Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. Bhatkal | ಡಾ.ಐ.ಆರ್.ಭಟ್ ಅವರಿಗೆ...

Bhatkal | ಡಾ.ಐ.ಆರ್.ಭಟ್ ಅವರಿಗೆ ಕಸಾಪದಿಂದ ನುಡಿನಮನ

ವಾರ್ತಾಭಾರತಿವಾರ್ತಾಭಾರತಿ29 Sept 2026 3:27 PM IST
share
Bhatkal | ಡಾ.ಐ.ಆರ್.ಭಟ್ ಅವರಿಗೆ ಕಸಾಪದಿಂದ ನುಡಿನಮನ

ಭಟ್ಕಳ: ತಾಲೂಕಿನ ಮುರುಡೇಶ್ವರದ ಜನಾನುರಾಗಿ ವೈದ್ಯರು, ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಆಜೀವ ಸದಸ್ಯರು ಹಾಗೂ ‘ಯಕ್ಷರಕ್ಷೆ’ ಮೂಲಕ ಯಕ್ಷಗಾನ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದ ಇತ್ತೀಚೆಗೆ ನಿಧನರಾದ ಡಾ. ಐ.ಆರ್. ಭಟ್ ಅವರಿಗೆ ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮುರುಡೇಶ್ವರದ ಮಾನಾಸ್ಮೃತಿಯಲ್ಲಿ ನುಡಿನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್.ಎಸ್. ಕಾಮತ್ ಮಾತನಾಡಿ, ಡಾ. ಐ.ಆರ್. ಭಟ್ ಅವರೊಂದಿಗಿನ 60 ವರ್ಷಗಳ ನಂಟನ್ನು ಹಂಚಿಕೊಂಡು, ಅವರು ಸಲ್ಲಿಸಿದ ಮಾನವೀಯ ಹಾಗೂ ಸಾಮಾಜಿಕ ಸೇವೆಗಳನ್ನು ಸ್ಮರಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಪಿ.ಆರ್.ನಾಯ್ಕ ಮಾತನಾಡಿ, ‘ವೈದ್ಯೋ ನಾರಾಯಣೋ ಹರಿಃ’ ಎಂಬ ಮಾತಿಗೆ ಅನುರೂಪವಾಗಿ ಬದುಕಿದ ಡಾ. ಐ.ಆರ್. ಭಟ್ ಅವರು ‘ಯಕ್ಷರಕ್ಷೆ’ ಮೂಲಕ ಕಲೆ ಹಾಗೂ ಕಲಾವಿದರನ್ನು ಬೆಳೆಸಲು ನೀಡಿದ ಕೊಡುಗೆಯನ್ನು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಅಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ, ಡಾ. ಐ.ಆರ್. ಭಟ್ ಅವರ ಬದುಕು ನಮ್ಮ ನಂತರ ಜನರು ನಮ್ಮನ್ನು ಹೇಗೆ ಸ್ಮರಿಸಿಕೊಳ್ಳಬೇಕು ಎಂಬುದಕ್ಕೆ ಸಾಕ್ಷಿಯಾಗಿದೆ. ವೈದ್ಯರಾಗಿ ಜನರಿಗೆ ಮಾನವೀಯ ನೆಲೆಯಲ್ಲಿ ಸಲ್ಲಿಸಿದ ಸೇವೆ ಹಾಗೂ ‘ಯಕ್ಷರಕ್ಷೆ’ ಮೂಲಕ ಈ ನೆಲದ ಎಲ್ಲ ಕಲಾಪ್ರಕಾರಗಳಿಗೆ ಮತ್ತು ಕಲಾವಿದರಿಗೆ ನೀಡಿದ ಪ್ರೋತ್ಸಾಹದ ಮಹತ್ಕಾರ್ಯವು ಅವರ ಹೆಸರನ್ನು ಚಿರಸ್ಥಾಯಿಯಾಗಿಸಿದೆ ಎಂದರು.

ಮಾನಾಸುತ ಶಂಭು ಹೆಗಡೆ ಮಾತನಾಡಿ, ತಮ್ಮ ತಂದೆ ಮಾಳ್ಕೊಡು ನಾರಾಯಣ ಹೆಗಡೆ ಅವರ ಸಾಹಿತ್ಯಿಕ ರಚನೆಗಳಿಗೆ ಹಾಗೂ ಅವರ ಕೃತಿ ಬಿಡುಗಡೆ ಕಾರ್ಯಕ್ರಮಗಳಿಗೆ ಡಾ. ಐ.ಆರ್. ಭಟ್ ಅವರು ನೀಡಿದ ಸಹಕಾರವನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಂ.ವಿ. ಹೆಗಡೆ, ಮಾನಾಸುತ, ಗಣಪತಿ ಕಾಯ್ಕಿಣಿ, ನೇತ್ರಾವತಿ ಆಚಾರ್ಯ, ಪೂರ್ಣಿಮಾ ಕರ್ಕಿಕರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್ ಕೆರೆಕಟ್ಟೆ, ಮಂಜುನಾಥ್ ಹೆಗಡೆ, ಯೋಗೇಶ್ ಹೆಗಡೆ, ಕೆ.ಬಿ. ಹೆಗಡೆ, ಶಿವಕುಮಾರ್ ಹಿಚ್ಕಡ್, ಗಣೇಶ್ ಯಾಜಿ ಮುಂತಾದವರು ಡಾ. ಐ.ಆರ್. ಭಟ್ ಅವರ ವಿವಿಧ ಕ್ಷೇತ್ರಗಳ ಕೊಡುಗೆಗಳನ್ನು ಸ್ಮರಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಒಂದು ನಿಮಿಷ ಮೌನಾಚರಣೆ ಸಲ್ಲಿಸಿ, ಡಾ. ಐ.ಆರ್. ಭಟ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಗಣಪತಿ ಕಾಯ್ಕಿಣಿ ಯಕ್ಷಗಾನದ ಹಾಡಿನ ಮೂಲಕ ಪ್ರಾರ್ಥನೆ ಸಲ್ಲಿಸಿದರು. ಕಸಾಪ ಗೌರವ ಕೋಶಾಧ್ಯಕ್ಷ ಹಾಗೂ ಸಾಹಿತಿ ಶ್ರೀಧರ ಶೇಟ್ ಕಾರ್ಯಕ್ರಮ ನಿರೂಪಿಸಿ, ಡಾ. ಐ.ಆರ್. ಭಟ್ ಅವರ ಬಹುಮುಖ ವ್ಯಕ್ತಿತ್ವದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಉದಯ ನಾಯಕ, ಮಾರುತಿ ನಾಯ್ಕ, ಪ್ರಕಾಶ್ ಭಟ್, ಪರಮೇಶ್ವರ್ ಎನ್. ಭಟ್, ಶಂಕರ್ ಭಟ್ರಹಿತ್ತಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

KasapaBhatkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X