ಭಟ್ಕಳ: ಲಾರಿ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

ಭಟ್ಕಳ: ತೆಂಗಿನಗುಂಡಿ ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಮೃತನನ್ನು ಭಟ್ಕಳದ ಫಿರ್ದೌಸ್ ನಗರ ನಿವಾಸಿ ಮುಹಮ್ಮದ್ ಮೊಹತೆಶಮ್ (18) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಪ್ಲೈವುಡ್ ತುಂಬಿಕೊಂಡು ಕೇರಳದಿಂದ ಮುಂಬೈ ಕಡೆಗೆ ತೆರಳುತ್ತಿದ್ದ ಲಾರಿಗೆ, ತೆಂಗಿನಗುಂಡಿ ಕ್ರಾಸ್‌ನಿಂದ ಅಕಸ್ಮಾತ್ ಹೆದ್ದಾರಿಗೆ ಪ್ರವೇಶಿಸಿದ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಮೊಹತೆಶಮ್ ಇಲ್ಲಿನ ಅಲಿ ಪಬ್ಲಿಕ್ ಕಾಲೇಜಿನಲ್ಲಿ ದ್ವಿತಿಯ ಪಿಯುಸಿಯಲ್ಲಿ ಅಧ್ಯಯನ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ಜನಸಂದಣಿ ಹೆಚ್ಚಾಗಿದ್ದು, ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.
ಈ ಕುರಿತು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story





