Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಫೈನಾನ್ಸ್ ಹಣ ದುರ್ಬಳಕೆ ಪ್ರಕರಣ;...

ಭಟ್ಕಳ: ಫೈನಾನ್ಸ್ ಹಣ ದುರ್ಬಳಕೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ವಾರ್ತಾಭಾರತಿವಾರ್ತಾಭಾರತಿ23 Jun 2024 11:29 AM IST
share
ಭಟ್ಕಳ: ಫೈನಾನ್ಸ್ ಹಣ ದುರ್ಬಳಕೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಭಟ್ಕಳ: ಶ್ರೀರಾಮ್ ಫೈನಾನ್ಸ್ ನಲ್ಲಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಕುಂದಾಪುರದ ರಾಘವೇಂದ್ರ ರಾಜೀವ ಸ್ವಾಮಿ ಎಂದು ಗುರುತಿಸಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಹಾಗೂ ಮೂರನೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣದ ಹಿನ್ನೆಲೆ:

ಆರೋಪಿ ರಾಘವೇಂದ್ರ ರಾಜೀವ ಸ್ವಾಮಿಯು ಭಟ್ಕಳ ಶ್ರೀ ರಾಮ ಫೈನಾನ್ಸ್ ಶಾಖೆಯಲ್ಲಿ ಕೆಲಸ ಮಾಡುವ ಅವಧಿಯಲ್ಲಿ (ಜನವರಿ 1 ,2023 ರಿಂದ ಮೇ, 2 2024 ವೇಳೆ) ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಫೈನಾನ್ಸಿನಲ್ಲಿ ಸಾಲ ಪಡೆದ ಕೆಲವು ಸಾಲಗಾರರಿಗೆ ಸಂಬಂಧಿಸಿದ ವಾಹನಗಳ ಸಾಲವನ್ನು ಪೂರ್ತಿಯಾಗಿ ಚುಕ್ತಾಗೊಳಿಸಿದ್ದರು.

ಕಂಪೆನಿಯ ಹೈಪೋತಿಕೇಶನ್ ಸರ್ಟಿಫಿಕೇಟನ್ನು ತಯಾರಿಸಿ ಕಂಪನಿಯ ಸೀಲ್ ಬಳಸಿ ಅದಕ್ಕೆ ಮುಖ್ಯ ಕಚೇರಿಯಿಂದ ಸಹಿ ಪಡೆಯದೆ ಅವರೇ ಅದಕ್ಕೆ ನಕಲಿ ಸಹಿ ಮಾಡಿ ಆರ್.ಟಿ. ಓ ದಲ್ಲಿ ನೀಡಿ ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಲು ಅನುಕೂಲ ಮಾಡಿಕೊಟ್ಟು ಕಂಪನಿಗೆ ಹಾಗೂ ಗ್ರಾಹಕರಿಗೆ ಮೋಸ ಮಾಡಿದ್ದಾರೆ.

ಕಂಪನಿಯಿಂದ ಪಡೆದ ಸಾಲ ಮರುಪಾವತಿ ಮಾಡದೇ ಇರುವ ಗ್ರಾಹಕರ ವಾಹನಗಳನ್ನು ಶ್ರೀರಾಮ ಫೈನಾನ್ಸನ ಮೇಲಾಧಿಕಾರಿಗಳ ಅನುಮೋದನೆಯನ್ನು ಪಡೆಯದೇ ತಮ್ಮ ವಶಕ್ಕೆ ಪಡೆದು, ವಾಹನಗಳನ್ನು ಕಂಪನಿಯ ನಿಯಮಾವಳಿಗಳನ್ನು ಪಾಲಿಸದೇ ಮಾರಾಟ ಮಾಡಿ ಬಂದ ಹಣವನ್ನು ತಮ್ಮ ಸ್ವಂತ ಖರ್ಚಿಗೆ ಬಳಸಿಕೊಂಡು ಕಂಪನಿಗೆ ಹಾಗೂ ಗ್ರಾಹಕರಿಗೆ ಮೋಸ, ವಂಚನೆ, ನಂಬಿಕೆ ದ್ರೋಹವನ್ನು ಎಸಗಿದ್ದಾರೆ.

ಆರೋಪಿಯು ಕಳೆದ ಕೆಲವು ತಿಂಗಳುಗಳಿಂದ ಲೋನ್ ಸೆಟ್ಲ್ ಮೆಂಟ್ ಮಾಡುತ್ತೇವೆ ಎಂದು ಗ್ರಾಹಕರಿಂದ ಹಣ ಪಡೆದು ಕಂಪನಿಗೆ ಪಾವತಿಸದೇ, ಸಾಲದ ಕಂತುಗಳನ್ನು ಸಾಲದ ಖಾತೆಗೂ ಜಮಾ ಮಾಡದೇ ತಮ್ಮ ಸ್ವಂತ ಖರ್ಚಿಗೆ ದುರ್ಬಳಕೆ ಮಾಡಿಕೊಂಡು ಕಂಪನಿಗೆ ವಂಚಿಸಿ, ನಂಬಿಕೆ ದ್ರೋಹ ಮಾಡಿ ಕರ್ತವ್ಯ ಲೋಪ ಎಸಗಿ ಒಟ್ಟೂ 89,79,524 ರೂ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಶ್ರೀರಾಮ್ ಪೈನಾನ್ಸ್ ಜಿ.ಪಿ‌. ಹೋಲ್ಡರ್ ನವೀನ ಪೂಜಾರಿ ದೂರು ದಾಖಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X