ಭಟ್ಕಳ | ನಿಯಮ ಉಲ್ಲಂಘಿಸಿ ತಂಬಾಕು ಮಾರಾಟ: ಅಂಗಡಿಗಳಿಗೆ ದಂಡ

ಭಟ್ಕಳ: ಪಟ್ಟಣ ಹಾಗೂ ಬಂದರು ರೋಡ್ ಪ್ರದೇಶದಲ್ಲಿರುವ ಶಾಲೆಗಳು ಮತ್ತು ಕಾಲೇಜುಗಳ 100 ಮೀ. ವ್ಯಾಪ್ತಿಯೊಳಗೆ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಜಂಟಿ ದಾಳಿ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿದ್ದ 14 ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ದಾಳಿಯ ವೇಳೆ ಕೆಲವು ಅಂಗಡಿಗಳು ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವುದು ಪತ್ತೆಯಾಗಿರುವುದರಿಂದ ಒಟ್ಟು 3,100 ರೂ. ದಂಡವನ್ನು ವಿಧಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್ ಆರ್., ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಮು, ಸಮಾಜ ಕಲ್ಯಾಣ ಇಲಾಖೆಯ ಗೀತಾ ಹೆಗಡೆ, ತಹಶೀಲ್ದಾರ್ ಕಚೇರಿಯ ಶೀರಸ್ತೇದಾರ್ ಪ್ರವೀಣ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿ ಭಾಗವಹಿಸಿದ್ದರು.
Next Story





