Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮಹಿಳೆಯರ ಪ್ರತಿಭೆ ಅನಾವರಣಕ್ಕೆ ವೇದಿಕೆ...

ಮಹಿಳೆಯರ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಿರುವುದು ಮಾದರಿ: ಹಸ್ತಾ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ15 Oct 2026 8:21 PM IST
share
ಮಹಿಳೆಯರ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಿರುವುದು ಮಾದರಿ: ಹಸ್ತಾ ಶೆಟ್ಟಿ

ಭಟ್ಕಳ: ಶ್ರೀ ನಾಗ ಮಾಸ್ತಿ ಕ್ಷೇತ್ರದಲ್ಲಿ ನಡೆಯುತ್ತಿರುವ ಶರನ್ನವರಾತ್ರಿಯ ನಾಲ್ಕನೇ ದಿನವಾದ ಬುಧವಾರ ಮಹಿಳಾ ದಸರಾ ಉದ್ಘಾಟನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಮಧ್ಯಾಹ್ನ ಮಹಿಳೆಯರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಾತ್ರಿ ನಡೆದ ಮಹಿಳಾ ದಸರಾ ಸಾಂಸ್ಕೃತಿಕ ವೇದಿಕೆಯನ್ನು ಅರಣ್ಯ ಉಪಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಶಕ್ತಿಮಾತೆಯ ಆರಾಧನೆಯ ನವರಾತ್ರಿ ಸಂದರ್ಭದಲ್ಲಿ ಮಹಿಳೆಯರಿಗಾಗಿಯೇ ವೇದಿಕೆ ಕಲ್ಪಿಸಿ ಮಹಿಳಾ ದಸರಾ ಆಚರಿಸುತ್ತಿರುವುದು ಇಡೀ ಜಿಲ್ಲೆಗೆ ಮಾದರಿಯಾಗಿದೆ ಎಂದರು.

ಕುಟುಂಬದ ಜವಾಬ್ದಾರಿಗಳಲ್ಲಿ ತೊಡಗಿಸಿಕೊಂಡು ಮಕ್ಕಳ ಲಾಲನೆ, ಪಾಲನೆ ಹಾಗೂ ಹಿರಿಯರ ಆರೈಕೆಯಲ್ಲಿ ನಿರತರಾಗಿರುವ ಮಹಿಳೆಯರು ದೈನಂದಿನ ಒತ್ತಡಗಳಿಂದ ಹೊರಬಂದು ತಮ್ಮಲ್ಲಿರುವ ಸಾಂಸ್ಕೃತಿಕ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ವೇದಿಕೆಗಳು ಸಹಕಾರಿಯಾಗುತ್ತವೆ. ಪ್ರಥಮ ವರ್ಷದ ಮಹಿಳಾ ದಸರಾ ಉದ್ಘಾಟನೆಯಲ್ಲಿ ಭಾಗವಹಿಸಿರುವುದು ತಮ್ಮ ಜೀವನದಲ್ಲಿ ಮರೆಯಲಾಗದ ಅನುಭವ ಎಂದು ಹರ್ಷ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಎಸ್‌ಎನ್‌ಡಿಪಿ ರಾಜ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದೀಪಾ ನಾಯ್ಕ ಮಾತನಾಡಿ, ಮಹಿಳೆಯರು ಜಾಗೃತರಾಗಿ ಸಂಘಟಿತರಾಗಬೇಕು. ಸಂಘಟನೆ ಜೀವನದ ಭದ್ರತೆಗೆ ಬುನಾದಿ ಯಾಗಿದ್ದು, ಪರಸ್ಪರ ಸ್ನೇಹ ಮತ್ತು ಸಹಕಾರದಿಂದ ಸಂಕಷ್ಟಗಳನ್ನು ಎದುರಿಸುವ ಧೈರ್ಯ ದೊರೆಯುತ್ತದೆ. ನಾಗ ಮಾಸ್ತಿ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಮಹಿಳಾ ದಸರಾ ಆಚರಿಸುವ ಮೂಲಕ ಮಹಿಳೆಯರಿಗೆ ಗೌರವ ನೀಡುತ್ತಿರುವುದು ಶ್ಲಾಘನೀಯ ಎಂದರು.

ಡಾ. ಸವಿತಾ ಕಾಮತ್ ಹಾಗೂ ಸಿದ್ಧಾರ್ಥ ಕಾಲೇಜಿನ ಪ್ರಾಂಶುಪಾಲೆ ಅರ್ಚನಾ ನಾಯ್ಕ ಮಹಿಳಾ ವೇದಿಕೆಯ ಕಾರ್ಯಕ್ರಮವನ್ನು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲತಾ ನಾಗರಾಜ್ ನಾಯ್ಕ ವಹಿಸಿದ್ದರು.

ಆರಂಭದಲ್ಲಿ ರೇಖಾ ನಾಯ್ಕ ಸ್ವಾಗತಿಸಿದರು. ಶ್ರೀ ನಾಗ ಮಾಸ್ತಿ ಟ್ರಸ್ಟ್ ಅಧ್ಯಕ್ಷ ಸತೀಶ್ ಕುಮಾರ್ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೇತ್ರದಲ್ಲಿ ಮಹಿಳೆಯರಿಗೆ ವಿಶೇಷ ಮಹತ್ವವಿದೆ. ಜೀವನದ ಒತ್ತಡ ಮತ್ತು ಬೇಸರದಿಂದ ಹೊರಬಂದು ತಮ್ಮ ಪ್ರತಿಭೆ ಪ್ರದರ್ಶಿಸಲು ಮಹಿಳೆಯರು ಈ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಭಾಗ್ಯ ನಾಯ್ಕ ವಂದಿಸಿದರು. ಶಿಕ್ಷಕಿ ಪ್ರತಿಭಾ ಕರ್ಕಿಕರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X