ಭಟ್ಕಳ: ಕಾರು ಢಿಕ್ಕಿ; ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 62 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಶಿಫಾ ಕ್ರಾಸ್ ಸಮೀಪ ನಡೆದಿದೆ.
ಕುಮಟಾ ನಿವಾಸಿ, ಸದ್ಯ ಭಟ್ಕಳದ ಮುಂಡಳ್ಳಿಯಲ್ಲಿ ಸಂಬಂಧಿಕರೊಂದಿಗೆ ವಾಸವಾಗಿದ್ದ ಪರಮೇಶ್ವರ ರಾಮ ದೇವಾಡಿಗ (62) ಮೃತಪಟ್ಟವರು.
ಪರಮೇಶ್ವರ ಅವರು ಎರಡು ದಿನಗಳ ಹಿಂದಷ್ಟೇ ಭಟ್ಕಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ವಾಚ್‌ಮನ್ ಆಗಿ ಕೆಲಸಕ್ಕೆ ಸೇರಿದ್ದರು. ಗುರುವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಶಿಫಾ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಭಟ್ಕಳದಿಂದ ಶಿರಸಿಯತ್ತ ತೆರಳುತ್ತಿದ್ದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾ ಯಿತು. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story




