Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಎಸ್‌ಐಆರ್ ಪ್ರಕ್ರಿಯೆ ವಿಳಂಬ...

ಭಟ್ಕಳ: ಎಸ್‌ಐಆರ್ ಪ್ರಕ್ರಿಯೆ ವಿಳಂಬ ಮಾಡದಂತೆ ಮತದಾರರಿಗೆ ತಂಝೀಮ್ ಮನವಿ

ವಾರ್ತಾಭಾರತಿವಾರ್ತಾಭಾರತಿ23 July 2026 9:47 PM IST
share
ಭಟ್ಕಳ: ಎಸ್‌ಐಆರ್ ಪ್ರಕ್ರಿಯೆ ವಿಳಂಬ ಮಾಡದಂತೆ ಮತದಾರರಿಗೆ ತಂಝೀಮ್ ಮನವಿ

ಭಟ್ಕಳ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್)–2026ರ ಪ್ರಕ್ರಿಯೆಯನ್ನು ಅರ್ಹ ಮತದಾರರು ವಿಳಂಬ ಮಾಡದೆ ಶೀಘ್ರ ಪೂರ್ಣಗೊಳಿಸಿ, ಎನ್ಯುಮರೇಷನ್ ಫಾರ್ಮ್‌ಗಳನ್ನು ಆದಷ್ಟು ಬೇಗ ಸಲ್ಲಿಸಬೇಕು ಎಂದು ಮಜ್ಲಿಸ್-ಎ-ಇಸ್ಲಾಹ್ ವ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮನವಿ ಮಾಡಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಸ್ಪಷ್ಟೀಕರಣದಂತೆ ಎನ್ಯುಮರೇಷನ್ ಫಾರ್ಮ್ ಸಲ್ಲಿಸುವ ಸಂದರ್ಭದಲ್ಲಿ 2002ರ ಸ್ವಂತ ಅಥವಾ ಪೋಷಕರ ವಿವರಗಳನ್ನು ಭರ್ತಿ ಮಾಡುವುದು ಕಡ್ಡಾಯವಲ್ಲ. ಹೀಗಾಗಿ ಆ ಮಾಹಿತಿ ಇಲ್ಲ ಎಂಬ ಕಾರಣಕ್ಕೆ ಫಾರ್ಮ್ ಸಲ್ಲಿಕೆಯನ್ನು ಮುಂದೂಡಬಾರದು ಎಂದು ತಿಳಿಸಿದರು.

ಇನ್ನೂ ಎನ್ಯುಮರೇಷನ್ ಫಾರ್ಮ್ ಪಡೆಯದ ಮತದಾರರು ತಮ್ಮ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅವರನ್ನು ಸಂಪರ್ಕಿಸಿ ಫಾರ್ಮ್ ಪಡೆಯಬೇಕು. ಈಗಾಗಲೇ ಫಾರ್ಮ್ ಪಡೆದಿರುವವರು ಅದನ್ನು ಸರಿಯಾಗಿ ಭರ್ತಿ ಮಾಡಿ ಬಿಎಲ್‌ಒ ಅಥವಾ ಬೂತ್ ಮಟ್ಟದ ಏಜೆಂಟ್ (ಬಿಎಲ್‌ಎ) ಅವರಿಗೆ ಶೀಘ್ರ ಸಲ್ಲಿಸಬೇಕು ಎಂದು ಅವರು ಕೋರಿದರು.

ತಂಝೀಮ್ ಎಸ್‌ಐಆರ್ ಸಮಿತಿ ಅಧ್ಯಕ್ಷ ಮುಬಶ್ಶಿರ್ ಹಳ್ಳಾರೆ ಮಾತನಾಡಿ, ಬಂದರ್ ರಸ್ತೆಯಲ್ಲಿರುವ ತಂಝೀಮ್ ಎಸ್‌ಐಆರ್ ಸಹಾಯ ಕೇಂದ್ರ ಕಳೆದ ಒಂದು ತಿಂಗಳಿನಿಂದ ಸಾರ್ವಜನಿಕರಿಗೆ ಉಚಿತ ಸೇವೆ ನೀಡುತ್ತಿದ್ದು, ಜುಲೈ 26ರಿಂದ ಹೊಸ ಮತದಾರರ ನೋಂದಣಿಗೆ ಸಂಬಂಧಿಸಿದ ಫಾರ್ಮ್–6 ಸೇವೆಯನ್ನೂ ಆರಂಭಿಸಲಾಗುವುದು ಎಂದು ತಿಳಿಸಿದರು.

ಸಹಾಯ ಕೇಂದ್ರದಲ್ಲಿ ಎಸ್‌ಐಆರ್ ಎನ್ಯುಮರೇಷನ್ ಫಾರ್ಮ್ ಭರ್ತಿ, ಫಾರ್ಮ್–6 ನೋಂದಣಿ, ಅಗತ್ಯ ದಾಖಲೆ ಗಳ ಕುರಿತು ಮಾರ್ಗದರ್ಶನ ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಕೆ ಸೇರಿದಂತೆ ವಿವಿಧ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಅವರು ಮನವಿ ಮಾಡಿದರು.

'ಲಾಠಿಚಾರ್ಜ್' ಖಂಡನೆ

ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಶಾಂತಿಯುತ ಪ್ರತಿಭಟನಾಕಾರರ ಮೇಲೆ ನಡೆದಿರುವುದಾಗಿ ಆರೋಪಿಸಲಾದ ಲಾಠಿಚಾರ್ಜ್ ಅನ್ನು ತಂಝೀಮ್ ಪ್ರಧಾನ ಕಾರ್ಯದರ್ಶಿ ಅಜೀಜುರ್ ರಹ್ಮಾನ್ ರುಕ್ನುದ್ದೀನ್ ಖಂಡಿಸಿದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ಗೌರವಿಸಬೇಕು. ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅವರೊಂದಿಗೆ ಸಂವಾದ ನಡೆಸಿ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಂಝೀಮ್ ಉಪಾಧ್ಯಕ್ಷ ಕಮರ್ ಸದಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X