೇವಲ ಒಂದು ಶಿಕ್ಷಣ ಸಂಸ್ಥೆಯಾಗಿ ಕಾಣದೆ, ಒಂದು ಶಿಕ್ಷಣ ಆಂದೋಲನವಾಗಿ ರೂಪಿಸಿದರು. ವ್ಯಕ್ತಿಗಳ ಬೆಳವಣಿಗೆಗೂ ಅವರು ಒತ್ತು ನೀಡಿದರು. ಇಂದು ಅವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಆಡಳಿತ ಮಂಡಳಿ ಶ್ರಮಿಸುತ್ತಿದೆ,” ಎಂದರು.

ಚಿಂತಕ ಹಾಗೂ ವಿದ್ವಾಂಸ ಮೌಲಾನಾ ಅಬ್ದುಲ್ ಮುನೀರಿ ಅವರು ಡಾ. ಹಸನ್ ಬಾಪಾ ರ ಜೀವನ ಮತ್ತು ಕೊಡುಗೆಗಳ ಕುರಿತು ಬೆಳಕು ಚೆಲ್ಲಿದರು. ಮಾಜಿ ಕಾರ್ಯದರ್ಶಿ ಡಾ. ಹನೀಫ್ ಶಬಾಬ್, ಡಾ. ಹಸನ್ ಬಾಪಾ ಜೊತೆಗಿನ ತಮ್ಮ ಒಡನಾಟದ ಸ್ಮೃತಿಗಳನ್ನು ಭಾವುಕವಾಗಿ ನೆನಪಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮಾಜಿ ಅಧ್ಯಕ್ಷ ಕಾದಿರ್ ಮೀರಾ ಪಟೇಲ್ ವಹಿಸಿದ್ದರು.

ವೇದಿಕೆಯಲ್ಲಿ ತರಬಿಯತ್ ಎಜ್ಯಕೇಶನ್ ಸೂಸೈಟಿಯ ಸ್ಕೂಲ್ ಬೋಡ್ ಅಧ್ಯಕ್ಷ ನಝೀರ್ ಆಹ್ಮದ್ ಖಾಝಿ, ಸಂಸ್ಥೆಯ ಮಾಜಿ ಅಧ್ಯಕ್ಷ ಇಕ್ಬಾಲ್ ಇಕ್ಕೇರಿ, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯದ್ಯ ಝುಬೇರ್ ಎಸ್.ಎಂ., ಉಪಾಧ್ಯಕ್ಷ ಸೈಯ್ಯದ್ ಖುತುಬ್ ಬರ್ಮಾವರ್, ಮೌಲಾನಾ ಝಿಯಾ ರುಕ್ನುದ್ದೀನ್, ಪ್ರಾಂಶುಪಾಲ ಲಿಯಾಖತ್ ಅಲಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X