Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ| ಸ್ಥಳೀಯ ವ್ಯಾಪಾರಗಳಿಗೆ ಸಬಲೀಕರಣದ...

ಭಟ್ಕಳ| ಸ್ಥಳೀಯ ವ್ಯಾಪಾರಗಳಿಗೆ ಸಬಲೀಕರಣದ ನೂತನ ವೇದಿಕೆ: ಅರ್ಷದ್ ಮೊಹತೆಶಮ್

INF ಟ್ರೇಡ್ ಎಕ್ಸ್‌ಪೋ 2025

ವಾರ್ತಾಭಾರತಿವಾರ್ತಾಭಾರತಿ8 Dec 2024 4:48 PM IST
share
ಭಟ್ಕಳ| ಸ್ಥಳೀಯ ವ್ಯಾಪಾರಗಳಿಗೆ ಸಬಲೀಕರಣದ ನೂತನ ವೇದಿಕೆ: ಅರ್ಷದ್ ಮೊಹತೆಶಮ್

ಭಟ್ಕಳ: ಇಂಡಿಯನ್ ನವಾಯತ್ ಫೋರಂ (INF) ವತಿಯಿಂದ ಜ.11ರಿಂದ ಐದು ದಿನಗಳ ಕಾಲ ಭಟ್ಕಳದ NH 66, ಐಸ್ ಫ್ಯಾಕ್ಟರಿ ಹತ್ತಿರ, ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಎದುರು ʼINF ಟ್ರೇಡ್ ಎಕ್ಸ್‌ಪೋ 2025ʼ ಆಯೋಜಿಸಲಾಗಿದೆ ಎಂದು ಇಂಡಿಯನ್ ನವಾಯತ್ ಫೋರಂ ಅಧ್ಯಕ್ಷ ಅರ್ಷದ್ ಮೊಹತೆಶಮ್ ತಿಳಿಸಿದ್ದಾರೆ.

ಅವರು ರವಿವಾರ ಕಾಜಿಯ ಬಂಗ್ಲೆ ಎದುರು ಇರುವ INF ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಈ ಎಕ್ಸ್‌ಪೋ ವ್ಯಾಪಾರಸ್ಥರು ಮತ್ತು ಉದ್ಯಮಿಗಳಿಗೆ ಬೆಳವಣಿಗೆಯ ಹೊಸ ಮಾರ್ಗಗಳನ್ನು ತೆರೆಯುವ ಉದ್ದೇಶ ಹೊಂದಿದ್ದು, ಸ್ಥಳೀಯ ವ್ಯಾಪಾರಿಗಳಿಗೆ ಸಬಲೀಕರಣದ ನೂತನ ವೇದಿಕೆ ಒದಗಿಸಿಕೊಡಲಿದೆ ಎಂದರು.

2022ರಲ್ಲಿ ಜರುಗಿದ INF ಟ್ರೇಡ್ ಎಕ್ಸ್‌ಪೋ ಸ್ಥಳೀಯ ವ್ಯಾಪಾರಿಗಳಿಗೆ ಬಲವರ್ದನೆ ನೀಡಿತ್ತು. 180ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸಿದ್ದ ಈ ಎಕ್ಸ್‌ಪೋ ವ್ಯಾಪಾರ ಕ್ಷೇತ್ರಕ್ಕೆ ಮಹತ್ತರ ಒತ್ತಾಸೆಯಾಗಿತ್ತು. 2025ರ ಈ ಎಕ್ಸ್ ಪೋ ಮತ್ತಷ್ಟು ದೊಡ್ಡದಾಗಿ, ಉತ್ತಮವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಲಿದ್ದು, 200ಕ್ಕೂ ಹೆಚ್ಚು ಸ್ಟಾಲ್‌ಗಳು ಹಾಗೂ 20,000ಕ್ಕೂ ಅಧಿಕ ಸಂದರ್ಶಕರನ್ನು ಸೆಳೆಯಲಿದೆ ಎಂದು ಅವರು ಮಾಹಿತಿ ನೀಡಿದರು.

2025ರ ಎಕ್ಸ್‌ಪೋ ದಲ್ಲಿ ಕಾರ್ಯಾಗಾರಗಳು ಮತ್ತು ನೆಟ್‌ವರ್ಕಿಂಗ್ ಅವಕಾಶಗಳಾದ ವ್ಯಾಪಾರ ನೋಂದಣಿ ಮಾರ್ಗದರ್ಶನ, ಆಹಾರ ಉದ್ಯಮದ ನಿಯಮಾವಳಿ ಮತ್ತು ಪ್ಯಾಕೇಜಿಂಗ್ ತಂತ್ರಗಳು, ಇ-ಕಾಮರ್ಸ್ ಪ್ಲಾಟ್‌ ಫಾರ್ಮ್‌ಗಳ ಮೇಲೆ ವ್ಯಾಪಾರ ಪ್ರಾರಂಭದ ಸಲಹೆಗಳು, ದಾಸ್ತಾನು ನಿರ್ವಹಣೆ ಮತ್ತು ಬಿಲ್ಲಿಂಗ್ ತಂತ್ರಜ್ಞಾನಗಳು ಒಳಗೊಂಡಿದ್ದು ಈ ಕಾರ್ಯಾಗಾರಗಳನ್ನು ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ತಜ್ಞರು ನಡೆಸಿಕೊಡಲಿದ್ದಾರೆ.

ಸ್ಟಾಲ್‌ಗಳನ್ನು ಕಾಯ್ದಿರಿಸಲು ನೋಂದಣಿ ಫಾರ್ಮ್ ಮೂಲಕ ರಿಜಿಸ್ಟರ್ ಮಾಡಬಹುದು ಅಥವಾ INF ಕಚೇರಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ: 7022020454 / 9353151493 / 9741803006 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭ INF ಕಾರ್ಯದರ್ಶಿ ಮತ್ತು INF ಟ್ರೇಡ್ ಎಕ್ಸ್‌ಪೋ 2025 ರ ಸಂಚಾಲಕ ಮಾಜ್ ಜುಕಾಕು, ಕಾರ್ಯಕಾರಿ ಸದಸ್ಯರಾದ ಫೈಜಾನ್ ಭರ್ಮಾವರ್, ಅಫ್ತಾಬ್ ಕೋಲಾ, ಇಮ್ತಿಯಾಝ್ ದಾಮ್ಡಾ, ತನ್ವೀರ್ ಮೋಟಿಯಾ, ಖಮರ್ ಉಝ್ಝಮಾ ಮೋಟಿಯಾ, ಹ್ಯಾರಿಸ್ ಶಾಬಂದರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X