Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಎಸ್‌ಐಆರ್‌: ಹೊರರಾಜ್ಯ, ವಿದೇಶದಲ್ಲಿರುವ...

ಎಸ್‌ಐಆರ್‌: ಹೊರರಾಜ್ಯ, ವಿದೇಶದಲ್ಲಿರುವ ಮತದಾರರ ಕುಟುಂಬದವರಿಗೆ ನೋಟಿಸ್‌ಗೆ ಉತ್ತರಿಸಲು ಅವಕಾಶ ನೀಡುವಂತೆ ತಂಝೀಮ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 Sept 2026 6:49 PM IST
share
ಎಸ್‌ಐಆರ್‌: ಹೊರರಾಜ್ಯ, ವಿದೇಶದಲ್ಲಿರುವ ಮತದಾರರ ಕುಟುಂಬದವರಿಗೆ ನೋಟಿಸ್‌ಗೆ ಉತ್ತರಿಸಲು ಅವಕಾಶ ನೀಡುವಂತೆ ತಂಝೀಮ್ ಆಗ್ರಹ

ಭಟ್ಕಳ: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಸಂದರ್ಭದಲ್ಲಿ ವಿದೇಶ ಅಥವಾ ರಾಜ್ಯದ ಹೊರಗೆ ವಾಸಿಸುತ್ತಿರುವ ಮತದಾರರ ಪರವಾಗಿ ಅವರ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ನೋಟಿಸ್‌ಗೆ ಉತ್ತರಿಸಲು ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅವಕಾಶ ನೀಡಬೇಕು ಎಂದು ಮಜ್ಲಿಸ್‌ ಇಸ್ಲಾಹ್‌ ವ ತಂಝೀಮ್‌ ಭಟ್ಕಳದ ಪ್ರಧಾನ ಕಾರ್ಯದರ್ಶಿ ಅಝೀಝುರ್ರಹ್ಮಾನ್‌ ರುಕ್ನುದ್ದೀನ್‌ ನದ್ವಿ ಒತ್ತಾಯಿಸಿದರು.

ಈ ಕುರಿತು ತಂಝೀಮ್‌ನ ನಿಯೋಗವು ಕಾರವಾರಕ್ಕೆ ತೆರಳಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಕಾರಣಗಳಿಂದ ಭಟ್ಕಳದ ಹೆಚ್ಚಿನ ಸಂಖ್ಯೆಯ ಮತದಾರರು ವಿದೇಶ ಹಾಗೂ ಕರ್ನಾಟಕದ ಹೊರರಾಜ್ಯಗಳಲ್ಲಿ ವಾಸಿಸುತ್ತಿದ್ದಾರೆ. ಎಸ್‌ಐಆರ್‌ ಪ್ರಕ್ರಿಯೆಯಡಿ ಇಂತಹ ಮತದಾರರಿಗೆ ನೋಟಿಸ್‌ ಜಾರಿಯಾದಲ್ಲಿ ನಿಗದಿತ ಅವಧಿಯೊಳಗೆ ಸ್ವತಃ ಹಾಜರಾಗಿ ಉತ್ತರಿಸುವಂತೆ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸು ವಂತೆ ಸೂಚಿಸಲಾಗುತ್ತಿದೆ. ಆದರೆ ವಿದೇಶಗಳಲ್ಲಿ ಉದ್ಯೋಗದಲ್ಲಿರುವ ಭಟ್ಕಳದ ಮತದಾರರಿಗೆ ಕಡಿಮೆ ಅವಧಿಯಲ್ಲಿ ಭಟ್ಕಳಕ್ಕೆ ಆಗಮಿಸಿ ಸಂಬಂಧಿಸಿದ ಕಚೇರಿಗಳಿಗೆ ಹಾಜರಾಗುವುದು ಪ್ರಾಯೋಗಿಕವಾಗಿ ಕಷ್ಟಸಾಧ್ಯವಾಗಿದೆ ಎಂದು ಅವರು ವಿವರಿಸಿದರು.

ತೆಲಂಗಾಣದ ಮುಖ್ಯ ಚುನಾವಣಾಧಿಕಾರಿ ಅವರು ಆ. 27ರಂದು ಹೊರಡಿಸಿರುವ ಮಾರ್ಗಸೂಚಿಯನ್ನು ಉಲ್ಲೇಖಿ ಸಿದ ಅಝೀಝುರ್ರಹ್ಮಾನ್‌, ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯ ಪೀಡಿತರು ಹಾಗೂ ವಿದೇಶದಲ್ಲಿರುವ ಮತದಾರರ ಪರವಾಗಿ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಚುನಾವಣಾ ನೋಂದಣಾ ಧಿಕಾರಿ (ERO) ಅಥವಾ ಸಹಾಯಕ ಚುನಾವಣಾ ನೋಂದಣಾಧಿಕಾರಿ (AERO) ಮುಂದೆ ಹಾಜರಾಗಿ ಅಗತ್ಯ ದಾಖಲೆಗಳು ಮತ್ತು ಉತ್ತರಗಳನ್ನು ಸಲ್ಲಿಸಲು ಅಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದೇ ರೀತಿಯ ಸೌಲಭ್ಯವನ್ನು ಕರ್ನಾಟಕದಲ್ಲಿಯೂ, ವಿಶೇಷವಾಗಿ ಭಟ್ಕಳದ ಮತದಾರರಿಗೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ತೆಲಂಗಾಣದ ಮುಖ್ಯ ಚುನಾವಣಾಧಿಕಾರಿ ಹೊರಡಿಸಿರುವ ಮಾರ್ಗಸೂಚಿಯ ಪ್ರತಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದ ನಿಯೋಗ, ಈ ಕುರಿತು ತನ್ನ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನೂ ನೀಡಿತು.

ಭೌಗೋಳಿಕ ಅಂತರದಿಂದ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳ ಬೇಕು. ವಿದೇಶ ಅಥವಾ ಹೊರರಾಜ್ಯದಲ್ಲಿ ವಾಸಿಸುವ ಮತದಾರರ ಪರವಾಗಿ ಅವರ ವಯಸ್ಕ ಕುಟುಂಬದ ಸದಸ್ಯರು ಎಸ್‌ಐಆರ್‌ ನೋಟಿಸ್‌ಗೆ ಉತ್ತರಿಸಲು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅವಕಾಶ ನೀಡುವುದರಿಂದ ಎಲ್ಲ ಅರ್ಹ ಮತದಾರರಿಗೂ ನ್ಯಾಯಯುತ ಹಾಗೂ ಸಮಾನ ಅವಕಾಶ ದೊರೆಯಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು. ನಿಯೋಗದಲ್ಲಿ ವಕೀಲ ಇಮ್ರಾನ್‌ ಲಂಕಾ, ಅಬ್ದುಲ್‌ ಮಾಜಿದ್‌ ರುಕ್ನುದ್ದೀನ್‌, ಆದಂ ಪಣಂಬೂರು ಸೇರಿದಂತೆ ತಂಝೀಮ್‌ನ ಪದಾಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X