ಹೊನ್ನಾವರ: ವಿದ್ಯುತ್ ಶಾಕ್‌ಗೆ ದಂಪತಿ ಬಲಿ

ಹೊನ್ನಾವರ: ತಾಲೂಕಿನ ಕಾಸರಕೋಡದ ಬಟ್ಟೆ ವಿನಾಯಕಕೇರಿ ಪ್ರದೇಶದಲ್ಲಿ ವಿದ್ಯುತ್ ಅವಘಡದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಸಂತೋಷ ಗೌಡ ಹಾಗೂ ಅವರ ಪತ್ನಿ ಶೀತು ಗೌಡ ಎಂದು ಗುರುತಿಸಲಾಗಿದೆ. ಮನೆಯ ಬಳಿಯಿಂದ ಹಾದು ಹೋಗುತ್ತಿದ್ದ ಹೈಟೆನ್ಷನ್ ವಿದ್ಯುತ್ ತಂತಿ ಅಕಸ್ಮಿಕವಾಗಿ ಹರಿದು ಬಿದ್ದು, ಅದರಿಂದ ಇಬ್ಬರೂ ಶಾಕ್ ತಗುಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಧಾವಿಸಿದ್ದು, ಮೃತದೇಹಗಳನ್ನು ಹೊನ್ನಾವರ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ, ಸ್ಥಳೀಯರು ಹಾಗೂ ಮೃತರ ಬಂಧುಗಳು “ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ” ಎಂದು ಆರೋಪಿಸಿ, “ನ್ಯಾಯ ಸಿಗುವವರೆಗೆ ಮೃತದೇಹಗಳನ್ನು ಸ್ವೀಕರಿಸುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯಿಂದ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತ ದಂಪತಿಗೆ ಇಬ್ಬರು ಪುತ್ರರು ಇದ್ದಾರೆ.
Next Story





