Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಪ್ರವಾದಿ ಬೋಧಿಸಿದ ತಾಳ್ಮೆಯೇ ಯಶಸ್ಸಿನ...

ಪ್ರವಾದಿ ಬೋಧಿಸಿದ ತಾಳ್ಮೆಯೇ ಯಶಸ್ಸಿನ ಕಿರೀಟ: ಸಚಿವ ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ31 Aug 2026 7:27 PM IST
share
ಪ್ರವಾದಿ ಬೋಧಿಸಿದ ತಾಳ್ಮೆಯೇ ಯಶಸ್ಸಿನ ಕಿರೀಟ: ಸಚಿವ ಯು.ಟಿ. ಖಾದರ್

ಭಟ್ಕಳ: "ಒಬ್ಬ ಯಶಸ್ವಿ ರಾಜನ ಕಿರೀಟದಲ್ಲಿ ಎಷ್ಟು ವಜ್ರಗಳಿವೆ ಎನ್ನುವುದು ಮುಖ್ಯವಲ್ಲ; ಆತನಿಗೆ ಎಷ್ಟು ತಾಳ್ಮೆ ಇದೆ ಎನ್ನುವುದೇ ಅವನ ಯಶಸ್ಸಿನ ನೈಜ ಕಿರೀಟವಾಗಿದೆ. ವಿಶ್ವಪ್ರವಾದಿ ಮುಹಮ್ಮದ್ (ಸ) ಅವರ ಸಂದೇಶವೂ ಇದೇ ಆಗಿದೆ" ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಹೇಳಿದರು.

ಅವರು ರವಿವಾರ ರಾತ್ರಿ ತಂಝೀಮ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕರು ಸೀರತ್ ಅಭಿಯಾನದ ಅಂಗವಾಗಿ ಪ್ರವಾದಿ ಮುಹಮ್ಮದ್ ಪೈಗಂಬರ್‍ ಕುರಿತಂತೆ ಮಂಗಳೂರಿನ ಶಾಂತಿ ಪ್ರಕಾಶನ ಪ್ರಕಟಿಸಿದ ಅಬ್ದುಸ್ಸಲಾಮ್ ಪುತ್ತಿಗೆ ಅವರ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’ ಹಾಗೂ ಯೋಗೇಶ್ ಮಾಸ್ಟರ್ ಅವರ ‘ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್ (ಸ)’ ಕೃತಿಗಳು ಲೋಕಾರ್ಪಣೆಗೊಳಿಸಿ ಮಾತನಾಡಿದರು.

"ಈ ಎರಡು ಕೃತಿಗಳು ಪ್ರವಾದಿವರ್ಯರ ಸಂದೇಶಗಳನ್ನು ಇಂದಿನ ಸಮಾಜಕ್ಕೆ ಪರಿಚಯಿಸಲು ಇರುವ ದೊಡ್ಡ ಅವಕಾಶಗಳಾಗಿವೆ" ಎಂದು ಶ್ಲಾಘಿಸಿದರು. ಪ್ರವಾದಿ ಮುಹಮ್ಮದ್ (ಸ) ಅವರ ಬೋಧನೆಗಳನ್ನು ಉಲ್ಲೇಖಿಸಿ ಯುವ ಪೀಳಿಗೆಗೆ ಕಿವಿಮಾತು ಹೇಳಿದ ಯು.ಟಿ. ಖಾದರ್, "ಯುವಕರು ಯಾವುದೇ ಸನ್ನಿವೇಶದಲ್ಲೂ ಭಾವನಾತ್ಮಕತೆಗೆ ಒಳಗಾಗಬಾರದು" ಎಂದರು. ಪ್ರವಾದಿಯವರು ಸಾರಿದ ಸಂದೇಶದಂತೆ, ನಮ್ಮ ಜೀವನದಲ್ಲಿ ಎಂತಹದೇ ಕಷ್ಟ ಗಳು, ಅವಮಾನಗಳು ಅಥವಾ ತೊಂದರೆಗಳು ಎದುರಾದರೂ ಅವು ಕೇವಲ ತಾತ್ಕಾಲಿಕವಾಗಿದ್ದು, ತಾಳ್ಮೆಯಿಂದ ಎದುರಿಸಿದರೆ ಖಂಡಿತ ಪರಿಹಾರ ಸಿಗುತ್ತದೆ ಎಂದು ಪ್ರವಾದಿ ಸಂದೇಶವನ್ನು ನೆನಪಿಸಿದರು.

ಬೆಂಗಳೂರಿನಲ್ಲಿ ಇಂಟರ್ನ್ಯಾಷನಲ್ ಇಸ್ಲಾಮಿಕ್ ಮ್ಯೂಸಿಯಂ: ವಿಶ್ವಪ್ರವಾದಿ ಮುಹಮ್ಮದ್ (ಸ) ಅವರ ಜೀವನ ಚರಿತ್ರೆ, ಇತಿಹಾಸ ಮತ್ತು ಅವರ ಮಾನವೀಯ ಸಂದೇಶಗಳ ಸಾರವನ್ನು ಮುಂಬರುವ ತಲೆಮಾರಿಗೆ ತಲುಪಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಸಚಿವರು ಪ್ರಕಟಿಸಿದರು. "ಬೆಂಗಳೂರಿನ ಹಜ್ ಹೌಸ್‌ನ ಬೇಸ್‌ಮೆಂಟ್ ಹಾಗೂ ಟಾಪ್ ಫ್ಲೋರ್‌ನಲ್ಲಿ ದೇಶದಲ್ಲೇ ಪ್ರಥಮ ಎನ್ನಬಹುದಾದ ಅಂತರರಾಷ್ಟ್ರೀಯ ಇಸ್ಲಾಮಿಕ್ ಮ್ಯೂಸಿಯಂ ಅನ್ನು ಅತ್ಯಂತ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು" ಎಂದು ಘೋಷಿಸಿದರು. ಈ ಮಾದರಿ ಎಕ್ಸಿಬಿಷನ್ ಮೂಲಕ ಮುಂದಿನ ದಿನಗಳಲ್ಲಿ ಎಲ್ಲ ಜಾತಿ ಮತ್ತು ವರ್ಗಗಳ ಮಕ್ಕಳಿಗೆ ಪ್ರವಾದಿಯವರ ಇತಿಹಾಸ ಮತ್ತು ಶಾಂತಿಯ ಸಂದೇಶವನ್ನು ತಿಳಿಸಿಕೊಡುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

ಹಿರಿಯ ಪತ್ರಕರ್ತ ಎಂ.ಆರ್‍.ಮಾನ್ವಿ ಕೃತಿ ಹಾಗೂ ಕೃತಿಕಾರರನ್ನು ಪರಿಚಯಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಉಪಸಭಾಪತಿ ಮಂಕಾಳ್ ಎಸ್.ವೈದ್ಯ, ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನಾ ಅಬ್ದುಲ್ ರಬ್ ನದ್ವಿ, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಎಸ್.ಎಂ.ಸೈಯ್ಯದ್ ಝುಬೇರ್‍ ಮಾರ್ಕೇಟ್, ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಪ್ರಧಾನ ಕಾರ್ಯದರ್ಶಿ ಮೌಲಾನ ಅಝಿಝುರ್‍ರಹ್ಮಾನ್ ರುಕ್ನುದ್ದೀನ್ ನದ್ವಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X