Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಅಹಿಂದ ಸಂಘಟನೆ ಬಲವರ್ಧನೆಗೆ ಜಿಲ್ಲಾದ್ಯಂತ...

ಅಹಿಂದ ಸಂಘಟನೆ ಬಲವರ್ಧನೆಗೆ ಜಿಲ್ಲಾದ್ಯಂತ ಚಳವಳಿ: ಡಾ. ನಾಗೇಶ ನಾಯ್ಕ ಕಾಗಾಲ

ವಾರ್ತಾಭಾರತಿವಾರ್ತಾಭಾರತಿ2 Feb 2026 8:29 PM IST
share
ಅಹಿಂದ ಸಂಘಟನೆ ಬಲವರ್ಧನೆಗೆ ಜಿಲ್ಲಾದ್ಯಂತ ಚಳವಳಿ: ಡಾ. ನಾಗೇಶ ನಾಯ್ಕ ಕಾಗಾಲ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅಹಿಂದ ಸಂಘಟನೆಯನ್ನು ಬಲಗೊಳಿಸಿ ಜನರಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ. ನಾಗೇಶ ನಾಯ್ಕ ಕಾಗಾಲ ಹೇಳಿದರು.

ರವಿವಾರ ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಹಿಂದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಭೆಗಳನ್ನು ನಡೆಸಿ ಚರ್ಚೆ ಕೈಗೊಳ್ಳಲಾಗುತ್ತಿದೆ ಎಂದರು. ಯುವಜನರನ್ನು ರಾಜಕೀಯವಾಗಿ ಸಶಕ್ತರನ್ನಾಗಿಸುವುದು, ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುವುದು ಸಂಘಟನೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಚಳವಳಿಗಳ ಬಲವರ್ಧನೆಯ ಮೂಲಕ ರಾಜಕೀಯ ಸಬಲೀಕರಣ ಸಾಧಿಸುವ ನಿಟ್ಟಿನಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಂಚಲನಾ ಸಮಿತಿಗಳನ್ನು ರಚಿಸಲಾಗುವುದು. ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆಗಳನ್ನು ಆಧಾರವಾಗಿ ತೆಗೆದುಕೊಂಡು ಹೋರಾಟದ ತಳಹದಿ ರೂಪಿಸಲಾಗುವುದು ಎಂದು ಹೇಳಿದರು. ಭಟ್ಕಳದಲ್ಲಿ ಎಲ್ಲಾ ಪ್ರಮುಖರು ಅಹಿಂದ ಸಂಘಟನೆ ಬಲಪಡಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕೊರತೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆ, ಇ–ಸ್ವತ್ತು, ಅರಣ್ಯ ಅತಿಕ್ರಮಣ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳಿದ್ದು, ಈ ವಿಷಯಗಳಲ್ಲಿ ಜನಜಾಗೃತಿ ಮೂಡಿಸಿ ಹೋರಾಟ ರೂಪಿಸುವ ಅಗತ್ಯವಿದೆ ಎಂದು ಹೇಳಿದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಕುರಿತು ಈಗಾಗಲೇ ಹೈಕೋರ್ಟ್‌ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದರು. ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ವಸೂಲಿ ನಡೆಯುತ್ತಿರುವುದು ಗಂಭೀರ ವಿಚಾರವಾಗಿದ್ದು, ಸಮಸ್ಯೆ ಬಗೆಹರಿಯದಿದ್ದರೆ ಜಿಲ್ಲಾದ್ಯಂತ ಹೋರಾಟ ನಡೆಸಲಾಗುವುದು. ಅಗತ್ಯವಿದ್ದರೆ ಕರಾವಳಿ ಭಾಗದ ತಾಲ್ಲೂಕುಗಳ ನ್ಯಾಯಾಲಯಗಳಲ್ಲಿಯೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ಹಿರಿಯ ಮುಖಂಡ ರಾಮಾ ಎಂ. ಮೊಗೇರ ಮಾತನಾಡಿ, ಜಿಲ್ಲೆಯಲ್ಲಿ ಅಹಿಂದ ಸಂಘಟನೆಯ ಅಗತ್ಯವಿದ್ದು, ಅಹಿಂದ ವರ್ಗದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಜಾಗೃತಿ ಮೂಡಬೇಕಾಗಿದೆ ಎಂದರು. ತಂಝೀಂ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, ಅಹಿಂದ ಸಂಘಟನೆ ಆರಂಭಿಸಿರುವುದು ಉತ್ತಮ ಬೆಳವಣಿಗೆ. ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟ ಅವಶ್ಯಕ ಎಂದು ಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಹಾಗೂ ಮಾರುಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಂ.ಡಿ. ನಾಯ್ಕ, ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಸತೀಶಕುಮಾರ ನಾಯ್ಕ, ಸಾಲಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗಣಪತಿ ನಾಯ್ಕ, ವೆಂಕಟಯ್ಯ ಬೈರುಮನೆ, ಕುಮಟಾದ ಸುಧಾಕರ, ಶಿವಾನಂದ ನಾಯ್ಕ (ಶಿರಸಿ), ಕೆ. ಸುಲೇಮಾನ್, ಶ್ರೀಧರ ನಾಯ್ಕ, ಟಿ.ಡಿ. ನಾಯ್ಕ, ದಿನೇಶ್ ಗೊಂಡ, ವೆಂಕಟೇಶ್ ನಾಯ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X