Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳದ AITM ಕೋಡ್‌ಫೆಸ್ಟ್ 2025;...

ಭಟ್ಕಳದ AITM ಕೋಡ್‌ಫೆಸ್ಟ್ 2025; ರಾಷ್ಟ್ರೀಯ ಹ್ಯಾಕಥಾನ್

ವಾರ್ತಾಭಾರತಿವಾರ್ತಾಭಾರತಿ14 April 2025 7:50 PM IST
share
ಭಟ್ಕಳದ AITM ಕೋಡ್‌ಫೆಸ್ಟ್ 2025; ರಾಷ್ಟ್ರೀಯ ಹ್ಯಾಕಥಾನ್

ಭಟ್ಕಳ: ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ (AITM), ಭಟ್ಕಳದಲ್ಲಿ ಆಯೋಜಿಸಲಾದ 24 ಗಂಟೆಗಳ ರಾಷ್ಟ್ರೀಯ ಮಟ್ಟದ AITM ಕೋಡ್‌ಫೆಸ್ಟ್ 2025 ಹ್ಯಾಕಥಾನ್, ನಾವೀನ್ಯತೆ, ಸೃಜನಶೀಲತೆ ಮತ್ತು ತಾಂತ್ರಿಕ ಕೌಶಲ್ಯದ ಅದ್ಭುತ ಪ್ರದರ್ಶನದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು. ದೇಶಾದ್ಯಂತದ 30 ತಂಡಗಳು ಭಾಗವಹಿಸಿದ್ದವು.

ಸಮಾರೋಪ ಸಮಾರಂಭದಲ್ಲಿ AITMನ ಪ್ರಾಂಶುಪಾಲ ಡಾ. ಕೆ. ಫಝ್ಲುರ್ ರೆಹಮಾನ್ ವಿಜೇತರನ್ನು ಘೋಷಿಸಿದರು. 2 ಲಕ್ಷ ರೂ. ಮೌಲ್ಯದ ಬಹುಮಾನಗಳನ್ನು ವಿತರಿಸಲಾಯಿತು. ಮೊದಲ ಬಹುಮಾನ 60 ಸಾವಿರ ವನ್ನು ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರಿನ ಕ್ರ್ಯಾಶ್‌ಮ್ಯಾಕ್ಸ್ ತಂಡದ ಅಬುಲ್ ಖೈರ್ ಪಡೆದರು. ದ್ವಿತೀಯ ಬಹುಮಾನ 30ಸಾವಿರ ವನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್, ಮೈಸೂರಿನ ಸೈಫರ್ನೋವಾ ತಂಡದ ಹೇಮಂತ್ ಸಿ.ಎಸ್. ಮತ್ತು ಮೊಹಮ್ಮದ್ ಕಮ್ರಾನ್ ಗಳಿಸಿದರು. ತೃತೀಯ ಬಹುಮಾನ 15ಸಾವಿರ ಜಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದಾವಣಗೆರೆಯ ಹಸ್ಲರ್ಸ್.ದೇವ್ ತಂಡದ ಅಹಮದ್ ಅಲಿ ಝಡ್, ಸೈಯದ್ ಇಯಾನುಲ್ಲಾ ಮತ್ತು ಎಸ್. ತೇಜಸ್ ಪಡೆದರು. ಇದರ ಜೊತೆಗೆ, ಟಾಪ್ 10 ತಂಡಗಳಿಗೆ ವಿಶೇಷ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.

ತೀರ್ಪುಗಾರರಾಗಿ AITMನ ಹಳೆಯ ವಿದ್ಯಾರ್ಥಿಗಳು, ನೀವಿಯಸ್ ಸೊಲ್ಯೂಷನ್ಸ್ ಸಂಸ್ಥಾಪಕ ಮೊಹ್ಸಿನ್ ಖಾನ್, ಎಮರ್ಟೆಕ್ಸ್ ಇನ್ಫಾರ್ಮೇಷನ್ ಟೆಕ್ನಾಲಜೀಸ್‌ನ ತಂತ್ರಜ್ಞಾನ ಮುಖ್ಯಸ್ಥ ಮುಬೀನ್ ಜುಕಾಕು, ವಿನ್‌ಟೀಮ್ ಗ್ಲೋಬಲ್ ಸಂಸ್ಥಾಪಕ ವಸೀಮ್ ಅಹ್ಮದ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಜೆ. ಅನ್ವರ್ ಶಾಥಿಕ್ ಮತ್ತು ಪ್ರಾಧ್ಯಾಪಕ ಡಾ. ಡೇನಿಯಲ್ ಫ್ರಾನ್ಸಿಸ್ ಕಾರ್ಯನಿರ್ವಹಿಸಿದರು.

ರಿಜಿಸ್ಟ್ರಾರ್ ಪ್ರೊ. ಝಾಹಿದ್ ಖರುರಿ ಸ್ವಾಗತಿಸಿದರು. AITMನ ಕಾರ್ಯದರ್ಶಿ ಮೊಹಿದ್ದೀನ್ ರುಕ್ನದ್ದೀನ್ ಕಾರ್ಯಕ್ರಮದ ಯಶಸ್ಸಿಗೆ ಸಂತೋಷ ವ್ಯಕ್ತಪಡಿಸಿ, ಸಂಘಟಕರ ಪ್ರಯತ್ನವನ್ನು ಶ್ಲಾಘಿಸಿದರು. ಸಂಯೋಜಕ ಫಾರ್ಖಲಿತ್ ರಿದಾ ಮಾನ್ವಿ ಧನ್ಯವಾದ ಸಮರ್ಪಿಸಿದರು.

AITM ಕೋಡ್‌ಫೆಸ್ಟ್ 2025 ಯುವ ತಂತ್ರಜ್ಞರಿಗೆ ಕೌಶಲ್ಯ ಪ್ರದರ್ಶನ, ಉದ್ಯಮ ತಜ್ಞರಿಂದ ಮಾರ್ಗ ದರ್ಶನ ಮತ್ತು ಸಹಕಾರದ ನಾವೀನ್ಯತೆಗೆ ಒಂದು ಅತ್ಯುತ್ತಮ ವೇದಿಕೆಯಾಗಿ ಗುರುತಿಸಲ್ಪಟ್ಟಿತು.

ಶೀರ್ಷಿಕೆ ಪಾಲುದಾರರಾಗಿ ನಿವಿಯಸ್ ಸೊಲ್ಯೂಷನ್ಸ್, ಸಂಘಟನಾ ಪಾಲುದಾರರಾಗಿ ಡಿಜಿಸ್ಕ್ರಿಪ್ಟ್ ಟೆಕ್ನಾಲಜೀಸ್, ಸಹ ಪಾಲುದಾರರಾಗಿ ಮೊಹ್ತಿಶಮ್ ಬಿಲ್ಡರ್ಸ್, ಸ್ಪ್ರೌಟ್‌ಎಕ್ಸ್‌ಪಿ, ಐಟೆಕ್ಸ್ ಸೊಲ್ಯೂಷನ್ಸ್, ಎಮರ್ಟ್‌ಕ್ಸ್ ಟೆಕ್ನಾಲಜೀಸ್, ತಹೂರ ಮತ್ತು ವಿನ್‌ಟೀಮ್ ಗ್ಲೋಬಲ್ ಕಾರ್ಯಕ್ರಮಕ್ಕೆ ಬೆಂಬಲ ನೀಡಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X