Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಜೂ.15ರೊಳಗೆ ಮತದಾರರ ಮ್ಯಾಪಿಂಗ್...

ಜೂ.15ರೊಳಗೆ ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಳಿಸಿ: ತಂಝೀಮ್ ಮನವಿ

ವಾರ್ತಾಭಾರತಿವಾರ್ತಾಭಾರತಿ13 Jun 2026 8:03 PM IST
share
ಜೂ.15ರೊಳಗೆ ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಳಿಸಿ: ತಂಝೀಮ್ ಮನವಿ

ಭಟ್ಕಳ: ಮತದಾರರ ಪಟ್ಟಿಯಲ್ಲಿನ ವಿವರಗಳನ್ನು ನವೀಕರಿಸಲು ಹಾಗೂ ಯಾವುದೇ ತೊಂದರೆಗಳನ್ನು ತಪ್ಪಿಸಲು ಎಲ್ಲ ಅರ್ಹ ಮತದಾರರು ಜೂನ್ 15ರೊಳಗೆ ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಮಜ್ಲಿಸ್-ಎ-ಇಸ್ಲಾಹ್ ವ ತಂಝೀಮ್ ಮನವಿ ಮಾಡಿದೆ.

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಭಾರತೀಯ ಚುನಾವಣಾ ಆಯೋಗ ಕೈಗೊಂಡಿದ್ದು, ದತ್ತಾಂಶ ಸಂಗ್ರಹ ಮತ್ತು ಪರಿಶೀಲನೆಗಾಗಿ ಡಿಜಿಟಲ್ ಮತದಾರರ ಪಟ್ಟಿ (ಇ-ರೋಲ್)ಯನ್ನು ಜೂನ್ 16ರಂದು ಸ್ಥಗಿತಗೊಳಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯಿಂದ ಪ್ರಸ್ತುತ ಮತದಾರರ ದಾಖಲೆಗಳನ್ನು ಹಿಂದಿನ ಮತದಾರರ ಪಟ್ಟಿ ಯೊಂದಿಗೆ ಜೋಡಿಸಲು ಸಾಧ್ಯವಾಗಲಿದ್ದು, ನಕಲಿ ನೋಂದಣಿ, ಸ್ಥಳಾಂತರಗೊಂಡಿರುವ ಅಥವಾ ತಪ್ಪಾಗಿ ದಾಖಲಾಗಿರುವ ಮತದಾರರ ವಿವರಗಳನ್ನು ಗುರುತಿಸಿ ಸರಿಪಡಿಸಲು ಅನುಕೂಲವಾಗಲಿದೆ ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ತಂಝೀಮ್ ವತಿಯಿಂದ ಮೂರು ದಿನಗಳ ‘ಮತದಾರರ ಸಹಾಯ ಶಿಬಿರ’ವನ್ನು ಆಯೋಜಿಸಲಾಗಿದೆ.

ಜೂನ್ 14, 15 ಮತ್ತು 16ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 3.30ರವರೆಗೆ ನವಾಯತ್ ಕಾಲೊನಿಯ ರಾಬಿತಾ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ.

ಶಿಬಿರದಲ್ಲಿ ಮತದಾರರ ಗುರುತಿನ ಚೀಟಿಯಲ್ಲಿನ ತಿದ್ದುಪಡಿ, ಹೊಸ ಮತದಾರರ ನೋಂದಣಿ ಹಾಗೂ ಮತದಾರರ ಮ್ಯಾಪಿಂಗ್ ಕುರಿತ ಮಾಹಿತಿ ಮತ್ತು ನೆರವು ಒದಗಿಸಲಾಗುವುದು. ಹೊಸ ಮತದಾರರ ನೋಂದಣಿಗಾಗಿ ಆಧಾರ್ ಕಾರ್ಡ್, ಜನನ ಪ್ರಮಾಣಪತ್ರ ಅಥವಾ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಹಾಗೂ ಸಂಬಂಧಿಕರ ಮತದಾರರ ಗುರುತಿನ ಚೀಟಿ ಸಲ್ಲಿಸಬೇಕಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿಯಂತೆ ಜೂನ್ 15 ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಳಿಸಲು ಕೊನೆಯ ದಿನವಾಗಿದ್ದು, ಜೂನ್ 30ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ (ಬಿಎಲ್‌ಒ) ಮನೆ ಮನೆಗೆ ತೆರಳಿ ಪರಿಶೀಲನೆ ಆರಂಭವಾಗಲಿದೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ.

ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತದಾರರಿಗೆ ಸಂಬಂಧಿಸಿದ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ತಂಝೀಮ್ ಪ್ರಕಟಣೆಯಲ್ಲಿ ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X