Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಡಿಸಿ, ಎಡಿಸಿ, ಎಸ್‌ಪಿ ಅವರನ್ನು ಭಟ್ಕಳದ...

ಡಿಸಿ, ಎಡಿಸಿ, ಎಸ್‌ಪಿ ಅವರನ್ನು ಭಟ್ಕಳದ ರಾಬಿತಾ ಸೊಸೈಟಿಯ ನಿಯೋಗ ಭೇಟಿ

ವಾರ್ತಾಭಾರತಿವಾರ್ತಾಭಾರತಿ19 Aug 2026 11:45 PM IST
share
ಡಿಸಿ, ಎಡಿಸಿ, ಎಸ್‌ಪಿ ಅವರನ್ನು ಭಟ್ಕಳದ ರಾಬಿತಾ ಸೊಸೈಟಿಯ ನಿಯೋಗ ಭೇಟಿ
ಎನ್‌ಎಚ್‌–66, ಯುಜಿಡಿ, ಎಸ್‌ಐಆರ್‌, ಮಾದಕವಸ್ತು ನಿಯಂತ್ರಣ ಸೇರಿದಂತೆ ಹಲವು ವಿಷಯಗಳ ಚರ್ಚೆ

ಭಟ್ಕಳ: ಭಟ್ಕಳದ ವಿವಿಧ ಸಾರ್ವಜನಿಕ, ಅಭಿವೃದ್ಧಿ, ಆಡಳಿತಾತ್ಮಕ ಹಾಗೂ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳ ಕುರಿತು ರಾಬಿತಾ ಸೊಸೈಟಿ ನಿಯೋಗವು ಬುಧವಾರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಸಹಾಯಕ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ರಾಬಿತಾ ಸೊಸೈಟಿ ಅಧ್ಯಕ್ಷ ಮಿಸ್ಬಾಹ್ ಉಮರ್ ಫಾರೂಕ್, ಪ್ರಧಾನ ಕಾರ್ಯದರ್ಶಿ ಡಾ. ಅತೀಕುರ್ ರಹ್ಮಾನ್ ಮುನೀರಿ ಸೇರಿದಂತೆ ಪದಾಧಿಕಾರಿಗಳು ನಿಯೋಗದಲ್ಲಿದ್ದರು.

ಎನ್‌ಎಚ್‌–66 ಕಾಮಗಾರಿ ಕುರಿತು ಚರ್ಚೆ

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರೊಂದಿಗೆ ನಡೆದ ಸಭೆಯಲ್ಲಿ ಭಟ್ಕಳದ ವಿವಿಧ ಅಭಿವೃದ್ಧಿ ಸಮಸ್ಯೆಗಳ ಜತೆಗೆ ರಾಷ್ಟ್ರೀಯ ಹೆದ್ದಾರಿ–66ರ ಕಾಮಗಾರಿಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಎನ್‌ಎಚ್‌–66ರ ಕಾಮಗಾರಿ ಪೂರ್ಣಗೊಳಿಸಲು ನಿಗದಿತ ಅವಧಿಗೆ ಇನ್ನೂ ಎಂಟು ತಿಂಗಳ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕಾಮಗಾರಿ ಶೀಘ್ರ ಪೂರ್ಣಗೊಳಿಸುವುದು, ಸಂಚಾರ ದಟ್ಟಣೆ, ಸಾರ್ವಜನಿಕರ ಸುರಕ್ಷತೆ ಹಾಗೂ ಪ್ರಯಾಣಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆಯೂ ನಿಯೋಗವು ಗಮನ ಸೆಳೆಯಿತು.

ಯುಜಿಡಿ ಸಮಸ್ಯೆಗೂ ಒತ್ತು

ಭಟ್ಕಳದ ಅಂಡರ್‌ಗ್ರೌಂಡ್ ಡ್ರೈನೇಜ್ (ಯುಜಿಡಿ) ಯೋಜನೆಯ ಸಮಸ್ಯೆಯನ್ನೂ ನಿಯೋಗವು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿತು. ಒಳಚರಂಡಿ ಕಾಮಗಾರಿ, ನೀರು ಹರಿದುಹೋಗುವ ವ್ಯವಸ್ಥೆ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಸುಮಾರು ನಾಲ್ಕು ವರ್ಷಗಳ ಹಿಂದೆ ತಜ್ಞರ ಪರಿಶೀಲನೆಯ ಆಧಾರದ ಮೇಲೆ ಯುಜಿಡಿ ಕುರಿತು ತಾಂತ್ರಿಕ ವರದಿ ಸಲ್ಲಿಸಲಾಗಿದ್ದರೂ, ಈವರೆಗೆ ಯಾವುದೇ ಗಮನಾರ್ಹ ಪ್ರಗತಿ ಕಂಡುಬಂದಿಲ್ಲ ಎಂದು ನಿಯೋಗ ತಿಳಿಸಿತು. ಈ ಹಿನ್ನೆಲೆಯಲ್ಲಿ ವರದಿಯನ್ನು ಮತ್ತೊಮ್ಮೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದು, ವಿಷಯದ ಬಗ್ಗೆ ವಿಶೇಷ ಗಮನ ಹರಿಸುವುದಾಗಿ ಭರವಸೆ ನೀಡಿದರು.

ಎಡಿಸಿಗೆ ಎಸ್‌ಐಆರ್‌ ಕುರಿತು ಮನವಿ

ಸಹಾಯಕ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರನ್ನು ಭೇಟಿಯಾದ ನಿಯೋಗವು ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿತು. ಎಸ್‌ಐಆರ್‌ನಿಂದ ಸಾರ್ವಜನಿಕ ರಿಗೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಅಗತ್ಯ ಸ್ಪಷ್ಟೀಕರಣಗಳ ಬಗ್ಗೆ ನಿಯೋಗವು ಅಧಿಕಾರಿಗಳ ಗಮನಕ್ಕೆ ತಂದಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಜಿಲ್ಲಾಧಿಕಾರಿಗೆ ರಾಬಿತಾ ಸೊಸೈಟಿ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಮಾದಕವಸ್ತು ನಿಯಂತ್ರಣಕ್ಕೆ ಒತ್ತು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರನ್ನು ಭೇಟಿಯಾದ ನಿಯೋಗವು ಭಟ್ಕಳದ ಕಾನೂನು ಸುವ್ಯವಸ್ಥೆ, ಹೆದ್ದಾರಿ ಬದಿಯ ಅಕ್ರಮ ಅಂಗಡಿಗಳು ಹಾಗೂ ಒತ್ತುವರಿಗಳು ಮತ್ತು ವಿಶೇಷವಾಗಿ ಯುವಜನರಲ್ಲಿ ಹೆಚ್ಚುತ್ತಿರುವ ಮಾದಕವಸ್ತು ಬಳಕೆ ಕುರಿತು ಚರ್ಚಿಸಿತು.

ಮಾದಕವಸ್ತುಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಯುವ ಜನರನ್ನು ಮಾದಕವಸ್ತುಗಳ ದುಷ್ಪರಿಣಾಮದಿಂದ ರಕ್ಷಿಸಲು ನಿರಂತರ ನಿಗಾ ಹಾಗೂ ಜಾಗೃತಿ ಅಗತ್ಯ ಎಂದು ನಿಯೋಗ ಒತ್ತಾಯಿಸಿತು.

ಪೊಲೀಸ್ ಇಲಾಖೆಯಿಂದ ಮಾದಕವಸ್ತುಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ನಿಗಾ ಹಾಗೂ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಎಸ್‌ಪಿ ದೀಪನ್ ಎಂ.ಎನ್. ತಿಳಿಸಿದರು.

ಪೊಲೀಸ್ ಮತ್ತು ಸಾರ್ವಜನಿಕರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಬಿತಾ ಸೊಸೈಟಿ ಸೂಕ್ತ ಸಲಹೆಗಳನ್ನು ನೀಡಿದರೆ ಅವುಗಳನ್ನು ಗಂಭೀರವಾಗಿ ಪರಿಗಣಿಸಿ, ಸಾಧ್ಯವಾದಷ್ಟು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ತುರ್ತು ಸಂದರ್ಭದಲ್ಲಿ ಅಥವಾ ತಕ್ಷಣದ ಪೊಲೀಸ್ ನೆರವು ಅಗತ್ಯವಿದ್ದಲ್ಲಿ 112ಕ್ಕೆ ಕರೆ ಮಾಡುವಂತೆ ಎಸ್‌ಪಿ ಸಾರ್ವಜನಿಕರಿಗೆ ತಿಳಿಸಿದರು.

ರಾಬಿತಾ ಸೊಸೈಟಿ ವತಿಯಿಂದ ಅಧ್ಯಕ್ಷ ಮಿಸ್ಬಾಹ್ ಫಾರೂಕ್ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಅತೀಕುರ್ ರಹ್ಮಾನ್ ಮುನೀರಿ ಅವರು ಎಸ್‌ಪಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ನಿಯೋಗದಲ್ಲಿ ಜೀಲಾನಿ ಮೊಹತೇಶಂ, ಮೌಲಾನಾ ಸಾಬಿರ್ ಅಲಿ ಅಕ್ಬರಾ, ಆಫ್ತಾಬ್ ಎಂ.ಜೆ., ಯಾಸಿನ್ ಅಸ್ಕರಿ, ಮೌಲಾನಾ ಅಬ್ದುಲ್ ಅಝೀಮ್ ರುಕ್ನುದ್ದೀನ್, ಅಥರ್ ಪೀರಝಾದೆ, ಹಾಶಿಮ್ ಮುಅಲ್ಲಿಂ, ನಿಸಾರ್ ಎಂ.ಜೆ., ಹಬೀಬುಲ್ಲಾ ಮೊಹತೇಶಂ ಹಾಗೂ ಅಬ್ದುಸ್ಸಮೀ ಕೋಲಾ ಇದ್ದರು.

ಭಟ್ಕಳದ ಅಭಿವೃದ್ಧಿ, ಎನ್‌ಎಚ್‌–66 ಹಾಗೂ ಯುಜಿಡಿ ಸಮಸ್ಯೆಗಳ ಪರಿಹಾರ, ಸಾರ್ವಜನಿಕ ಸೌಲಭ್ಯಗಳ ಸುಧಾರಣೆ ಮತ್ತು ಯುವಜನರನ್ನು ಮಾದಕವಸ್ತುಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಮುಂದೆಯೂ ಆಡಳಿತ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದಾಗಿ ರಾಬಿತಾ ಸೊಸೈಟಿ ತಿಳಿಸಿದೆ.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X