Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಎಸ್‌ಐಆರ್: ಭಟ್ಕಳದಲ್ಲಿ ಮತದಾರರ ಹೆಸರು...

ಎಸ್‌ಐಆರ್: ಭಟ್ಕಳದಲ್ಲಿ ಮತದಾರರ ಹೆಸರು ಅಳಿಸಲು ಫಾರಂ-7 ಸಲ್ಲಿಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ5 Oct 2026 11:07 PM IST
share
ಎಸ್‌ಐಆರ್: ಭಟ್ಕಳದಲ್ಲಿ ಮತದಾರರ ಹೆಸರು ಅಳಿಸಲು ಫಾರಂ-7 ಸಲ್ಲಿಕೆ ಆರೋಪ

ಭಟ್ಕಳ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸುವುದಕ್ಕೆ ಬಳಸುವ ಫಾರಂ-7ರ ದುರ್ಬಳಕೆಯ ಆರೋಪಗಳು ಭಟ್ಕಳದಲ್ಲೂ ಕೇಳಿಬಂದಿವೆ.

ಭಟ್ಕಳ ಹಾಗೂ ಮುರ್ಡೇಶ್ವರ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು, ಅದರಲ್ಲೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವಂತೆ ಕೋರಿ ಫಾರಂ-7 ಅರ್ಜಿಗಳನ್ನು ಸಲ್ಲಿಸಲು ಕೆಲವರು ಮುಂದಾಗಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಮುರ್ಡೇಶ್ವರದ ರಾಜಕೀಯ ಪಕ್ಷವೊಂದರ ಪದಾಧಿಕಾರಿಯೊಬ್ಬರು ತಮ್ಮ ಹೆಸರಿನಲ್ಲೇ ಫಾರಂ-7 ಅರ್ಜಿ ಸಲ್ಲಿಸಿ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 245 ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವಂತೆ ಕೋರಿದ್ದರು ಎನ್ನಲಾಗಿದೆ. ಆದರೆ, ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಎಸ್‌ಐಆರ್ ಅಧಿಕಾರಿಗಳು ಅರ್ಜಿಯನ್ನು ಸ್ವೀಕರಿಸಿಲ್ಲ ಎಂದು ತಿಳಿದುಬಂದಿದೆ.

ಇದೇ ರೀತಿ ಭಟ್ಕಳದ ಕೆಲವು ಮತಗಟ್ಟೆಗಳಿಗೆ ಅಪರಿಚಿತ ವ್ಯಕ್ತಿಗಳು ನೂರಾರು ಫಾರಂ-7 ಅರ್ಜಿಗಳನ್ನು ತಂದಿದ್ದರು ಎನ್ನಲಾಗಿದೆ. ಒಬ್ಬ ವ್ಯಕ್ತಿಯೇ ಇಷ್ಟೊಂದು ಸಂಖ್ಯೆಯ ಅರ್ಜಿಗಳನ್ನು ಸಲ್ಲಿಸಲು ಮುಂದಾಗಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಮೂಡಿದ್ದು, ಅರ್ಜಿಗಳನ್ನು ಅಧಿಕೃತವಾಗಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗಳು ಭಟ್ಕಳದಲ್ಲಿ ಚರ್ಚೆಗೆ ಕಾರಣವಾಗಿದ್ದು, ಇಂತಹ ಅರ್ಜಿಗಳ ಹಿಂದೆ ಯಾರಿದ್ದಾರೆ ಮತ್ತು ಅವುಗಳ ಉದ್ದೇಶವೇನು ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಇತರ ಪ್ರದೇಶಗಳಲ್ಲಿ ಕೇಳಿಬಂದಿರುವ ಆರೋಪಗಳಂತೆ ಅಲ್ಪಸಂಖ್ಯಾತ ಹಾಗೂ ಮುಸ್ಲಿಂ ಮತದಾರರ ಹೆಸರುಗಳನ್ನು ರಾಜಕೀಯ ಉದ್ದೇಶದಿಂದ ಅಳಿಸುವ ಪ್ರಯತ್ನ ನಡೆದಿದೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ನೋಟಿಸ್‌ಗೂ ಮುನ್ನವೇ ಮತ್ತೊಂದು ಅರ್ಜಿ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರೊಬ್ಬರ ಹೆಸರು ಪಟ್ಟಿಯಿಂದ ತೆಗೆದುಹಾಕಿದ ಬಳಿಕ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಆ ಮತದಾರರು ವಿಚಾರಣೆಗೆ ಹಾಜರಾಗುವ ಮುನ್ನವೇ ಭಟ್ಕಳ ಮೂಲದ ರಾಜಕಾರಣಿಯೊಬ್ಬರು ಫಾರಂ-7 ಸಲ್ಲಿಸಿ ಅದೇ ಮತದಾರರ ಹೆಸರನ್ನು ಅಳಿಸುವಂತೆ ಕೋರಿದ್ದಾರೆ ಎನ್ನುವ ಮತ್ತೊಂದು ಆರೋಪವೂ ಬೆಳಕಿಗೆ ಬಂದಿದೆ.

ಭಟ್ಕಳದಲ್ಲಿ 87 ಅರ್ಜಿ ಅಧಿಕೃತ ನೋಂದಣಿ: ಈ ಕುರಿತು ಭಟ್ಕಳ ಸಹಾಯಕ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ಮಹೇಶ್ ಅವರನ್ನು ವಿಚಾರಿಸಿದಾಗ, ಫಾರಂ-7 ಅರ್ಜಿಗಳನ್ನು ಸ್ವೀಕರಿಸುವ ಸಂದರ್ಭದಲ್ಲಿ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ನಿಯಮ ಉಲ್ಲಂಘನೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

ಭಟ್ಕಳದಲ್ಲಿ ಎಷ್ಟು ಫಾರಂ-7 ಅರ್ಜಿಗಳು ಬಂದಿವೆ ಎಂಬ ಪ್ರಶ್ನೆಗೆ, ಅಧಿಕೃತವಾಗಿ ನೋಂದಣಿಯಾದ ಅರ್ಜಿಗಳ ಮಾಹಿತಿಯನ್ನು ಮಾತ್ರ ನೀಡಲು ಸಾಧ್ಯ ಎಂದು ಅವರು ಹೇಳಿದರು.

ಅವರ ಪ್ರಕಾರ, ಭಟ್ಕಳ ತಾಲ್ಲೂಕಿನಲ್ಲಿ ಒಟ್ಟು 87 ಫಾರಂ-7 ಅರ್ಜಿಗಳು ಅಧಿಕೃತವಾಗಿ ಸ್ವೀಕರಿಸಿ ನೋಂದಾಯಿಸ ಲಾಗಿದ್ದು, ಈ ಪೈಕಿ 84 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಉಳಿದ ಮೂರು ಅರ್ಜಿಗಳ ಕುರಿತು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಅಕ್ಟೋಬರ್ 27ರಂದು ಪ್ರಕಟವಾಗಲಿರುವ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಫಾರಂ-7 ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನವಾಗಿತ್ತು. ಆದರೆ ನಂತರ ಪ್ರಕಟವಾಗುವ ಮತದಾರರ ಪಟ್ಟಿಯಲ್ಲಿನ ಹೆಸರುಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಫಾರಂ-7 ಮೂಲಕ ಅವಕಾಶ ಮುಂದುವರಿಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X