Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಸಾರ್ವಜನಿಕರ ಅಹವಾಲುಗಳಿಗೆ 15 ದಿನಗಳಲ್ಲಿ...

ಸಾರ್ವಜನಿಕರ ಅಹವಾಲುಗಳಿಗೆ 15 ದಿನಗಳಲ್ಲಿ ಸ್ಪಂದನೆ: ಮಂಕಾಳ ವೈದ್ಯ

ವಾರ್ತಾಭಾರತಿವಾರ್ತಾಭಾರತಿ14 Nov 2026 8:25 PM IST
share
ಸಾರ್ವಜನಿಕರ ಅಹವಾಲುಗಳಿಗೆ 15 ದಿನಗಳಲ್ಲಿ ಸ್ಪಂದನೆ: ಮಂಕಾಳ ವೈದ್ಯ

ಭಟ್ಕಳ: ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವುದೇ ಪ್ರಜಾ ಸೇವಾ ಆಂದೋಲನದ ಮುಖ್ಯ ಉದ್ದೇಶ. ಸಭೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ, 15 ದಿನಗಳೊಳಗೆ ವಿಲೇವಾರಿ ಮಾಡಬೇಕು ಎಂದು ವಿಧಾನಸಭೆ ಉಪಾಧ್ಯಕ್ಷ ಹಾಗೂ ಭಟ್ಕಳ–ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ಎಸ್. ವೈದ್ಯ ಸೂಚಿಸಿದರು.

ತಾಲ್ಲೂಕಿನ ಬೆಳಕೆ ಹೋಬಳಿಯ ಬೊಮ್ಮನಕೇರಿ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಭಟ್ಕಳ ನಗರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ಸರ್ಕಾರಿ ಕೆಲಸಗಳಿಗಾಗಿ ಜನರು ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅವರ ಆಶಯದಂತೆ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಧ್ಯೇಯವಾಕ್ಯ ದೊಂದಿಗೆ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಂದೋಲನ ನಡೆಸಲಾಗುತ್ತಿದೆ. ಇದು ಕೇವಲ ಔಪಚಾರಿಕ ಕಾರ್ಯಕ್ರಮವಾಗದೆ, ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿರಂತರ ಪ್ರಕ್ರಿಯೆಯಾಗಿದೆ ಎಂದರು.

ಸಭೆಯಲ್ಲಿ ಸಲ್ಲಿಕೆಯಾಗುವ ಪ್ರತಿಯೊಂದು ಅರ್ಜಿಯನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕಾನೂನು ಬದ್ಧವಾಗಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಮನವಿಗಳ ಬಗ್ಗೆ ನಿರ್ಲಕ್ಷ್ಯ ತೋರದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಈ ಮಹತ್ವಾಕಾಂಕ್ಷಿ ಯೋಜನೆಗೆ ಸರ್ಕಾರ ಪ್ರತ್ಯೇಕ ಇಲಾಖೆಯನ್ನೂ ರಚಿಸಿದೆ ಎಂದು ತಿಳಿಸಿದರು.

ಈ ಬಾರಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಬರ ಪರಿಸ್ಥಿತಿ ನಿರ್ವಹಿಸಲು ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕುಡಿಯುವ ನೀರಿನ ನಿರ್ವಹಣೆಗಾಗಿ ಪ್ರತಿ ತಾಲೂಕಿಗೆ 1 ಕೋಟಿ ಬಿಡುಗಡೆ ಮಾಡಲಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಯಾಗದಂತೆ ಮೇವಿನ ಕಿಟ್ ವಿತರಣೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಕುಡಿಯುವ ನೀರು, ರಸ್ತೆ, ಪೌತಿ ಖಾತೆ, ನಿವೇಶನ, ಅರಣ್ಯ ಭೂಮಿ, ವಸತಿ ಸಮಸ್ಯೆ, ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಹಾಗೂ ಸಿಂಧುತ್ವ ಪ್ರಮಾಣಪತ್ರ ನೀಡುವಂತೆ ಸೇರಿದಂತೆ 85ಕ್ಕೂ ಹೆಚ್ಚು ಅಹವಾಲುಗಳನ್ನು ಸ್ವೀಕರಿಸಲಾಯಿತು.

ಮೊಗೇರ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ದೊರೆಯದ ಕಾರಣ ಉದ್ಯೋಗ ಮತ್ತು ಉನ್ನತ ಶಿಕ್ಷಣ ಪಡೆಯಲು ತೊಂದರೆಯಾಗುತ್ತಿದೆ. ಜಿಲ್ಲಾಡಳಿತ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಭಟ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಪರ್ವೇಜ್ ಕಾಶೀಮಜಿ ಅವರು, ತಮ್ಮ ತಾಯಿ ಮೃತಪಟ್ಟ ನಾಲ್ಕೈದು ವರ್ಷಗಳಾದರೂ ವಾರಸುದಾರಿಕೆ ಪ್ರಮಾಣಪತ್ರ ದೊರೆತಿಲ್ಲ. ಈ ಸಂಬಂಧ ತಹಶೀಲ್ದಾರ್ ಕಚೇರಿಗೆ ಹಲವು ಬಾರಿ ಅಲೆದಾಡಿದ್ದರೂ, ಕಂಪ್ಯೂಟರ್‌ನಲ್ಲಿ ದಾಖಲೆ ಸ್ವೀಕರಿಸಲಾಗುತ್ತಿಲ್ಲ ಎಂಬ ಉತ್ತರ ನೀಡಲಾಗುತ್ತಿದೆ. ಪ್ರಮಾಣಪತ್ರ ಯಾವಾಗ ದೊರೆಯಲಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಪ್ರಕರಣ ಅರಣ್ಯ ಭೂಮಿಗೆ ಸಂಬಂಧಿಸಿದ್ದರಿಂದ ವಾರಸುದಾರಿಕೆ ದಾಖಲಾತಿ ಮಾಡಿಕೊಡುವಲ್ಲಿ ತೊಂದರೆ ಎದುರಾಗಿದೆ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಎಸ್‌ಐಟಿಗೆ ಕಳುಹಿಸಲಾಗುವುದು. ಪ್ರಕ್ರಿಯೆಗೆ ಸಮಯ ಬೇಕಾಗುವುದರಿಂದ ಸಹಕರಿಸಬೇಕು ಎಂದು ತಿಳಿಸಿದರು. ಆದಷ್ಟು ಬೇಗ ಪ್ರಮಾಣಪತ್ರ ನೀಡಿದರೆ ಸಾಕು ಎಂದು ಪರ್ವೇಜ್ ಕಾಶೀಮಜಿ ಹೇಳಿದರು.

ಸಭೆಯಲ್ಲಿ ರಸ್ತೆ, ಮನೆ, ಬಾವಿ ಹಾಗೂ ದೇವಸ್ಥಾನಕ್ಕೆ ಜಾಗ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ಅರ್ಜಿ ಸಲ್ಲಿಸಿದರು. ಅಧಿಕಾರಿಗಳು ಅಹವಾಲುಗಳಿಗೆ ಉತ್ತರಿಸಿದರು. ಎಲ್ಲ ಅರ್ಜಿಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡುವಂತೆ ಸೂಚಿಸಲಾಯಿತು.

ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಡಿಸಿಎಫ್ ಯೋಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪವಿಭಾಗಾಧಿಕಾರಿ ಮಹೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನೀಲ್, ಭಟ್ಕಳ ತಹಶೀಲ್ದಾರ್ ಉಷಾ ಎಸ್. ಪಾವಸ್ಕರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಜನಾರ್ದನ ದೇವಾಡಿಗ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾಜು ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X