Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕರ್ನಾಟಕ ವಿಶ್ವವಿದ್ಯಾಲಯ ಕ್ರಿಕೆಟ್...

ಕರ್ನಾಟಕ ವಿಶ್ವವಿದ್ಯಾಲಯ ಕ್ರಿಕೆಟ್ ತಂಡಕ್ಕೆ ಭಟ್ಕಳದ ಐವರು ಆಯ್ಕೆ

ಅಂಜುಮನ್ ಶಿಕ್ಷಣ ಸಂಸ್ಥೆಗಳ ನಾಲ್ವರು ವಿದ್ಯಾರ್ಥಿಗಳಿಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ19 Nov 2026 10:41 PM IST
share
ಕರ್ನಾಟಕ ವಿಶ್ವವಿದ್ಯಾಲಯ ಕ್ರಿಕೆಟ್ ತಂಡಕ್ಕೆ ಭಟ್ಕಳದ ಐವರು ಆಯ್ಕೆ

ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕ್ರಿಕೆಟ್ ತಂಡಕ್ಕೆ ಭಟ್ಕಳ ತಾಲ್ಲೂಕಿನ ಐವರು ಆಟಗಾರರು ಆಯ್ಕೆಯಾಗಿದ್ದಾರೆ. ಇವರಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಗಳ ನಾಲ್ವರು ವಿದ್ಯಾರ್ಥಿಗಳಿದ್ದು, ಮತ್ತೊಬ್ಬರು ಮುರ್ಡೇಶ್ವರದ ಬೀನಾ ವೈದ್ಯ ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.

ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಆ್ಯಂಡ್ ಕಂಪ್ಯೂಟರ್ ಅಪ್ಲಿಕೇಶನ್ಸ್ (AIMCA) ದೈಹಿಕ ಶಿಕ್ಷಣ ನಿರ್ದೇಶಕ ಮೋಹನ್ ಮೇಸ್ತಾ ಅವರ ಪ್ರಕಾರ, ಅಂಜುಮನ್ ಶಿಕ್ಷಣ ಸಂಸ್ಥೆಗಳ ನಾಲ್ವರು ವಿದ್ಯಾರ್ಥಿಗಳು ಒಂದೇ ಬಾರಿ ವಿಶ್ವವಿದ್ಯಾಲಯದ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವುದು ಇದೇ ಮೊದಲು. ಇವರಲ್ಲಿ ಮೂವರು AIMCAಯ ವಿದ್ಯಾರ್ಥಿಗಳಾಗಿದ್ದು, ಮತ್ತೊಬ್ಬರು ಅಂಜುಮನ್ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ 220 ಕಾಲೇಜುಗಳ 116 ಆಟಗಾರರು ಧಾರವಾಡದಲ್ಲಿ ನಡೆದ ಮೂರು ದಿನಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಸುತ್ತುಗಳ ಪ್ರದರ್ಶನದ ಆಧಾರದಲ್ಲಿ 18 ಆಟಗಾರರನ್ನು ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಭಟ್ಕಳದ ಐವರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಆಯ್ಕೆಯಾದ ಆಟಗಾರರು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಭಟ್ಕಳಕ್ಕೆ ಕೀರ್ತಿ ತರಲಿದ್ದಾರೆ ಎಂಬ ವಿಶ್ವಾಸವನ್ನು ಮೋಹನ್ ಮೇಸ್ತಾ ವ್ಯಕ್ತಪಡಿಸಿದ್ದಾರೆ.

2018ರಲ್ಲಿ ಸ್ಥಾಪನೆಯಾದ ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿಯ ಅಧ್ಯಕ್ಷ ವಾಸೀಂ ಕೆ.ಎಂ. ಮಾತನಾಡಿ, ಆಯ್ಕೆಯಾದ ಐವರು ಆಟಗಾರರೂ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದಾರೆ. ಕಳೆದ ವರ್ಷ ಅಕಾಡೆಮಿಯ ಇಬ್ಬರು ಆಟಗಾರರು ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆಯಾಗಿದ್ದರು ಎಂದು ತಿಳಿಸಿದರು. ಈ ಬಾರಿಯ ಆಯ್ಕೆ ಪ್ರಕ್ರಿಯೆಯ ಐದೂ ಸುತ್ತು ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರು ತಂಡದಲ್ಲಿ ಸ್ಥಾನ ಗಳಿಸಿದ್ದಾರೆ ಎಂದರು.

ಆಟಗಾರರು ತಮ್ಮ ಸಾಧನೆಗೆ ಅಕಾಡೆಮಿ ಹಾಗೂ ಮೋಹನ್ ಮೇಸ್ತಾ ಅವರ ಮಾರ್ಗದರ್ಶನದ ಜತೆಗೆ ಯಾಸಿರ್ ಸರ್, ಆಸಿಮ್ ಸರ್, ಮುದಸ್ಸಿರ್ ಸರ್, ಆಸಿಮ್ ಕಟಪಾಡಿ, ಯಾಸಿರ್ ನಿಹಾಲ್ ಮತ್ತು ಅನಸ್ ಮುಲ್ಲಾ ಅವರ ಪ್ರೋತ್ಸಾಹ ಹಾಗೂ ಸಹಕಾರವನ್ನು ಸ್ಮರಿಸಿದ್ದಾರೆ.

ಆಯ್ಕೆಯಾದ ಆಟಗಾರರು:-

1. ಸಾಹಿಲ್ ಪಠಾಣ್: ರಫೀಕ್ ಪಠಾಣ್ ಅವರ ಪುತ್ರ. AIMCAಯಲ್ಲಿ ದ್ವಿತೀಯ ವರ್ಷದ ಬಿಬಿಎ ವಿದ್ಯಾರ್ಥಿ. ಮದೀನಾ ಸ್ಪೋರ್ಟ್ಸ್ ಸೆಂಟರ್ ಪ್ರತಿನಿಧಿಸುವ ಇವರು ವಿಕೆಟ್ ಕೀಪರ್ ಹಾಗೂ ಬ್ಯಾಟರ್.

2. ಜಾಫರ್ ಜುಮಾನ್ ಜುಶಿದ್ದಿ: ಜಮೀಲ್ ಅಹ್ಮದ್ ಜುಶಿದ್ದಿ ಅವರ ಪುತ್ರ. ಅಂಜುಮನ್‌ನಲ್ಲಿ ಮೂರನೇ ವರ್ಷದ ಬಿಬಿಎ ವಿದ್ಯಾರ್ಥಿ. ಲಯನ್ಸ್ ಸ್ಪೋರ್ಟ್ಸ್ ಸೆಂಟರ್ ಪರ ಆಡುತ್ತಾರೆ.

3. ಐಮನ್ ಮುಲ್ಲಾ: ರಫೀಕ್ ಮುಲ್ಲಾ ಅವರ ಪುತ್ರ. AIMCAಯಲ್ಲಿ ದ್ವಿತೀಯ ವರ್ಷದ ಬಿಬಿಎ ವಿದ್ಯಾರ್ಥಿ. ಸುಲ್ತಾನಿ ವೆಲ್ಫೇರ್ ಅಸೋಸಿಯೇಷನ್ ಪರ ಆಡುತ್ತಾರೆ.

4. ಮೊಹಮ್ಮದ್ ಯಹ್ಯಾ ಪಿಲ್ಲೂರ್: ಅಂಜುಮನ್ ಆರ್ಟ್ಸ್, ಸೈನ್ಸ್ ಆ್ಯಂಡ್ ಕಾಮರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ. ಹನೀಫಾಬಾದ್ ವೆಲ್ಫೇರ್ ಅಸೋಸಿಯೇಷನ್ ತಂಡದ ಆಲ್‌ರೌಂಡರ್.

5. ಅರ್ಸಲಾನ್ ಪೈಲಟ್: ಆದಂ ಪೈಲಟ್ ಅವರ ಪುತ್ರ. ಮುರ್ಡೇಶ್ವರದ ಬೀನಾ ವೈದ್ಯ ಕಾಲೇಜಿನಲ್ಲಿ ಮೂರನೇ ವರ್ಷದ ಬಿಕಾಂ ವಿದ್ಯಾರ್ಥಿ. ಪ್ರಿನ್ಸ್ ಮಂಕಿ ಕ್ರಿಕೆಟ್ ತಂಡದ ಆಲ್‌ರೌಂಡರ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X