Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳದಲ್ಲಿ ಗಣೇಶ ವಿಸರ್ಜನೆಗೆ ಬಿಗಿ...

ಭಟ್ಕಳದಲ್ಲಿ ಗಣೇಶ ವಿಸರ್ಜನೆಗೆ ಬಿಗಿ ಪೊಲೀಸ್ ಬಂದೋಬಸ್ತ್

ವಾರ್ತಾಭಾರತಿವಾರ್ತಾಭಾರತಿ18 Sept 2026 10:34 PM IST
share
ಭಟ್ಕಳದಲ್ಲಿ ಗಣೇಶ ವಿಸರ್ಜನೆಗೆ ಬಿಗಿ ಪೊಲೀಸ್ ಬಂದೋಬಸ್ತ್

ಭಟ್ಕಳ: ಗಣೇಶೋತ್ಸವದ ಅಂತಿಮ ದಿನವಾದ ಶುಕ್ರವಾರ ಭಟ್ಕಳದಲ್ಲಿ ಪೊಲೀಸ್ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಹಿಂಸಾಚಾರ ನಿಯಂತ್ರಣಕ್ಕಾಗಿ ವಿಶೇಷ ಪಡೆಯನ್ನೂ ನಿಯೋಜಿಸಲಾಗಿದೆ.

ಇಲ್ಲಿನ ಗುಲ್ಮಿ ಪ್ರದೇಶದ ರೈಲು ನಿಲ್ದಾಣ ರಸ್ತೆಯಲ್ಲಿ ಬುಧವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದ್ದು, ಮಸೀದಿಯೊಂದರ ಕಿಟಕಿ ಗಾಜುಗಳು ಒಡೆದಿವೆ. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಗಣೇಶೋತ್ಸವದ ಪೆಂಡಾಲ್ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಿ ತಾಲಾಂದ್ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ಶಂಕಪ್ಪ ನಾಯ್ಕ್ ಅವರು ಭಟ್ಕಳ ನಗರ ಠಾಣೆಗೆ ದೂರು ನೀಡಿದ್ದು, ಈ ಕುರಿತು ಕ್ರೈಂ ನಂ. 167/2026ರಂತೆ ಪ್ರಕರಣ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಪೊಲೀಸ್ ಪಥಸಂಚಲನ

ಬುಧವಾರದ ಘಟನೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಆತಂಕ ನಿವಾರಿಸುವ ಹಾಗೂ ಶಾಂತಿ–ಸುವ್ಯವಸ್ಥೆಯ ಬಗ್ಗೆ ಭರವಸೆ ಮೂಡಿಸುವ ಉದ್ದೇಶದಿಂದ ಶುಕ್ರವಾರ ಪೊಲೀಸರು ಹಾಗೂ ವಿಶೇಷ ಪಡೆ ಭಟ್ಕಳದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿತು.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಭಟ್ಕಳ ಎಎಸ್ಪಿ ರಾನು ಗುಪ್ತಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು. ಮಾರುಕಟ್ಟೆ ಮೂಲಕ ಸಾಗಿದ ಪಥಸಂಚಲನದ ಮೂಲಕ ಯಾವುದೇ ರೀತಿಯ ಆತಂಕಕ್ಕೆ ಒಳಗಾಗದಂತೆ ಸಾರ್ವಜನಿಕರಿಗೆ ಭರವಸೆ ನೀಡಲಾಯಿತು.

ಉನ್ನತ ಅಧಿಕಾರಿಗಳ ಭೇಟಿ, ಬಿಗಿ ಭದ್ರತೆ

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಹಾಗೂ ಡಿವೈಎಸ್ಪಿ ಕಾರವಾರದಿಂದ ಭಟ್ಕಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದರು.

ಗಣೇಶ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಟ್ಟಣದಾದ್ಯಂತ ಪೊಲೀಸ್ ಬಂದೋ ಬಸ್ತ್ ಮತ್ತಷ್ಟು ಬಿಗಿಗೊಳಿಸಲಾಗಿದೆ. ಪ್ರಮುಖ ರಸ್ತೆಗಳು, ವೃತ್ತಗಳು, ಸೂಕ್ಷ್ಮ ಪ್ರದೇಶಗಳು ಹಾಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಭದ್ರತಾ ಕ್ರಮವಾಗಿ ಡಿಎಆರ್ ಮತ್ತು ಕೆಎಸ್‌ಆರ್‌ಪಿ ಸ್ಟ್ರೈಕಿಂಗ್ ಫೋರ್ಸ್‌ನ ಐದು ತುಕಡಿಗಳು, ಎಸ್‌ಎಎಫ್‌ನ 21 ಸಿಬ್ಬಂದಿ ಹಾಗೂ ಆರ್‌ಎಫ್‌ನ 136 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಎಸ್ಪಿ ಮೊಕ್ಕಾಂ, ಶಾಂತಿಗೆ ಮನವಿ

ಜಿಲ್ಲಾ ಎಸ್ಪಿ ದೀಪನ್ ಎಂ.ಎನ್. ಅವರು ಭಟ್ಕಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯು ತ್ತಿದ್ದು, ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಕರ್ತವ್ಯನಿರತ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಕೃತ್ಯಗಳಿಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸೌಹಾರ್ದ ಕಾಪಾಡಲು ಸಹಕರಿಸುವಂತೆ ಮನವಿ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X