Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ...

ಭಟ್ಕಳ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ; ಜೂನ್ 30ರಿಂದ ಮನೆ ಮನೆಗೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ25 Jun 2026 9:19 PM IST
share
ಭಟ್ಕಳ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ; ಜೂನ್ 30ರಿಂದ ಮನೆ ಮನೆಗೆ ಭೇಟಿ

ಭಟ್ಕಳ: ಭಾರತ ಚುನಾವಣಾ ಆಯೋಗದ ಆದೇಶದಂತೆ 2026ರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮವನ್ನು ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 20ರಿಂದ ಅ.7ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಜೂನ್ 20ರಿಂದ 29ರವರೆಗೆ ಪೂರ್ವ ಸಿದ್ಧತೆ, ತರಬೇತಿ ಹಾಗೂ ಮುದ್ರಣ ಕಾರ್ಯ ಗಳು ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸಲಿದ್ದಾರೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆ ಹಾಗೂ ಹಕ್ಕು ದಾವೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾ ಗಿದೆ. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಮತದಾರ ನೋಂದಣಾಧಿಕಾರಿ, ಇಬ್ಬರು ಸಹಾಯಕ ಮತದಾರ ನೋಂದಣಾಧಿಕಾರಿಗಳು ಹಾಗೂ 252 ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ 25 ಬಿಎಲ್‌ಒಗಳಿಗೆ ಒಬ್ಬರಂತೆ ಮೇಲ್ವಿಚಾರಕರನ್ನೂ ನಿಯೋಜಿಸಲಾಗಿದೆ.

ಪ್ರಸ್ತುತ ಕ್ಷೇತ್ರದಲ್ಲಿ ಒಟ್ಟು 2,31,778 ಮತದಾರರಿದ್ದು, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವು ಪ್ರಗತಿಯಲ್ಲಿದೆ. ಕ್ಷೇತ್ರದಲ್ಲಿ 94.90 ಶೇಕಡಾ ಮತದಾರರು ಈಗಾಗಲೇ ಗಣತಿಯಲ್ಲಿ ಸೇರಿದ್ದಾರೆ. ಒಟ್ಟು 1,41,947 ಪುರುಷ ಮತದಾರರು ಹಾಗೂ 1,32,719 ಮಹಿಳಾ ಮತದಾರರು ಇದ್ದಾರೆ. ಇವರಲ್ಲಿ 89,831 ಪುರುಷರು ಹಾಗೂ 87,230 ಮಹಿಳೆಯರು ಗಣತಿಯಲ್ಲಿ ಸೇರಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಬಿಎಲ್‌ಒಗಳು ಮತದಾರರಿಗೆ ಗಣತಿ ಅರ್ಜಿಗಳನ್ನು ವಿತರಿಸಲಿದ್ದಾರೆ. ಮತದಾರರು ಅರ್ಜಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಬಿಎಲ್‌ಒಗಳಿಗೆ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಬಿಎಲ್‌ಒಗಳು ಅಥವಾ ಮತದಾರರ ಸಹಾಯವಾಣಿ ಕೇಂದ್ರಗಳಲ್ಲಿ ನೀಡಬಹುದಾಗಿದೆ.

ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂನ್ 30ರಿಂದ ಜುಲೈ 29ರವರೆಗೆ ಮನೆಗಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ತಹಶೀಲ್ದಾರ್ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮಕ್ಕೆ ಸಕ್ರಿಯ ಸಹಕಾರ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X