Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳದಲ್ಲಿ ‘ಮುರಿನ್ ಕಟ್ಟೆ’ ವಿವಾದ:...

ಭಟ್ಕಳದಲ್ಲಿ ‘ಮುರಿನ್ ಕಟ್ಟೆ’ ವಿವಾದ: ಪೊಲೀಸ್ ಬಂದೋಬಸ್ತ್ ನಡುವೆ ಕಾಮಗಾರಿ; ತಂಝೀಮ್, ಸ್ಥಳೀಯರಿಂದ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ24 May 2026 8:36 PM IST
share
ಭಟ್ಕಳದಲ್ಲಿ ‘ಮುರಿನ್ ಕಟ್ಟೆ’ ವಿವಾದ: ಪೊಲೀಸ್ ಬಂದೋಬಸ್ತ್ ನಡುವೆ ಕಾಮಗಾರಿ; ತಂಝೀಮ್, ಸ್ಥಳೀಯರಿಂದ ಆಕ್ಷೇಪ

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ವಿಸ್ತೀರ್ಣ ಕಾಮಗಾರಿಯ ಆರಂಭದಿಂದಲೇ ವಿವಾದದ ಕೇಂದ್ರಬಿಂದುವಾಗಿದ್ದ ‘ಮುರಿನ್ ಕಟ್ಟೆ’ ವಿಚಾರ ಮತ್ತೆ ಉದ್ವಿಗ್ನತೆಗೆ ಕಾರಣವಾಗಿದ್ದು, ಭಾನುವಾರ ತಾಲೂಕು ಆಡಳಿತ ಮತ್ತು ಪೊಲೀಸ್ ಬಂದೋಬಸ್ತ್ ನಡುವೆ ಕಟ್ಟೆ ನಿರ್ಮಾಣ ಕಾಮಗಾರಿ ನಡೆಸಲಾಗಿದೆ. ಈ ಕ್ರಮಕ್ಕೆ ಸ್ಥಳೀಯ ನಿವಾಸಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಮಜ್ಲಿಸೆ ಇಸ್ಲಾಹ್ ವ ತಂಝೀಮ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಪ್ರಮುಖ ಭಾಗದಲ್ಲಿರುವ ಈ ‘ಮುರಿನ್ ಕಟ್ಟೆ’ ಹಲವು ವರ್ಷಗಳಿಂದ ಧಾರ್ಮಿಕ ಹಾಗೂ ಸಾಮಾಜಿಕ ಸೂಕ್ಷ್ಮತೆಯ ವಿಚಾರವಾಗಿ ಚರ್ಚೆಗೆ ಗ್ರಾಸವಾಗಿತ್ತು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಆರಂಭವಾದ ಬಳಿಕ, ರಸ್ತೆ ವಿಸ್ತರಣೆಯ ಹಿನ್ನೆಲೆಯಲ್ಲಿ ಕಟ್ಟೆಯನ್ನು ಸಂಪೂರ್ಣ ತೆರವುಗೊಳಿಸಬೇಕು ಎಂದು ಒಂದು ವಲಯ ಒತ್ತಾಯಿಸುತ್ತಿದ್ದರೆ, ಮತ್ತೊಂದು ವಲಯ ಅದನ್ನು ಅದೇ ಸ್ಥಳದಲ್ಲಿ ಮರುನಿರ್ಮಿಸಬೇಕೆಂದು ಆಗ್ರಹಿಸುತ್ತಿತ್ತು.

ಈ ವಿಚಾರ ಈ ಹಿಂದೆಯೂ ಹಲವು ಬಾರಿ ಉದ್ವಿಗ್ನ ವಾತಾವರಣಕ್ಕೆ ಕಾರಣವಾಗಿದ್ದು, ಆಡಳಿತದ ಮಧ್ಯಸ್ಥಿಕೆಯಲ್ಲಿ ಸಭೆಗಳು ನಡೆದಿದ್ದರೂ ಶಾಶ್ವತ ಪರಿಹಾರ ಕಂಡುಬಂದಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ರವಿವಾರ ಬೆಳಿಗ್ಗೆ ಪೊಲೀಸ್ ಬಂದೋಬಸ್ತ್ ನಡುವೆ ಕಾಮಗಾರಿ ಆರಂಭವಾಗುತ್ತಿದ್ದಂತೆಯೇ ಕೆಲ ಮುಖಂಡರು ಮತ್ತು ಯುವಕರು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿದರು. ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, “ಹೆದ್ದಾರಿ ವಿಸ್ತೀರ್ಣ ಕಾಮಗಾರಿಯ ವೇಳೆ ದರ್ಗಾ, ಮಸೀದಿ, ಮಂದಿರ ಸೇರಿದಂತೆ ಹಲವು ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ರಂಗೀನಕಟ್ಟೆಯಲ್ಲಿದ್ದ ನಾಗಕಟ್ಟೆಯನ್ನೂ ತೆರವುಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಒಂದೇ ವಿಷಯದಲ್ಲಿ ಬೇರೆ ರೀತಿಯ ಕ್ರಮ ಅನುಸರಿಸಲಾಗುತ್ತಿರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ” ಎಂದು ಹೇಳಿದರು.

“ಕಾನೂನುಬದ್ಧ ಪ್ರಕ್ರಿಯೆ ಮತ್ತು ನ್ಯಾಯಾಲಯದ ನಿರ್ದೇಶನಗಳ ಕುರಿತು ಆಡಳಿತ ಸ್ಪಷ್ಟನೆ ನೀಡಬೇಕು. ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಕಾಮಗಾರಿ ನಡೆಸುವುದು ಸೂಕ್ತವಲ್ಲ” ಎಂದೂ ಅವರು ಅಭಿಪ್ರಾಯಪಟ್ಟರು.

ಕಾಮಗಾರಿಗೆ ರಕ್ಷಣೆ ನೀಡುತ್ತಿದ್ದ ಪೊಲೀಸ್ ಅಧಿಕಾರಿಗಳ ವಿರುದ್ಧ ಹರಿಹಾಯ್ದ ಯುವ ಮುಖಂಡ ಜಾಲಿ ಪಟ್ಟಣ ಪಂಚಾಯತ್ ಸದಸ್ಯ ಮಿಸ್ಬಾವುಲ್ ಹಕ್, "ಪೊಲೀಸ್ ಇಲಾಖೆ, ತಹಶೀಲ್ದಾರ್ ಮತ್ತು ಹಿಂದೂ ಸಂಘಟನೆಗಳು ಸೇರಿ ಈ ಅಕ್ರಮ ಕಾಮಗಾರಿ ನಡೆಸುತ್ತಿವೆ. ಈ ಅಧಿಕಾರಿಗಳು ಖಾಕಿಯ ಗೌರವವನ್ನು ಗಾಳಿಗೆ ತೂರಿ ಕೈಕಟ್ಟಿ ನಿಂತಿರುವುದು ದುರದೃಷ್ಟಕರ" ಪೊಲೀಸರು ಇಂತಹ ಅಕ್ರಮಗಳಿಗೆ ಸಾಥ್ ನೀಡುತ್ತಿರುವುದರಿಂದ ದೇಶದ ನ್ಯಾಯಾಂಗ ಮತ್ತು ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂಬ ಭಾವನೆ ಮೂಡುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

"ನಾವು ಇಲ್ಲಿ ಶಾಂತಿಯಿಂದ ಇದ್ದೇವೆ, ಆದರೆ ಇಲ್ಲಿನ ಶಾಂತಿಯನ್ನು ಕೆಡಿಸಲು ಹೊರಗಿನವರು ಬರಬೇಕಿಲ್ಲ, ಇಲ್ಲಿನ ಆಡಳಿತ ಮತ್ತು ಪೊಲೀಸ್ ಇಲಾಖೆಯೇ ಸಾಕು" ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಕಾಮಗಾರಿ ಮುಗಿದ ತಕ್ಷಣ ಅದನ್ನು ಟಾರ್ಪಾಲಿನ್ ಬಳಸಿ ಮುಚ್ಚುತ್ತಿರುವುದು ಆಡಳಿತದ ಅಪಾರದರ್ಶಕತೆಯನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಸ್ಥಳದಲ್ಲಿದ್ದ ಕೆಲ ಪ್ರತಿಭಟನಾಕಾರರು, “ಒಂದು ಪ್ರದೇಶದಲ್ಲಿ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಿ, ಮತ್ತೊಂದು ಕಡೆ ನಿರ್ಮಾಣಕ್ಕೆ ಅವಕಾಶ ನೀಡುತ್ತಿರುವುದು ತಾರತಮ್ಯ ಎಂಬ ಅನುಮಾನ ಹುಟ್ಟಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿ ಮುಗಿದ ಬಳಿಕ ಅದನ್ನು ಟಾರ್ಪಾಲಿನ್ ಬಳಸಿ ಮುಚ್ಚಿರುವ ಕ್ರಮದ ಮೇಲೂ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನೊಂದೆಡೆ, ಪರಿಸ್ಥಿತಿ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆ ಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆ ಮುಂದುವರಿದಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X