Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮಾ.30, 31ರಂದು ಭಟ್ಕಳದ ತಂಝೀಮ್ ವತಿಯಿಂದ...

ಮಾ.30, 31ರಂದು ಭಟ್ಕಳದ ತಂಝೀಮ್ ವತಿಯಿಂದ ಮೆಗಾ ವೋಟರ್ ಐಡಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ26 March 2024 6:43 PM IST
share
ಮಾ.30, 31ರಂದು ಭಟ್ಕಳದ ತಂಝೀಮ್ ವತಿಯಿಂದ ಮೆಗಾ ವೋಟರ್ ಐಡಿ ಶಿಬಿರ

ಭಟ್ಕಳ: ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ಸಾಮಾಜಿಕ ರಾಜಕೀಯ ಸಂಘಟನೆಯಾದ ಮಜ್ಲಿಸ್ ಇ ಇಸ್ಲಾಹ್ ವ ತಂಝೀಮ್ (ಎಂಐಟಿ) ಮಾರ್ಚ್ 30 ಮತ್ತು 31 ರಂದು ಭಟ್ಕಳದ ನಾಲ್ಕು ವಿವಿಧ ಸ್ಥಳಗಳಲ್ಲಿ ಮತದಾರರ ಗುರುತಿನ ಚೀಟಿ ಮೆಗಾ ಶಿಬಿರವನ್ನು ಏಕಕಾಲದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ಹಾಗೂ ವಿವಿಧ ಕ್ರೀಡಾ ಕೇಂದ್ರಗಳ ಸಹಯೋಗದಲ್ಲಿ ತೆಂಗನಗುಂಡಿಯ ಸೈಯದಿನಾ ಇಬ್ರಾಹಿಂ ಮಸೀದಿ, ನವಾಯತ್ ಕಾಲೋನಿಯ ಖುಷ್-ಹಲ್ ಶಾದಿ ಹಾಲ್, ಬಂದರ್ ರಸ್ತೆಯ ಅಲ್-ಅಫರಾ ಶಾದಿ ಹಾಲ್ ಹಾಗೂ ತಂಝೀಮ್ ಸಂಸ್ಘೆಯ ಸಭಾಂಗಣದಲ್ಲಿ ಮೆಗಾ ಶಿಬಿರ ನಡೆಯಲಿದೆ.

ಜಾಲಿ ಪಟ್ಟಣ ಪಂಚಾಯತ್ ಮತ್ತು ಹೆಬಳೆ ಗ್ರಾಮಪಂಚಾಯತ್ ವ್ಯಾಪ್ತಿ ಸೇರಿದಂತೆ ಭಟ್ಕಳ ಪುರಸಭಾ ವ್ಯಾಪ್ತಿಯ ನಿವಾಸಿಗಳಿಗಾಗಿ ಈ ಶಿಬಿರ ಆಯೋಜಿಸಲಾಗಿದೆ. ವೋಟರ್ ಐಡಿ ಮೆಗಾ ಕ್ಯಾಂಪ್ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕಾರ್ಯ ನಿರ್ವಹಿಸಲಿದೆ.

ಮಾರ್ಚ್ 31, 2024 ರ ಮೊದಲು 18 ವರ್ಷ ತುಂಬಿದ ವ್ಯಕ್ತಿಗಳು, ಚುನಾವಣಾ ಪಟ್ಟಿಯಲ್ಲಿ ಸೇರಿಸಲು ಮುಂಗಡ ಅರ್ಜಿಗಳನ್ನು ಸಲ್ಲಿಸಬಹುದು. ಇದಲ್ಲದೆ, ಮತದಾರರ ಪಟ್ಟಿಗೆ ವಿವರಗಳನ್ನು ಅಪ್‌ಲೋಡ್ ಮಾಡಲಾಗಿದ್ದರೂ ತಮ್ಮ ಮತದಾರರ ಗುರುತಿನ ಚೀಟಿಯನ್ನು ಸ್ವೀಕರಿಸದ ವ್ಯಕ್ತಿಗಳು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾದ 12 ಸರ್ಕಾರಿ ಪ್ರಮಾಣೀಕೃತ ಗುರುತಿನ ಪುರಾವೆಗಳಲ್ಲಿ ಯಾವುದಾದರೂ ಒಂದನ್ನು ಪ್ರಸ್ತುತಪಡಿಸುವ ಮೂಲಕ ತಮ್ಮ ಮತವನ್ನು ಚಲಾಯಿಸಬಹುದು.

ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಉದ್ದೇಶಿಸಿರುವ ಅಭ್ಯರ್ಥಿಗಳು ಮೂರು ದಾಖಲೆಗಳ ಮೂಲ ಮತ್ತು ಜೆರಾಕ್ಸ್ ಪ್ರತಿಗಳನ್ನು - ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ವಯಸ್ಸಿನ ಪುರಾವೆ - ಜೊತೆಗೆ ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರದೊಂದಿಗೆ ಶಿಬಿರಕ್ಕೆ ತರುವುದು ಅವಶ್ಯಕ.

ಭಟ್ಕಳ ಹಾಗೂ ಅಕ್ಕಪಕ್ಕದ ಪ್ರದೇಶಗಳಾದ ಮುರ್ಡೇಶ್ವರ, ಮಂಕಿ, ವಲ್ಕಿ, ಗೇರ್ಸುಪ್ಪ, ಹೊನ್ನಾವರ ಮುಂತಾದ ಕಡೆಯ ನಿವಾಸಿಗಳು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಎಂಐಟಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಕೀಬ್ ಎಂ.ಜೆ.ನದ್ವಿ ಕೋರಿದ್ದಾರೆ. ಮತದಾರರ ಗುರುತಿನ ಚೀಟಿ ಇಲ್ಲದ 18 ವರ್ಷ ಮೇಲ್ಪಟ್ಟವರು ಶಿಬಿರದಲ್ಲಿ ಭಾಗವಹಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಹಕ್ಕು ಚಲಾಯಿಸಬೇಕು ಎಂದು ಅವರು ಒತ್ತಿ ಹೇಳಿದರು.

ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ಅಧ್ಯಕ್ಷ ಅಝೀಝುರ್ ರಹ್ಮಾನ್ ರುಕ್ನುದ್ದೀನ್ ನದ್ವಿ ಮಾತನಾಡಿ, ಎಲ್ಲಾ ಕ್ರೀಡಾ ಕೇಂದ್ರಗಳ ಸದಸ್ಯರು ತಮ್ಮ ತಮ್ಮ ಪ್ರದೇಶದಲ್ಲಿನ ನಿವಾಸಿಗಳು ಮತದಾರರ ಗುರುತಿನ ಚೀಟಿಯನ್ನು ಹೊಂದಿದ್ದು ಮತದಾರರ ಪಟ್ಟಿಯಲ್ಲಿ ದಾಖಲಾಗಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X