Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಎ.18ರಂದು ವಕ್ಫ್ ತಿದ್ದುಪಡಿ...

ಭಟ್ಕಳ: ಎ.18ರಂದು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಂತಿಯುತ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 April 2025 2:30 PM IST
share
ಭಟ್ಕಳ: ಎ.18ರಂದು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಂತಿಯುತ ಪ್ರತಿಭಟನೆ

ಭಟ್ಕಳ : ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎ.18 ರಂದು ಶುಕ್ರವಾರ ಭಟ್ಕಳದ ಸಮಸ್ತ ಮುಸ್ಲಿಮರ ಪರವಾಗಿ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಭಟ್ಕಳ ಶುಕ್ರವಾರದ ಪ್ರಾರ್ಥನೆಯ ಬಳಿಕ ತಾಲೂಕು ಆಡಳಿತ ಸೌಧದ ಬಳಿ ಸೇರಬೇಕೆಂದು ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮತ್ತು ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ಕರೆ ನೀಡಿದ್ದಾರೆ.

ನಮ್ಮ ಈ ಹೋರಾಟ ಯಾವುದೇ ಜಾತಿ, ಧರ್ಮ, ಸಮುದಾಯ, ಅಥವಾ ರಾಜಕೀಯ ಪಕ್ಷದ ವಿರುದ್ಧ ಅಲ್ಲ. ಇದು ಕೇವಲ ಒಂದು ಕಾನೂನಿನ ವಿರುದ್ಧದ ಹೋರಾಟ. ನಾವು ಭಾರತದ ಸಂವಿಧಾನದ ಮೇಲೆ ನಂಬಿಕೆ ಇಟ್ಟಿದ್ದೇವೆ. ಈ ದೇಶದ ಶಾಂತಿ, ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಕಾಪಾಡಲು ನಾವು ಬದ್ಧರಾಗಿದ್ದೇವೆ ಎಂದು ಇನಾಯತುಲ್ಲಾ ಶಾಬಂದ್ರಿ ತಿಳಿಸಿದ್ದಾರೆ.

ಪ್ರಧಾನ ಕಾಯದರ್ಶಿ ಎಂ.ಜೆ. ಅಬ್ದುಲ್ ರಖೀಬ್ ಮಾತನಾಡಿ, ಈ ಕಾನೂನು ಮುಸ್ಲಿಂ ಸಮುದಾಯದ ಧಾರ್ಮಿಕ ಆಸ್ತಿಗಳನ್ನು, ಅಂದರೆ ಮಸೀದಿ, ಮದರಸಾ, ಖಬರಸ್ತಾನ್‌ಗಳನ್ನು ಕಾಪಾಡುವ ಬದಲು, ಅವುಗಳನ್ನು ಸರ್ಕಾರದ ನಿಯಂತ್ರಣಕ್ಕೆ ತೆಗೆದುಕೊಳ್ಳುವಂತೆ ಮಾಡುತ್ತದೆ. ಇದರಿಂದ ನಮ್ಮ ಧಾರ್ಮಿಕ ಸ್ಥಳಗಳು ಅಪಾಯದಲ್ಲಿವೆ. ನಮ್ಮ ಹಲವು ಐತಿಹಾಸಿಕ ಮಸೀದಿಗಳನ್ನು ಪುರಾತತ್ವ ಇಲಾಖೆಯ ಅಡಿಯಲ್ಲಿ ತರಬಹುದು. ಇದರಿಂದ ಈ ಮಸೀದಿಗಳ ಮೇಲಿನ ನಮ್ಮ ಹಕ್ಕು ಕಳೆದುಕೊಳ್ಳಬಹುದು. ಈ ಕಾನೂನು ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ.

ಸಂವಿಧಾನವು ಎಲ್ಲರಿಗೂ ಧಾರ್ಮಿಕ ಸ್ವಾತಂತ್ರ್ಯ ಮತ್ತು ಆಸ್ತಿ ಹಕ್ಕನ್ನು ಕೊಡುತ್ತದೆ. ಆದರೆ, ಈ ಕಾನೂನು ಮುಸ್ಲಿಂ ಸಮುದಾಯದ ಈ ಹಕ್ಕುಗಳನ್ನು ಕಸಿದುಕೊಳ್ಳುವಂತಿದೆ. ಈ ಕಾನೂನು ಕೇವಲ ಮುಸ್ಲಿಂ ಸಮುದಾಯದ ಆಸ್ತಿಗಳ ಮೇಲೆ ಕೇಂದ್ರೀಕರಿಸಿದೆ. ಇತರ ಧರ್ಮಗಳ ಧಾರ್ಮಿಕ ಸಂಸ್ಥೆಗಳಿಗೆ ಇಂತಹ ಕಟ್ಟುನಿಟ್ಟಿನ ನಿಯಮಗಳಿಲ್ಲ. ಇದು ಸಂವಿಧಾನದ ಸಮಾನತೆಯ ತತ್ವಕ್ಕೆ ವಿರುದ್ಧವಾಗಿದೆ. ಶುಕ್ರವಾರ ನಡೆಯುವ ಪ್ರತಿಭಟನಾ ಸಭೆಗೆ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

ನಾವು ಈ ದೇಶದ ನಾಗರಿಕರಾಗಿ, ಸಂವಿಧಾನದ ರಕ್ಷಣೆಗಾಗಿ, ನಮ್ಮ ಧಾರ್ಮಿಕ ಹಕ್ಕುಗಳಿಗಾಗಿ ಶಾಂತಿಯುತವಾಗಿ ಹೋರಾಡುತ್ತಿದ್ದೇವೆ. ಈ ಕಾನೂನು ತೆಗೆದು ಹಾಕುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ. ಭಟ್ಕಳದ ಎಲ್ಲರೂ ನಮ್ಮ ಜೊತೆ ಕೈಜೋಡಿಸಿ, ಒಗ್ಗಟ್ಟಿನಿಂದ ಈ ಹೋರಾಟವನ್ನು ಯಶಸ್ವಿಗೊಳಿಸೋಣ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮೌಲಾನ ಯಾಸೀರ್ ಬರ್ಮಾವರ್ ನದ್ವಿ, ಇಕ್ಬಾಲ್ ಸಿಟಿ ಮೆಡಿಕಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X