Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ...

ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ವತಿಯಿಂದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಶ್ರೀಧರ್ ಶೇಟ್ ಶಿರಾಲಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ20 Sept 2025 7:24 PM IST
share
ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ವತಿಯಿಂದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಶ್ರೀಧರ್ ಶೇಟ್ ಶಿರಾಲಿಗೆ ಸನ್ಮಾನ

ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಆಯೋಜಿಸಿದ್ದ “ನ್ಯಾಯದ ಅಧಿಕಾರ – ಪ್ರವಾದಿ ಮಹಮ್ಮದ್ ಪೈಗಂಬರ್ ಸೀರತ್ ಅಭಿಯಾನ” ದ ಸಮಾರೋಪ ಸಮಾರಂಭದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಶ್ರೀಧರ್ ಶೇಟ್ ಶಿರಾಲಿ ಅವರನ್ನು ಜಮಾಅತ್ ನ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ.ಅಭಿನಂದಿಸಿ ಗೌರವಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯಮಟ್ಟದ ಪ್ರಶಸ್ತಿ ಪಡೆದ ನಂತರ ಅನೇಕ ಕಡೆ ಸನ್ಮಾನಗಳು ನಡೆದಿದ್ದರೂ, “ಇಂದಿನ ಈ ಸನ್ಮಾನವೇ ನನಗೆ ವಿಶೇಷ. ಏಕೆಂದರೆ ಇಲ್ಲಿ ಎಲ್ಲ ಸಮುದಾಯದವರೂ ಒಂದೇ ವೇದಿಕೆಯಲ್ಲಿ ಸೇರಿಕೊಂಡಿದ್ದಾರೆ” ಎಂದು ಶಿರಾಲಿ ಹರ್ಷ ವ್ಯಕ್ತಪಡಿಸಿದರು. ಇಂದಿನ ಮೊಬೈಲ್ ಯುಗದಲ್ಲಿ ‘ವಾಟ್ಸಾಪ್ ಯೂನಿವರ್ಸಿಟಿಗಳು’ ಧರ್ಮಧರ್ಮಗಳ ನಡುವೆ ಗೋಡೆಗಳನ್ನು ಕಟ್ಟುತ್ತಿವೆ. ಜನರು ಮೊಬೈಲ್ ಜಗತ್ತಿನಲ್ಲಿ ಮುಳುಗಿ, ಮಾನವೀಯ ಅಂತಃಕರಣವನ್ನು ಮರೆತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಮೊಬೈಲ್ ವ್ಯಸನದ ಪರಿಣಾಮವನ್ನು ಹಾಸ್ಯಭರಿತ ಉದಾಹರಣೆಗಳ ಮೂಲಕ ವಿವರಿಸಿದ ಅವರು, ಮಗನಿಗೆ ಫೇಸ್‌ಬುಕ್ನಲ್ಲಿ 5000 ಸ್ನೇಹಿತರಿದ್ದಾರೆ, ಆದರೆ ಕಷ್ಟ ಬಂದಾಗ ನೆರವಿಗೆ ಯಾರೂ ಬರುವುದಿಲ್ಲ. ಇತ್ತ ತಂದೆ ಪಾಸ್‌ಬುಕ್ ನೋಡುತ್ತಾ, ಮನೆ ಕಟ್ಟುವುದು, ಮದುವೆ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಬದುಕುತ್ತಿದ್ದಾರೆ. ಮಗಳು ಗ್ಯಾಲರಿಯಲ್ಲಿರುವ ಫೋಟೋಗಳಲ್ಲಿ ತಲ್ಲೀನಳಾಗಿದ್ದರೆ, ತಾಯಿ ಜುವೆಲರಿಯ (ಒಡವೆ) ಲೆಕ್ಕಾಚಾರದಲ್ಲಿ ತಲ್ಲೀನಳಾಗಿದ್ದಾಳೆ” ಎಂದ ಅವರು, ಇಂತಹ ಪರಿಸ್ಥಿತಿಯಲ್ಲಿ ಮಾನವೀಯ ಮೌಲ್ಯಗಳನ್ನು ಮರೆಯಬಾರದು,

“ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು ಎಂಬ ಭಾವನೆ ಬಲವಾಗಬೇಕು” ಎಂದು ಆಶಿಸಿದರು.

ಸಂಘಟಕರು ಶ್ರೀಧರ್ ಶೇಟ್ ಶಿರಾಲಿ ಅವರನ್ನು ಕವಿ, ಲೇಖಕ, ಅಂಕಣಕಾರ, ವ್ಯಂಗ್ಯಚಿತ್ರಕಾರ, ಚಿತ್ರಕಲಾವಿದ, ವಾಗ್ಮಿ ಹಾಗೂ ವ್ಯಕ್ತಿತ್ವ ವಿಕಸನ ಮಾರ್ಗದರ್ಶಕ ಎಂಬ ಬಹುಮುಖ ಪ್ರತಿಭೆಯೊಂದಿಗೆ ಜನಪ್ರಿಯ ಶಿಕ್ಷಕರಾಗಿ ಪರಿಚಯಿಸಿ, ಕರ್ನಾಟಕ ಸರ್ಕಾರವು 2025–26ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ಎಂಬುದನ್ನು ನೆನಪಿಸಿದರು.

ವೇದಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ವಲಯ ಸಂಚಾಲಕ ಸಯೀದ್ ಇಸ್ಮಾಯಿಲ್, ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಪ್ರೋ.ಆರ್.ಎಸ್.ನಾಯಕ, ಡಾ.ಸವಿತಾ ಕಾಮತ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್.ನಾಯ್ಕ, ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ರಾಮಾಮೋಗೆರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಂಗಾಧರ್ ನಾಯ್ಕ, ಸದ್ಭಾವನಾ ಮಂಚ್ ಅಧ್ಯಕ್ಷ ಸತೀಶಕುಮಾರ್ ನಾಯ್ಕ ಉಪಸ್ಥಿತರಿದ್ದರು.

ಸೀರತ್ ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅಬ್ದುಲ್ ರವೂಫ್ ಸವಣೂರ್ ಧನ್ಯವಾದ ಅರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X