Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕುಟುಂಬ ಮೌಲ್ಯ, ಯುವಜನರ ಮಾರ್ಗದರ್ಶನಕ್ಕೆ...

ಕುಟುಂಬ ಮೌಲ್ಯ, ಯುವಜನರ ಮಾರ್ಗದರ್ಶನಕ್ಕೆ ಆದ್ಯತೆ ನೀಡಿ: ಖ್ವಾಜಾ ಅಕ್ರಮಿ

ವಾರ್ತಾಭಾರತಿವಾರ್ತಾಭಾರತಿ8 Aug 2026 9:00 PM IST
share
ಕುಟುಂಬ ಮೌಲ್ಯ, ಯುವಜನರ ಮಾರ್ಗದರ್ಶನಕ್ಕೆ ಆದ್ಯತೆ ನೀಡಿ: ಖ್ವಾಜಾ ಅಕ್ರಮಿ

ಭಟ್ಕಳ: ಮಾರ್ಕಝಿ ಖಲೀಫಾ ಜಮಾಅತುಲ್ ಮುಸ್ಲಿಮೀನ್ ವತಿಯಿಂದ ಶುಕ್ರವಾರ ರಾತ್ರಿ ಖಲೀಫಾ ಜಾಮಿಯ ಮಸೀದಿಯಲ್ಲಿ ವಾರ್ಷಿಕ ಮಹಾಸಭೆ ನಡೆಯಿತು.

ಸಭೆಯಲ್ಲಿ ಜಮಾಅತ್‌ನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಲಾಯಿತು. ಧಾರ್ಮಿಕ ವಿದ್ವಾಂಸರು ಕುಟುಂಬ ಮೌಲ್ಯಗಳ ಸಂರಕ್ಷಣೆ, ಸಾಮಾಜಿಕ ಸಮಸ್ಯೆಗಳ ಪರಿಹಾರ ಹಾಗೂ ಯುವಜನರ ಸರಿಯಾದ ಮಾರ್ಗದರ್ಶನದ ಕುರಿತು ಮಾತನಾಡಿದರು.

ಜಮಾಅತ್‌ನ ಪ್ರಧಾನ ಖಾಝಿ ಮೌಲಾನಾ ಖ್ವಾಜಾ ಮೊಯಿನುದ್ದೀನ್ ಅಕ್ರಮಿ ಮದನಿ ಮಾತನಾಡಿ, ‘ವಿವಾಹ ಕೇವಲ ಸಾಮಾಜಿಕ ಆಚರಣೆಯಲ್ಲ; ಅದು ಪವಿತ್ರ ಜವಾಬ್ದಾರಿ’ ಎಂದರು. ವಿವಾಹಕ್ಕೂ ಮುನ್ನ ಮಕ್ಕಳಿಗೆ ಧಾರ್ಮಿಕ, ನೈತಿಕ ಹಾಗೂ ಕುಟುಂಬ ಜೀವನದ ಕುರಿತು ಸೂಕ್ತ ಶಿಕ್ಷಣ ನೀಡಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.

ಹೆಣ್ಣುಮಕ್ಕಳಿಗೆ ತಾಳ್ಮೆ, ವಿವೇಕ, ಪತಿ ಹಾಗೂ ಅತ್ತೆ-ಮಾವಂದಿರನ್ನು ಗೌರವಿಸುವ ಗುಣಗಳನ್ನು ಬೆಳೆಸಬೇಕು. ಗಂಡುಮಕ್ಕಳು ಪತ್ನಿಯ ಹಕ್ಕುಗಳನ್ನು ಗೌರವಿಸಿ, ದಯೆ ಮತ್ತು ನ್ಯಾಯದಿಂದ ನಡೆದುಕೊಳ್ಳುವಂತೆ ಬೆಳೆಸಬೇಕು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ವಿಚ್ಛೇದನಕ್ಕೆ ಕಾರಣವಾಗದಂತೆ ಮಾತುಕತೆ, ತಾಳ್ಮೆ ಮತ್ತು ರಾಜಿ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಯುವಜನರು ಮಾದಕ ವಸ್ತುಗಳು, ಅನೈತಿಕ ಚಟುವಟಿಕೆಗಳು, ಕಾನೂನುಬಾಹಿರ ಕೃತ್ಯಗಳು ಹಾಗೂ ಅಕ್ರಮ ಆದಾಯದಿಂದ ದೂರವಿರಬೇಕು. ಇಂತಹ ಚಟುವಟಿಕೆಗಳು ಭವಿಷ್ಯವನ್ನು ಹಾಳುಮಾಡುವುದರ ಜತೆಗೆ ಕಾನೂನು ಸಮಸ್ಯೆ ಹಾಗೂ ಕುಟುಂಬಗಳ ಒಡಕಿಗೂ ಕಾರಣವಾಗಬಹುದು ಎಂದು ಎಚ್ಚರಿಸಿದರು. ದೇಶದ ಕಾನೂನುಗಳನ್ನು ಗೌರವಿಸಿ, ಕಾನೂನುಬಾಹಿರ ಚಟುವಟಿಕೆಗಳಿಂದ ದೂರವಿರುವಂತೆ ಕರೆ ನೀಡಿದರು.

ಸಭೆಯಲ್ಲಿ ಉಪ ಖಾಝಿ ಮೌಲವಿ ಅಯ್ಮನ್ ಅಲಿ ಕಮಾರಿ ನದ್ವಿ, ಉಪಾಧ್ಯಕ್ಷ ಡಾ. ಜುಬೈರ್ ಕೋಲಾ ಹಾಗೂ ಅಧ್ಯಕ್ಷ ಎಸ್.ಎಂ. ಸಯ್ಯದ್ ಮೊಹಿಯುದ್ದೀನ್ ಮಾರ್ಕೆಟ್ ಮಾತನಾಡಿದರು.

ಉಪಾಧ್ಯಕ್ಷ ಮೊಹ್ತಿಶಮ್ ಮೊಹಮ್ಮದ್ ಹಾಶಿಂ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಜುಬಾಪು ವಾರ್ಷಿಕ ವರದಿ ಹಾಗೂ ಹಣಕಾಸು ಕಾರ್ಯದರ್ಶಿ ಮೌಲವಿ ಇಸ್ಮಾಯಿಲ್ ಅಂಜುಮ್ ಗಂಗಾವಳಿ ನದ್ವಿ ಲೆಕ್ಕಪತ್ರ ಮಂಡಿಸಿದರು.

ಮೌಲವಿ ತಫ್ಹೀಮ್ ಸಿದ್ದೀಕಾ ನದ್ವಿ ಮತ್ತು ಮೌಲವಿ ಹಸನ್ ಡಿಎಫ್ ನದ್ವಿ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X