Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ರಾಜ್ಯ ಮಟ್ಟದ ಉತ್ತಮ ಶಿಕ್ಷಕ...

ಭಟ್ಕಳ: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶ್ರೀಧರ ಶೇಟ್ ಶಿರಾಲಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ4 Sept 2025 8:14 PM IST
share
ಭಟ್ಕಳ: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶ್ರೀಧರ ಶೇಟ್ ಶಿರಾಲಿ ಆಯ್ಕೆ

ಭಟ್ಕಳ: ತಾಲೂಕಿನ ಜಾಲಿ ಸರ್ಕಾರಿ ಪ್ರೌಢಶಾಲೆಯ ಶ್ರೀಧರ ಶೇಟ್ ಶಿರಾಲಿಯವರು ಬಹುಮುಖ ಪ್ರತಿಭೆಯ ಶಿಕ್ಷಕರಾಗಿ ಜನ ಮೆಚ್ಚುಗೆ ಗಳಿಸಿದ್ದು, ಇದೀಗ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ. ಅವರು ಕವಿ, ಲೇಖಕ, ಅಂಕಣಕಾರ, ಚಿತ್ರಕಲಾವಿದ, ವಾಗ್ಮಿ, ವ್ಯಂಗ್ಯಚಿತ್ರಕಾರ, ಕಾರ್ಯಕ್ರಮ ನಿರೂಪಕ, ಸಂಘಟನಾಕಾರ ಮತ್ತು ವ್ಯಕ್ತಿತ್ವ ವಿಕಸನ ಮಾರ್ಗದರ್ಶಕರಾಗಿ ಗುರುತಿಸಿಕೊಂಡಿದ್ದಾರೆ.

ಶಿಕ್ಷಣ ಕ್ಷೇತ್ರದ ಸೇವೆ: 1992ರಲ್ಲಿ ಶಿಕ್ಷಕ ವೃತ್ತಿಗೆ ಪ್ರವೇಶಿಸಿದ ಶ್ರೀಧರ ಶೇಟ್, 33 ವರ್ಷಗಳ ಸುದೀರ್ಘ ಸೇವೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಣ ನೀಡಿದ್ದಾರೆ. ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಂಟು ವರ್ಷಗಳಿಂದ ಶೇಕಡಾ 100ರಷ್ಟು ಫಲಿತಾಂಶ ಸಾಧಿಸಿದ್ದು, ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವಂತೆ ಬೋಧಿಸಿದ್ದಾರೆ. ಇದಕ್ಕಾಗಿ ಎರಡು ಬಾರಿ 'ಶಿಕ್ಷಕ ಪರಿಶ್ರಮ ಹಿರಿಮೆಗೆ ಗೌರವ' ಪ್ರಶಸ್ತಿಯನ್ನು ಪಡೆದಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ಪ್ರಭಾವ: ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಶಿಕ್ಷಕರಿಗೆ ಟಿಎಲ್ಎಂ, ರಂಗಕಲೆ, ಕಲಿಕಾ ಚೇತರಿಕೆ ಮತ್ತು ಕ್ರಿಯಾ ಸಂಶೋಧನೆ ತರಬೇತಿಗಳನ್ನು ನೀಡಿದ್ದಾರೆ. ಚುನಾವಣಾ ಸಿಬ್ಬಂದಿಗೆ ಮಾಸ್ಟರ್ ಟ್ರೇನರ್ ಆಗಿ ತರಬೇತಿ ನೀಡಿದ್ದು, ಪ್ರತಿಭಾ ಕಾರಂಜಿ ಮತ್ತು ನಿಧಾನ ಕಲಿಕೆಯ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.

ಸಾಹಿತ್ಯ ಮತ್ತು ಕಲೆ: ಏಳು ಕವನ ಸಂಕಲನಗಳನ್ನು ಪ್ರಕಟಿಸಿದ್ದು, ಇವರ 'ಬೇಲಿಯ ಹೂವು' ಕವನವು NCERTನ ಪಠ್ಯಪುಸ್ತಕದಲ್ಲಿ ಸೇರ್ಪಡೆಗೊಂಡಿದೆ. ರಾಜ್ಯೋತ್ಸವ ಪ್ರಶಸ್ತಿ ಮತ್ತು ಸಂಕ್ರಮಣ ಕಾವ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ವ್ಯಂಗ್ಯಚಿತ್ರಕಾರರಾಗಿ ಪತ್ರಿಕೆಗಳಲ್ಲಿ ತಮ್ಮ ಕಲೆ ಪ್ರಕಟಗೊಂಡಿದೆ.

ಕಾರ್ಯಕ್ರಮ ನಿರೂಪಣೆ ಮತ್ತು ವಾಗ್ಮಿ: ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ನಿರೂಪಿಸುವ ಮೂಲಕ 'ಅತ್ಯುತ್ತಮ ಕಾರ್ಯಕ್ರಮ ನಿರೂಪಕ' ಪ್ರಶಸ್ತಿಯನ್ನು ಪಡೆದಿದ್ದಾರೆ. ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಾಗ್ಮಿಯಾಗಿ ಗುರುತಿಸಿಕೊಂಡಿದ್ದಾರೆ.ಇತರ ಸಾಧನೆ: ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಕಾರ್ಯಕ್ರಮ ನೀಡಿದ್ದು, 'ಉದಯ ಟಿವಿ'ಯಲ್ಲಿ ಆದರ್ಶ ದಂಪತಿಗಳಿಗೆ ಪ್ರಥಮ ಬಹುಮಾನ ಗಳಿಸಿದ್ದಾರೆ.

ರಾಜ್ಯಮಟ್ಟದ 'ಸತ್ಸಂಗ ರತ್ನ' ಪ್ರಶಸ್ತಿ ಸೇರಿದಂತೆ ಹಲವು ಸಂಘಟನೆಗಳು ಅವರನ್ನು ಸನ್ಮಾನಿಸಿವೆ.ಶ್ರೀಧರ ಶೇಟ್ ರವರಿಗೆ ಜಿಲ್ಲಾ ಸಾಹಿತ್ಯ ಪರಿಷತ್ತು, ಶಿಕ್ಷಣ ಇಲಾಖೆ ಮತ್ತು ಸಮುದಾಯದ ಮುಖ್ಯಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಅವರ ಸಮಗ್ರ ಸಾಧನೆ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಮಾದರಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X