ಸೆ.27ರಂದು ಮುಟ್ಟಳ್ಳಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಭಟ್ಕಳ: ಶ್ರೀ ಕಟ್ಟೆವೀರ ಯುವಶಕ್ತಿ ಸಂಘ (ರಿ.) ಮುಟ್ಟಳ್ಳಿ, ಕ್ರಿಯೇಟಿವ್ ಫ್ರೆಂಡ್ಸ್ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ (ರಿ.) ಭಟ್ಕಳ, ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸೆ.27ರಂದು ಮುಟ್ಟಳ್ಳಿಯಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಮುಟ್ಟಳ್ಳಿ ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ನಡೆಯಲಿದೆ.
ಮುಟ್ಟಳ್ಳಿಯ ನಿವೃತ್ತ ಶಿಕ್ಷಕ ಹಾಗೂ ಹಿರಿಯ ಮುಖಂಡ ಎಂ.ಕೆ. ನಾಯ್ಕ ಶಿಬಿರ ಉದ್ಘಾಟಿಸಲಿದ್ದು, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಜನರಲ್ ಸರ್ಜನ್ ಡಾ. ಅರುಣಕುಮಾರ್ ಎನ್.ಎ. ಅಧ್ಯಕ್ಷತೆ ವಹಿಸಲಿದ್ದಾರೆ.
ಕಟ್ಟೆವೀರ ಯುವಶಕ್ತಿ ಸಂಘದ ಅಧ್ಯಕ್ಷ ಚಂದ್ರು ಕುಪ್ಪಯ್ಯ ನಾಯ್ಕ, ಕ್ರಿಯೇಟಿವ್ ಫ್ರೆಂಡ್ಸ್ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಹೇಶ ನರಸಿಂಹ ನಾಯ್ಕ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ತಾಲೂಕು ಸಾರ್ವಜನಿಕ ಆಸ್ಪತ್ರೆಯ ಫಿಜಿಷಿಯನ್ ಡಾ. ಪ್ರಕಾಶ ವಿ. ನಾಯ್ಕ, ಸಾವಿತ್ರಿ ಸ್ಪೆಷಾಲಿಟಿ ಡೆಂಟಲ್ ಕೇರ್‌ನ ದಂತ ವೈದ್ಯ ಡಾ. ರವಿ ನಾಯ್ಕ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜೀವ ಉಳಿಸುವ ಮಹತ್ವದ ಕಾರ್ಯವಾದ ರಕ್ತದಾನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.






