Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕುರ್‌ಆನ್ ಕಂಠಪಾಠದ ಜತೆಗೆ ಅದರ...

ಕುರ್‌ಆನ್ ಕಂಠಪಾಠದ ಜತೆಗೆ ಅದರ ಅರ್ಥಗ್ರಹಣವೂ ಅಗತ್ಯ: ಇಕ್ಬಾಲ್ ನಾಯ್ತೆ

ವಾರ್ತಾಭಾರತಿವಾರ್ತಾಭಾರತಿ13 Jun 2026 7:57 PM IST
share
ಕುರ್‌ಆನ್ ಕಂಠಪಾಠದ ಜತೆಗೆ ಅದರ ಅರ್ಥಗ್ರಹಣವೂ ಅಗತ್ಯ: ಇಕ್ಬಾಲ್ ನಾಯ್ತೆ
ನ್ಯೂ ಶಮ್ಸ್ ಶಾಲೆಯಲ್ಲಿ ಹಿಫ್ಝ್‌ - ಕುರ್‌ಆನ್ ಸಮಾರಂಭ

ಭಟ್ಕಳ: ಆಧುನಿಕ ಶಿಕ್ಷಣದ ಜತೆಗೆ ಹಿಫ್ಝ್‌ - ಎ-ಕುರ್‌ಆನ್ (ಕುರ್‌ಆನ್ ಕಂಠಪಾಠ) ವಿಭಾಗವನ್ನು ಆರಂಭಿಸಿ ಕೇವಲ ಮೂರು ವರ್ಷಗಳಲ್ಲಿ ವಿದ್ಯಾರ್ಥಿಗಳಿಗೆ ಕುರ್‌ಆನ್ ಕಂಠಪಾಠ ಪೂರ್ಣಗೊಳಿಸುವ ಅವಕಾಶ ಕಲ್ಪಿಸಿರುವುದು ಮಹತ್ತರ ಸಾಧನೆಯಾಗಿದ್ದು, ಈ ಕಾರ್ಯವನ್ನು ಇನ್ನಷ್ಟು ವ್ಯವಸ್ಥಿತವಾಗಿ ಬೆಳೆಸುವ ಅಗತ್ಯವಿದೆ ಎಂದು ಜಾಮಿಯಾ ಇಸ್ಲಾಮಿಯಾ ಭಟ್ಕಳದ ಉಪನ್ಯಾಸಕ ಮೌಲಾನಾ ಇಕ್ಬಾಲ್ ನಾಯ್ತೆ ನದ್ವಿ ಹೇಳಿದರು.

ನಗರದ ನ್ಯೂ ಶಮ್ಸ್ ಶಾಲೆಯ ಡಾ. ಎಂ.ಟಿ. ಹಸನ್ ಬಾಪಾ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹಿಫ್ಝ್‌-ಎ-ಕುರ್‌ಆನ್ ಸಮಾರೋಪ ಸಮಾರಂಭದಲ್ಲಿ ಕುರ್‌ಆನ್ ಕಂಠಪಾಠ ಪೂರ್ಣಗೊಳಿಸಿದ ವಿದ್ಯಾರ್ಥಿ ಅಬ್ದುಲ್ ಮಾಜೀದ್ ಗೆ ಕುರ್‌ಆನ್ ಸೋಕ್ತಗಳನ್ನು ಬೋಧಿಸಿ ಅವರು ಮಾತನಾಡಿದರು.

ಕುರ್‌ಆನ್ ಕಂಠಪಾಠ ಮಾಡುವುದು ಸುನ್ನತ್ ಆಗಿದ್ದರೆ, ಅದರ ಅರ್ಥವನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊ ಳ್ಳುವುದು ಪ್ರತಿಯೊಬ್ಬ ಮುಸ್ಲಿಮನ ಕರ್ತವ್ಯವಾಗಿದೆ. ಆಧುನಿಕ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಕುರ್‌ಆನ್‌ನ ಅರ್ಥ ಮತ್ತು ಸಂದೇಶವನ್ನು ಅರ್ಥೈಸಿಕೊಳ್ಳುವಂತೆ ಪಠ್ಯಕ್ರಮ ರೂಪುಗೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭ ಅವರು ಖತ್ಮುಲ್ ಕುರ್‌ಆನ್ ನೆರವೇರಿಸಿ, ಹಿಫ್ಜ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ದರು. ಬಳಿಕ ವಿದ್ಯಾರ್ಥಿಗಳಿಗೆ ಸ್ಮರಣಿಕೆ, ಪ್ರಮಾಣಪತ್ರ ಹಾಗೂ ನಗದು ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಮೌಲ್ವಿ ಅಹ್ಮದ್ ಫುರ್ಕಾನ್ ರುಕ್ನುದ್ದೀನ್ ಅವರ ಮಾರ್ಗದರ್ಶನದಲ್ಲಿ ಹಿಫ್ಜ್ ಪೂರ್ಣಗೊಳಿಸಿದ್ದಾರೆ.

ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ನಜೀರ್ ಅಹ್ಮದ್ ಖಾಝಿ ಮಾತನಾಡಿ, ಕುರ್‌ಆನ್ ಕೇವಲ ಆಶೀರ್ವಾದದ ಮತ್ತು ಪುಣ್ಯ ಗಳಿಸಿಕೊಡುವ ಗ್ರಂಥವಲ್ಲ; ಅದು ಮಾನವ ಬದುಕಿಗೆ ದಿಕ್ಕು ತೋರುವ ಹಾಗೂ ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆ ತರಬಲ್ಲ ಜೀವನ ಮಾರ್ಗದರ್ಶಕ ಗ್ರಂಥವಾಗಿದೆ ಎಂದರು.

ಕುರ್‌ಆನ್ ಪಠಣ ಮತ್ತು ಶ್ರವಣದ ಕಾರ್ಯಕ್ರಮಗಳನ್ನು ಆಯೋಜಿಸುವುದಷ್ಟೇ ಸಾಕಾಗುವುದಿಲ್ಲ. ಅದರ ಸಂದೇಶ ವನ್ನು ಅರ್ಥೈಸಿಕೊಂಡು ವೈಯಕ್ತಿಕ ಹಾಗೂ ಸಾಮಾಜಿಕ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಹೇಳಿದರು.

ಹಾಫಿಜ್ ಅಬ್ದುಲ್ ಮಜೀದ್ ಅವರ ತಾಯಿ ಪುತ್ರನು ಹಾಫಿಜ್-ಎ-ಕುರ್‌ಆನ್ ಆಗಿರುವ ಕುರಿತು ಸಂತಸ ವ್ಯಕ್ತಪಡಿಸಿದರು. ಜಿಯಾ ಉರ್ ರಹ್ಮಾನ್ ರುಕ್ನುದ್ದೀನ್ ಸ್ವಾಗತಿಸಿದರು. ಅಬ್ದುಲ್ಲಾ ರಬಿ ಖಲೀಫಾ ನದ್ವಿ ಕಾರ್ಯ ಕ್ರಮ ನಿರೂಪಿಸಿ ವಂದಿಸಿದರು.

ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಮೌಲಾನಾ ಸಯ್ಯದ್ ಕುತುಬ್ ಬರ್ಮಾವರ್ ನದ್ವಿ, ಅಲ್‌ಕೌಸರ್ ಗರ್ಲ್ಸ್ ಕಾಲೇಜಿನ ಅಧ್ಯಕ್ಷ ಸಯ್ಯದ್ ಶಕೀಲ್ ಎಸ್.ಎಂ., ದಾವತ್ ಸೆಂಟರ್ ಅಧ್ಯಕ್ಷ ಸಯ್ಯದ್ ಸಲಾಹುದ್ದೀನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪಾಲಕರು, ಅತಿಥಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X