Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಐಎನ್‌ಎಫ್ ಟ್ರೇಡ್ ಎಕ್ಸ್‌ಪೋ-2025:...

ಐಎನ್‌ಎಫ್ ಟ್ರೇಡ್ ಎಕ್ಸ್‌ಪೋ-2025: ಪೌರಾಡಳಿತ ಸಚಿವ ರಹೀಂ ಖಾನ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 Jan 2025 5:33 PM IST
share
ಐಎನ್‌ಎಫ್ ಟ್ರೇಡ್ ಎಕ್ಸ್‌ಪೋ-2025: ಪೌರಾಡಳಿತ ಸಚಿವ ರಹೀಂ ಖಾನ್ ಚಾಲನೆ

ಭಟ್ಕಳ: ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಇರುವ ಮೈದಾನದಲ್ಲಿ ಆಯೋಜಿಸಿರುವ ಐದು ದಿನಗಳ ಇಂಡಿಯನ್ ನವಾಯತ್ ಫೋರಂ (ಐಎನ್‌ಎಫ್) ಟ್ರೇಡ್ ಎಕ್ಸ್‌ಪೋ-2025 ಅನ್ನು ರಾಜ್ಯ ಪೌರಾಡಳಿತ ಸಚಿವ ರಹೀಂ ಖಾನ್ ಶನಿವಾರ ಉದ್ಘಾಟಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರಹೀಂ ಖಾನ್, “ಕರಾವಳಿ ಪ್ರದೇಶದಲ್ಲಿ ಮುಸ್ಲಿಂ ಸಮುದಾಯವು ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಇಲ್ಲಿನ ಜನರು ಪರಸ್ಪರ ಪ್ರೀತಿ ಮತ್ತು ವಿಶ್ವಾಸದ ಮೂಲಕ ತಮ್ಮನ್ನು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರವಾದಿ ಮುಹಮ್ಮದ್ (ಸ.ಅ) ವ್ಯಾಪಾರಕ್ಕೆ ಮಹತ್ವ ನೀಡಿದ್ದು, ವ್ಯಾಪಾರದಲ್ಲಿ ಮೋಸ ವಂಚನೆ ಮಾಡಬಾರದು ಎಂಬ ಸಂದೇಶವನ್ನು ನೀಡಿದ್ದರು. ಮುಸ್ಲಿಂ ಸಮುದಾಯ ಈ ನಂಬಿಕೆಯನ್ನು ಸದಾ ಪಾಲಿಸಿಕೊಂಡು ಬಂದಿದೆ,” ಎಂದರು.

ಇಂಡಿಯನ್ ನವಾಯತ್ ಫೋರಂ (ಐಎನ್‌ಎಫ್‌ಎ) ಎಂಬುದು ಭಟ್ಕಳದಲ್ಲಿ ಮುಂಚೂಣಿಯ ಸಂಘಟನೆಯಾಗಿ ಉತ್ತಮ ಕೀರ್ತಿ ಗಳಿಸಿದೆ. ಈ ರೀತಿಯ ಸಂಘಟನೆಗಳು ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಇಲ್ಲದಿರುವುದರಿಂದ, ಅಲ್ಪ ಸಂಖ್ಯಾತರ ವ್ಯಾಪಾರ, ಶಿಕ್ಷಣ ಮತ್ತು ಇತರ ಆರ್ಥಿಕ ಚಟುವಟಿಕೆಗಳಲ್ಲಿ ಪ್ರಗತಿಗೆ ಸಾಕಷ್ಟು ಅವಕಾಶಗಳು ಸಿಕ್ಕಿಲ್ಲ. ಇಲ್ಲಿನ ಸಂಘಟನೆಗಳು ಹಾಗೂ ಒಗ್ಗಟ್ಟು, ಇಲ್ಲಿನ ಜನರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ಇರಲು ಸಹಾಯ ಮಾಡುತ್ತಿವೆ.

INF TRADE EXPO-2025 ಎಂಬ ಕಾರ್ಯಕ್ರಮವು ವ್ಯಾಪಾರ ಮತ್ತು ಉದ್ಯಮ ಆರಂಭಿಸಲು ಅಗತ್ಯವಾದ ಮಾರ್ಗದರ್ಶನ ಹಾಗೂ ತರಬೇತಿಗಳನ್ನು ನೀಡುವ ಒಂದು ಉತ್ತಮ ವೇದಿಕೆಯಾಗಿದೆ. "ಎಲ್ಲವೂ ಸರ್ಕಾರವೇ ಮಾಡಬೇಕೆಂದರೆ ಸಾಧ್ಯವಿಲ್ಲ. ಈ ರೀತಿಯ ಕಾರ್ಯಕ್ರಮಗಳು ಸ್ವಯಂ ಸಂಘಟನೆಗಳಿಂದ ಆಯೋಜನೆಯಾಗುವು ದರಿಂದ ಜನತೆಗೆ ವ್ಯಾಪಾರ, ಉದ್ಯಮ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಲಭ್ಯವಾಗುತ್ತವೆ," ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.

ಸಮಾರಂಭದ ಬಳಿಕ, ಸಚಿವರು ಟ್ರೇಡ್ ಎಕ್ಸ್‌ಪೋ-2025 ನಲ್ಲಿರುವ ವಿವಿಧ ವ್ಯಾಪಾರ ಮಳಿಗೆಗಳನ್ನು ವೀಕ್ಷಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ, “ಭಟ್ಕಳದಲ್ಲಿ ಆಯೋಜನೆಯಾದ ಈ ರೀತಿಯ ಕಾರ್ಯಕ್ರಮವು ಎಲ್ಲಾ ಜನಾಂಗದವರಿಗೂ ಉಪಯುಕ್ತವಾಗಿದೆ. ಇಂತಹ ಕಾರ್ಯಕ್ರಮಗಳ ಅನುಭವಕ್ಕಾಗಿ ನಾವು ಮೊದಲು ಬೆಂಗಳೂರು ಅಥವಾ ಡೆಲ್ಲಿಗೆ ತೆರಳಬೇಕಾಗುತ್ತಿತ್ತು. ಆದರೆ ಭಟ್ಕಳದಲ್ಲೇ ಇದು ಆಯೋಜನೆಗೊಂಡಿರುವುದಕ್ಕೆ ಇಂಡಿಯನ್ ನವಾಯತ್ ಫೋರಂಗೆ ಅಭಿನಂದನೆಗಳು. ಇದರ ಪ್ರಯೋಜನವನ್ನು ಭಟ್ಕಳದ ಜನರು ಪಡೆದುಕೊಳ್ಳಲಿ," ಎಂದರು.

ಐಎನ್‌ಎಫ್ ಅಧ್ಯಕ್ಷ ಎಸ್.ಎಂ. ಅರ್ಷದ್ ಮೊಹತೆಶಮ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಜ.11 ರಿಂದ 15ವರೆಗೆ ಐದು ದಿನಗಳ ಕಾರ್ಯಕ್ರಮದಲ್ಲಿ ವ್ಯಾಪಾರ ಹಾಗೂ ಉದ್ಯಮಕ್ಕೆ ಸಂಬಂಧಿಸಿದಂತೆ, ಪ್ಯಾಕೇಜಿಂಗ್, ಸಂಸ್ಕರಣೆ, ತೆರಿಗೆ ವ್ಯವಸ್ಥೆ, ಮತ್ತು ಇತರ ಹಂತಗಳಿಗೆ ಸಂಬಂಧಿಸಿದ ಮಾಹಿತಿಯ ಕಾರ್ಯಾಗಾರಗಳು ಮತ್ತು ಸೆಮಿನಾರ್‌ಗಳು ಆಯೋಜನೆಗೊಂಡಿವೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಿನ್ಸಿಪಲ್ ಕಾರ್ಯದರ್ಶಿ ಮುಹಮ್ಮದ್ ಮೊಹಸಿನ್, ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಯೂನೂಸ್ ಕಾಝಿಯಾ, ಮರ್ಕಝಿ ಖಲೀಫಾ ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಕಾಝಿ ಮೌಲಾನಾ ಕ್ವಾಜಾ ಮೊಈನುದ್ದೀನ್ ಅಕ್ರಮಿ ಮದನಿ, ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಕಾಝಿ ಮೌಲಾನಾ ಅಬ್ದುಲ್ ರಬ್ ನದ್ವಿ, ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಮಾಜ್ ಜುಕಾಕೋ, ಮುಹಮ್ಮದ್ ನೋಮಾನ್ ಪಟೇಲ್, ಸೈಯ್ಯದ್ ಗುಫ್ರಾನ್ ಲಂಕಾ, ಅಬ್ದುಲ್ ಮುಈನ್ ಕಾಡ್ಲಿ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಎಕ್ಸ್‌ಪೋನ ಭಾಗವಾಗಿ, ಭಾರತದಲ್ಲಿ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆಗಳ ಅವಕಾಶಗಳು, ಹ್ಯಾಂಗ್ಯೊ ಯಶಸ್ಸಿನ ಕಥೆ, ಹಣಕಾಸು ಮತ್ತು ಹೂಡಿಕೆಗಳ ನಿರ್ವಹಣೆ, ಮತ್ತು ಹಲಾಲ್ ಉದ್ಯಮದ ಆರಂಭ ಕುರಿತಾದ ಪ್ರಸ್ತುತಿಗಳು ಮತ್ತು ಸೆಮಿನಾರ್‌ಗಳನ್ನು ಆಯೋಜಿಸಲಾಗಿದೆ.

ಐಎನ್‌ಎಫ್ ಟ್ರೇಡ್ ಎಕ್ಸ್‌ಪೋ-2025 ಜನವರಿ 15 ರವರೆಗೆ ನಡೆಯಲಿದೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X