ಭಟ್ಕಳ: ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಉಚಿತ ಗುಣಮಟ್ಟದ ಶಿಕ್ಷಣದ ಸದುಪಯೋಗಕ್ಕೆ ತಹಸೀಲ್ದಾರ್ ಕರೆ

ಭಟ್ಕಳ: "ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ವಿದ್ಯಾರ್ಥಿಗಳು ಮತ್ತು ಪಾಲಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು" ಎಂದು ಭಟ್ಕಳ ತಹಸೀಲ್ದಾರ್ ನಾಗರಾಜ ಕೋಳ ಶೆಟ್ಟಿ ಕರೆ ನೀಡಿದರು.
ಭಟ್ಕಳ ತಾಲೂಕಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ನೂತನವಾಗಿ ಪ್ರಾರಂಭಗೊಂಡ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯಂದು ದ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪಟ್ಯಪುಸ್ತಕಗಳನ್ನು ವಿತರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯ ಶಂಸುದ್ದಿನ್ ಶೇಖ್ ಪ್ರಸ್ತಾವಿಕವಾಗಿ ಮಾತನಾಡಿ, ಶಾಲೆಯ ಗುರಿ ಮತ್ತು ಕಾರ್ಯಚಟುವಟಿಕೆಗಳ ಬಗ್ಗೆ ಸವಿವರವಾಗಿ ತಿಳಿಸಿ ಅತಿಥಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಪುರಸಭಾಧ್ಯಕ್ಷ ಅಲ್ತಾಫ್ ಖರೂರಿ, ಸದಸ್ಯರಾದ ಅಬ್ದುಲ್ ರವೂಫ್ ನಾಯ್ತೆ, ಇಂಶಾದ್, 15 ಅಂಶ ಜಿಲ್ಲಾ ಸಮಿತಿ ಸದಸ್ಯ ಆದಂ ಪಣಂಬೂರ್, ಇತ್ತಿಹಾದ್ ಮುಸ್ಲಿಂ ಜಮಾತ್‌ನ ಅಧ್ಯಕ್ಷ ಮುಹಮ್ಮದ್ ಶಮೂನ್ ಭಟ್ಕಳ ಮುಸ್ಲಿಮ್ ಯುತ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಮುಬಶೀರ್ ಹಲ್ಲಾರೆ ಮತ್ತು ಪಾಲಕರು ಭಾಗವಹಿಸಿದ್ದರು.





