Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಎಸ್‌ಐಆರ್ ಯಶಸ್ಸಿಗೆ ವಿದ್ಯಾರ್ಥಿ –...

ಎಸ್‌ಐಆರ್ ಯಶಸ್ಸಿಗೆ ವಿದ್ಯಾರ್ಥಿ – ಯುವಜನರು ಸೇತುವೆಯಾಗಲಿ: ಸುನೀಲ್ ಎಂ.

ವಾರ್ತಾಭಾರತಿವಾರ್ತಾಭಾರತಿ14 July 2026 7:29 PM IST
share
ಎಸ್‌ಐಆರ್ ಯಶಸ್ಸಿಗೆ ವಿದ್ಯಾರ್ಥಿ – ಯುವಜನರು ಸೇತುವೆಯಾಗಲಿ: ಸುನೀಲ್ ಎಂ.

ಭಟ್ಕಳ: ದೇಶದ ಭವಿಷ್ಯವನ್ನು ರೂಪಿಸುವ ಸಾಮರ್ಥ್ಯ ಹೊಂದಿರುವ ವಿದ್ಯಾರ್ಥಿಗಳು ಮತ್ತು ಯುವಜನರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದ ಸಂದರ್ಭದಲ್ಲಿ ಮತದಾರರು ಹಾಗೂ ತಾಲ್ಲೂಕು ಆಡಳಿತದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಿ, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವಲ್ಲಿ ತಮ್ಮ ಪರಿಣಾಮಕಾರಿ ಪಾತ್ರ ವಹಿಸಬೇಕು ಎಂದು ಭಟ್ಕಳ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ (SVEEP) ಸಮಿತಿಯ ಅಧ್ಯಕ್ಷ ಸುನೀಲ್ ಎಂ. ಹೇಳಿದರು.

ಸೋಮವಾರ ವಿದ್ಯಾರ್ಥಿ–ಯುವಜನರ ಜಾಗೃತಿ ರ‍್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿ, ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ವಿದ್ಯಾರ್ಥಿಗಳು ಮತ್ತು ಯುವಜನರು ಸಾರ್ವಜನಿಕರಿಗೆ ಎಸ್‌ಐಆರ್ ಕುರಿತು ಅರಿವು ಮೂಡಿಸಬೇಕು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಸಂಬಂಧಿತ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಲು ನೆರವು ನೀಡಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ನಿಗದಿತ ಅವಧಿಯೊಳಗೆ ಅಭಿಯಾನದ ಗುರಿ ಸಾಧಿಸಲು ಆಡಳಿತದೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಇದಕ್ಕೂ ಮುನ್ನ ಭಟ್ಕಳ ಉಪವಿಭಾಗಾಧಿಕಾರಿ ಮಹೇಶ್ ಅವರು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಜಾಗೃತಿ ರ‍್ಯಾಲಿಗೆ ಚಾಲನೆ ನೀಡಿದರು. ಬಳಿಕ ರ‍್ಯಾಲಿಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಅಂಜುಮನ್ ಪದವಿ ಕಾಲೇಜು, ಶ್ರೀ ಗುರು ಸುಧೀಂದ್ರ ಪದವಿಪೂರ್ವ ಕಾಲೇಜು ಹಾಗೂ ಸರ್ಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳು, ತಾಲ್ಲೂಕಿನ ವಿವಿಧ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಸಾರ್ವಜನಿಕರು ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು. ತಾಲ್ಲೂಕು ಪಂಚಾಯಿತಿ ಆವರಣದಿಂದ ಆರಂಭವಾದ ರ‍್ಯಾಲಿಯು ಶಮ್ಸುದ್ದೀನ್ ವೃತ್ತದ ಮೂಲಕ ಸಾಗಿಬಂದು ಅಂಜುಮನ್ ಪ್ರೌಢಶಾಲೆಯ ಮೈದಾನದಲ್ಲಿ ಸಮಾರೋಪಗೊಂಡಿತು.

ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಶೋಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ಅಧಿಕಾರಿ ಸುಶೀಲಾ ಮುಗೇರ, ಸಮಾಜ ಕಲ್ಯಾಣ ಇಲಾಖೆಯ ಸಹಾ ಯಕ ನಿರ್ದೇಶಕಿ ಗೀತಾ ಹೆಗಡೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಜು ನಾಯ್ಕ, ನಗರಸಭೆ ವ್ಯವಸ್ಥಾಪಕ ವಿ.ಟಿ. ನಾಯ್ಕ, ಪಟ್ಟಣ ಪಂಚಾಯಿತಿಯ ನಾರಾಯಣ ನಾಯ್ಕ, ಕಾಲೇಜುಗಳ ಪ್ರಾಂಶುಪಾಲರಾದ ವೀರೇಂದ್ರ ಶ್ಯಾನಭಾಗ್ ಹಾಗೂ ವಿಶ್ವನಾಥ ಪಾಲೇಕರ್, ತಾಲ್ಲೂಕು ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿ ರಾಜೇಶ್ ಮಹಾಲೆ, ಯೋಜನಾಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ನೋಡಲ್ ಅಧಿಕಾರಿ ಹೇಮಾ ನಾಯ್ಕ, ಉದಯ ಬೋರ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲ್ಲೂಕು ಪಂಚಾಯಿತಿಯ ವ್ಯವಸ್ಥಾಪಕ ಕರಿಅಪ್ಪ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಆರಂಭದಲ್ಲಿ ಎಲ್ಲರನ್ನು ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X